ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕೂಡ್ಲೆ ಸರಕಾರ ವಜಾಗೊಳಿಸಿ; ಗವರ್ನರ್‌ಗೆ ಕಾಂಗ್ರೆಸ್ (Supreme Court | BJP | JDS | K G Bopaiah | Siddaramaiah | KPCC)
11 ಬಿಜೆಪಿ ಮತ್ತು ಐವರು ಪಕ್ಷೇತರ ಶಾಸಕರನ್ನು ಸ್ಪೀಕರ್ ಕೆ.ಜಿ.ಬೋಪಯ್ಯ ಅವರು ಅನರ್ಹಗೊಳಿಸಿರುವ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ ಸರಕಾರ ಬಹುಮತ ಕಳೆದುಕೊಂಡಿದೆ. ಆ ಹಿನ್ನೆಲೆಯಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರವನ್ನು ರಾಜ್ಯಪಾಲರವಜಾಗೊಳಿಸಬೇಕೆಂದು ಕಾಂಗ್ರೆಸ್ ಮತ್ತು ಜೆಡಿಎಸ್ ಒತ್ತಾಯಿಸಿದೆ.

ಸ್ಪೀಕರ್ ಕೆ.ಜಿ.ಬೋಪಯ್ಯ ಅವರು 16 ಮಂದಿ ಶಾಸಕರನ್ನು ಅನರ್ಹಗೊಳಿಸಿದ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದ್ದರಿಂದ ಸಾಂವಿಧಾನಿಕ ಬಿಕ್ಕಟ್ಟು ತಲೆದೋರಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ ತಿಳಿಸಿದರು.

ಅಲ್ಲದೇ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು 356ನೇ ವಿಧಿಯನ್ವಯ ರಾಜ್ಯ ಸರಕಾರವನ್ನು ವಜಾಗೊಳಿಸಲು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಬೇಕು ಎಂದು ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡರು.

ಕಳೆದ ಅಕ್ಟೋಬರ್ 6ರಂದು ಆಡಳಿತಾರೂಢ ಬಿಜೆಪಿ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿರುವುದಾಗಿ ಕೆಲವು ಬಿಜೆಪಿ ಶಾಸಕರು ರಾಜ್ಯಪಾಲರಿಗೆ ಪತ್ರವನ್ನು ಸಲ್ಲಿಸಿದ್ದಾರೆ. ಹಾಗಾಗಿ ಬಿಜೆಪಿ ಸರಕಾರ ಬಹುಮತ ಕಳೆದುಕೊಂಡಿದ್ದು, ಅದು ಆಡಳಿತದಲ್ಲಿ ಮುಂದುವರಿಯಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ಪರಮೇಶ್ವರ್ ಪ್ರತಿಪಾದಿಸಿದರು.

ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಮೇ 16ರಿಂದ ವಿಧಾನಮಂಡಲ ಅಧಿವೇಶನ ನಡೆಸುವುದಾಗಿ ಬಿಜೆಪಿ ಹೇಳಿದೆ. ಇದೊಂದು ರಾಜಕೀಯ ದುರುದ್ದೇಶದಿಂದ ಕೂಡಿದ್ದು,ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು ಈ ಅಧಿವೇಶನ ಕರೆದಿರುವುದಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದರು.

ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಮೇ 16ರಂದು ಸರಕಾರ ನಡೆಸಲು ಉದ್ದೇಶಿಸಿರುವ ಅಧಿವೇಶನಕ್ಕೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಹೇಳಿದರು. ಅದೇ ರೀತಿ ಸ್ಪೀಕರ್ ಸರಕಾರದ ಕೈಗೊಂಬೆಯಂತೆ ವರ್ತಿಸಿ, 16 ಮಂದಿ ಶಾಸಕರನ್ನು ಅನರ್ಹಗೊಳಿಸಿರುವುದು ಸುಪ್ರೀಂಕೋರ್ಟ್ ತೀರ್ಪಿನಿಂದ ಸಾಬೀತಾಗಿದೆ. ಅವರು ಕೂಡ ಕೂಡಲೇ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದರು.
ಇವನ್ನೂ ಓದಿ