ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಎಚ್‌ಡಿಕೆಗೆ ಮುಖಭಂಗ, ಸೋತ ಅಭ್ಯರ್ಥಿ ಜೆಡಿಎಸ್‌ಗೆ ಗುಡ್‌ಬೈ (Kumaraswamy | BJP | Congress | JDS | By poll | Deve gowda)
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಭಂಗ ಅನುಭವಿಸಿದೆ. ಚನ್ನಪಟ್ಟಣದಲ್ಲಿ ಜೆಡಿಎಸ್ ಗೆಲುವು ಖಚಿತ ಎಂದೇ ಹೇಳುತ್ತಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಗೆ ಇದೊಂದು ದೊಡ್ಡ ಹಿನ್ನಡೆಯಾದಂತಾಗಿದೆ.

ರಾಜ್ಯರಾಜಕಾರಣದಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ಭ್ರಷ್ಟಾಚಾರ, ಸ್ವಜನಪಕ್ಷಪಾತದ ಬಗ್ಗೆ ಹುಯಿಲೆಬ್ಬಿಸುತ್ತಿದ್ದ ಜೆಡಿಎಸ್ ಉಪ ಚುನಾವಣೆಯಲ್ಲಿ ಬಿಜೆಪಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದರು. ಆದರೆ ಮತದಾರ ಮತ್ತೆ ಬಿಜೆಪಿಗೆ ಆಶೀರ್ವಾದ ನೀಡುವ ಮೂಲಕ ಕಾಂಗ್ರೆಸ್ ಮತ್ತು ಜೆಡಿಎಸ್ ಅನ್ನು ತಿರಸ್ಕರಿಸಿದ್ದಾರೆ.

ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯ ಸಂದರ್ಭದಲ್ಲಿಯೂ ಸಾಕಷ್ಟು ನಾಟಕೀಯ ಬೆಳವಣಿಗೆ ನಡೆದಿತ್ತು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯೇ ಅಖಾಡಕ್ಕಿಳಿಯಬೇಕು ಎಂದು ಚನ್ನಪಟ್ಟಣದ ಜೆಡಿಎಸ್ ಕಾರ್ಯಕರ್ತರು ಪಟ್ಟು ಹಿಡಿದಿದ್ದರು. ಆ ಸಂದರ್ಭದಲ್ಲಿ ಕುಮಾರಸ್ವಾಮಿ ತಾನೇ ಸ್ಪರ್ಧಿಸುವುದಾಗಿ ಘೋಷಿಸಿದ್ದರು, ನಂತರ ದೇವೇಗೌಡರ ಅಪಸ್ವರದಿಂದಾಗಿ ತಮ್ಮ ನಿರ್ಧಾರ ಬದಲಿಸಿದ್ದರು.

ಆ ನೆಲೆಯಲ್ಲಿ ಚನ್ನಪಟ್ಟಣ ಕ್ಷೇತ್ರಕ್ಕೆ ಜೆಡಿಎಸ್ ಕಾರ್ಯಕರ್ತ ಸಿಂ.ಲಿಂ.ನಾಗರಾಜ್ ಅವರನ್ನು ಅಖಾಡಕ್ಕಿಳಿಸಿ, ಇದು ನನ್ನ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು ಬಿಜೆಪಿಗೆ ಪಾಠ ಕಲಿಸಿ ಜೆಡಿಎಸ್ ಅಭ್ಯರ್ಥಿಯನ್ನೇ ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದರು. ಆದರೆ ಇದೀಗ ಆ ಎಲ್ಲಾ ನಿರೀಕ್ಷೆ ಹುಸಿಯಾಗಿದ್ದು, ಜೆಡಿಎಸ್ ಅಭ್ಯರ್ಥಿ ಸಿಂ.ಲಿಂ. ನಾಗರಾಜ್ ಸೋಲಿಗೆ ಶರಣಾಗಿದ್ದು, ಬಿಜೆಪಿಯ ಯೋಗೇಶ್ವರ್ ಗೆಲುವಿನ ನಗು ಬೀರಿದ್ದಾರೆ. ಅದೇ ರೀತಿ ಬಂಗಾರಪೇಟೆ ಮತ್ತು ಜಗಳೂರಿನಲ್ಲಿಯೂ ಜೆಡಿಎಸ್ ಹೀನಾಯ ಸೋಲು ಕಂಡಿದೆ.

ಸಿ.ವೆಂಕಟೇಶಪ್ಪ ಜೆಡಿಎಸ್‌ಗೆ ವಿದಾಯ:
ಬಂಗಾರಪೇಟೆಯ ಪರಾಜಿತ ಅಭ್ಯರ್ಥಿ, ಮಾಜಿ ಶಾಸಕ ಸಿ.ವೆಂಕಟೇಶಪ್ಪ ಜೆಡಿಎಸ್‌ಗೆ ವಿದಾಯ ಹೇಳುವುದಾಗಿ ತಿಳಿಸಿದ್ದಾರೆ. ಬಂಗಾರಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ನಾರಾಯಣಸ್ವಾಮಿ ಭರ್ಜರಿ ಗೆಲುವು ಸಾಧಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸ್ಥಳೀಯ ನಾಯಕರ ಅಸಹಕಾರದಿಂದಾಗಿ ಸೋಲು ಅನುಭವಿಸುವಂತಾಗಿದೆ. ಹಾಗಾಗಿ ತಾನು ಜೆಡಿಎಸ್ ಪಕ್ಷ ತ್ಯಜಿಸುವುದಾಗಿ ಹೇಳಿದರು.
ಇವನ್ನೂ ಓದಿ