ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಯಡಿಯೂರಪ್ಪನನ್ನು ಹುಚ್ಚಾಸ್ಪತ್ರೆಗೆ ಸೇರಿಸಿ: ಪರಮೇಶ್ವರ್ ಕಿಡಿ (BJP | Yeddyurappa | Siddaramaiah | Congress | KPCC | Parameshwar)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ಬಿಟ್ಟು ತೊಲಗುವವರೆಗೂ ಕಾಂಗ್ರೆಸ್ ಹೋರಾಟ ಮುಂದುವರಿಯುತ್ತದೆ ಎಂದು ಘೋಷಿಸಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಯಡಿಯೂರಪ್ಪ ಅವರು ಮಾನಸಿಕವಾಗಿ ಅಸ್ವಸ್ಥರಾಗಿದ್ದು ಅವರನ್ನು ಆಸ್ಪತ್ರೆಗೆ ಸೇರಿಸಿ ಎಂದು ಕಿಡಿಕಾರಿದರು.

ಸೋಮವಾರ ನಗರದ ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಆಡಳಿತಾರೂಢ ಬಿಜೆಪಿ ಸರಕಾರದ ಭ್ರಷ್ಟಾಚಾರದ ವಿರುದ್ಧದ ರಾಜಭವನ ಚಲೋ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮುಖ್ಯಮಂತ್ರಿಗಳ ಭ್ರಷ್ಟಾಚಾರದ ಪಟ್ಟಿ ಬೆಳೆಯುತ್ತಲೇ ಇದೆ. ರಾಜ್ಯ ಸರಕಾರದ ಭ್ರಷ್ಟಾಚಾರ, ಸ್ವಜನಪಕ್ಷಪಾತ ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ. ಹಾಗಾಗಿ ಕಾಂಗ್ರೆಸ್ ಚಳವಳಿ ಇಲ್ಲಿಗೆ ಮುಗಿಯುವುದಿಲ್ಲ. ಭ್ರಷ್ಟ ಸರಕಾರ ತೊಲಗುವವರೆಗೂ ಹೋರಾಟ ಮುಂದುವರಿಯುತ್ತದೆ ಎಂದು ಹೇಳಿದರು.

ಕಾಂಗ್ರೆಸ್ ಹೋರಾಟ ನೋಡಿ ಸಿಎಂಗೆ ತಲೆ ಕೆಟ್ಟು ಹೋಗಿದೆ. ಭ್ರಷ್ಟ ಸರಕಾರ ಕಿತ್ತೊಗೆಯಲು ಕಾಂಗ್ರೆಸ್ ಈ ಚಳವಳಿ ಹಮ್ಮಿಕೊಂಡಿದೆ ಎಂದು ಈ ಸಂದರ್ಭದಲ್ಲಿ ವಿವರಿಸಿದರು.

ಭ್ರಷ್ಟ ಸರಕಾರದ ವಿರುದ್ಧದ ಚಳವಳಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಮಧುಸೂದನ್ ಮಿಸ್ತ್ರಿ, ಮಾಜಿ ಮುಖ್ಯಮಂತ್ರಿ ಧರಂಸಿಂಗ್, ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ವಿಪಕ್ಷ ನಾಯಕಿ ಮೋಟಮ್ಮ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು.
ಇವನ್ನೂ ಓದಿ