ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಯಡಿಯೂರಪ್ಪ ಅಕ್ರಣ ಗಣಿಗಾರಿಕೆಯ ರೂವಾರಿ: ಪರಮೇಶ್ವರ್ (Parameshwar | KPCC | Congress | Yeddyurappa | Illegal mining | Supreme)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ರಾಜ್ಯದಲ್ಲಿನ ಅವ್ಯಾಹತ ಅಕ್ರಮ ಗಣಿಗಾರಿಕೆಯ ರೂವಾರಿ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಗಂಭೀರವಾಗಿ ಆರೋಪಿಸಿದರು.

ಸುಪ್ರೀಂಕೋರ್ಟ್ ಸಿಇಸಿ ವರದಿ ಆಧರಿಸಿ 19 ಗಣಿ ಕಂಪನಿಗಳನ್ನು ರದ್ದುಗೊಳಿಸಿ ಆದೇಶ ನೀಡಿದರೂ ಈವರೆಗೂ ಯಾವೊಬ್ಬ ಅಧಿಕಾರಿಯನ್ನಾಗಲಿ, ಗಣಿ ಮಾಲೀಕರನ್ನಾಗಲಿ ಜೈಲಿಗೆ ಕಳುಹಿಸಿದೆ, ಕಾನೂನು ಕ್ರಮ ತೆಗೆದುಕೊಳ್ಳದೆ ಇರುವ ಸಿಎಂ ಯಡಿಯೂರಪ್ಪನವರು ಅಕ್ರಮ ಗಣಿಗಾರಿಕೆಗೆ ಆಶ್ರಯದಾತರಾಗಿದ್ದಾರೆಂದು ಸುದ್ದಿಗೋಷ್ಠಿಯಲ್ಲಿ ಆಪಾದಿಸಿದರು.

ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದವರನ್ನು ಜೈಲಿಗೆ ಕಳುಹಿಸುವುದು ಬಿಟ್ಟು ಅದನ್ನು ಸಮರ್ಥಿಸಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಅಕ್ರಮ ಗಣಿಗಾರಿಕೆಗೆ ಅನುಮತಿ ಈ ಹಿಂದೆ ನೀಡಿತ್ತು ಎಂದು ಹೇಳುವ ಮುಖ್ಯಮಂತ್ರಿಗಳು ಅಕ್ರಮ ಗಣಿಗಾರಿಕೆಯನ್ನು ಪೋಷಿಸಲು ಹೊರಟಿರುವುದು ಖೇದಕರ ಎಂದು ವಾಗ್ದಾಳಿ ನಡೆಸಿದರು.

ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವವರು ಯಾವುದೇ ಪಕ್ಷದವರಾಗಿರಲಿ ಅವರ ಮೇಲೆ ಮುಖ್ಯಮಂತ್ರಿಗಳು ಈಗಲಾದರೂ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು.
ಇವನ್ನೂ ಓದಿ