ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಹಂಸರಾಜ ಅಲ್ಲ ಕಂಸರಾಜ: ಜನಾರ್ದನ ರೆಡ್ಡಿ ಲೇವಡಿ (Bharadwaj | Governor | BJP | Yeddyurappa | Janardana Reddy)
ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಸರಕಾರಕ್ಕೆ ಅನಗತ್ಯವಾಗಿ ಕಿರಿಕಿರಿ ಮಾಡುತ್ತ ಕಂಸರಾಜನಂತೆ ವರ್ತಿಸುತ್ತಿದ್ದಾರೆ ಎಂದು ಪ್ರವಾಸೋದ್ಯಮ ಸಚಿವ ಜಿ.ಜನಾರ್ದನ ರೆಡ್ಡಿ ಲೇವಡಿ ಮಾಡಿದರು.

ಸೋಮವಾರ ಸರಕಾರದ ಉಳಿವಿಗಾಗಿ ಕನಕದುರ್ಗಮ್ಮದೇವಿಗೆ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಹಂಸರಾಜ್ ರಾಜ್ಯಪಾಲರಾಗಿ ರಾಜ್ಯಕ್ಕೆ ಬಂದಾಗಿನಿಂದ ಸರಕಾರಕ್ಕೆ ಒಂದಲ್ಲ ಒಂದು ರೀತಿ ಕಿರಿಕಿರಿ ಮಾಡುತ್ತಲೇ ಇದ್ದಾರೆ. ಇದರ ಹಿಂದೆ ಕಾಂಗ್ರೆಸ್ ಪಕ್ಷದ ಕೈವಾಡವೂ ಇದೆ ಎಂದು ಆರೋಪಿಸಿದರು.

ಅನರ್ಹಗೊಂಡಿದ್ದ ಶಾಸಕರಿಗೆ ಸುಪ್ರೀಂಕೋರ್ಟ್‌ನಲ್ಲಿ ನ್ಯಾಯ ದೊರೆತಿದ್ದು, ಅವರು ಬಿಜೆಪಿ ಸರಕಾರವನ್ನು ಬೆಂಬಲಿಸಿದ್ದಾರೆ. ಇದನ್ನು ಸಹಿಸದ ಕಾಂಗ್ರೆಸ್ ರಾಜ್ಯಪಾಲರ ಮೂಲಕ ಸರಕಾರವನ್ನು ಕೆಡವಲು ಪ್ರಯತ್ನಿಸುತ್ತಿದೆ ಎಂದು ಟೀಕಿಸಿದರು.

ಯಡಿಯೂರಪ್ಪ ನೇತೃತ್ವದ ಸರಕಾರವನ್ನು ಉರುಳಿಸುವ ಕೆಲಸಕ್ಕೆ ಮುಂದಾದರೆ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ವಿರೋಧ ಪಕ್ಷದ ಸ್ಥಾನವೂ ಸಿಗದಂಥ ದುರ್ಗತಿ ಬರಲಿದೆ ಎಂದು ವಾಗ್ದಾಳಿ ನಡೆಸಿದರು. ಕರ್ನಾಟಕ ಸರಕಾರಕ್ಕೆ ಪದೇ, ಪದೇ ತೊಂದರೆ ಮಾಡಿದರೆ ಕೇರಳ, ತಮಿಳುನಾಡಿನಲ್ಲಿ ಕಾಂಗ್ರೆಸ್‌ಗೆ ಆದ ಗತಿಯೇ ರಾಜ್ಯದಲ್ಲಿ ಆಗುತ್ತದೆ. ಆಂಧ್ರಪ್ರದೇಶದಲ್ಲಿ ಜಗನ್ ಮೋಹನ್ ರೆಡ್ಡಿಯಿಂದಾಗಿ ಕಾಂಗ್ರೆಸ್ ಠೇವಣಿ ಕಳೆದುಕೊಂಡಿದೆ ಎಂದರು.

ಹಂಸರಾಜ್ ಅವರು ಕಂಸರಾಜನಂತೆ ವರ್ತಿಸುವ ಮೂಲಕ ಜನವಿರೋಧಿ ನೀತಿ ತಳೆದಿದ್ದಾರೆ. ಬಿಜೆಪಿ ಸರಕಾರಕ್ಕೆ ಜನಾದೇಶವಿದೆ. ಆದರೆ ರಾಜ್ಯಪಾಲರು ದುರುದ್ದೇಶದಿಂದ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಶಿಫಾರಸು ಮಾಡಿದ್ದಾರೆ. ಇದನ್ನು ನಾವು ಯಾವುದೇ ಕಾರಣಕ್ಕೂ ಒಪ್ಪಲ್ಲ. ಅದಕ್ಕಾಗಿ ದೆಹಲಿಗೆ ತೆರಳಿ ಪ್ರಧಾನಿ, ರಾಷ್ಟ್ರಪತಿಯನ್ನು ಭೇಟಿಯಾಗಿ ನಮ್ಮ ಬಲಾಬಲ ಪ್ರದರ್ಶಿಸುವುದಾಗಿ ಹೇಳಿದರು.
ಇವನ್ನೂ ಓದಿ