ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » 'ರಾಷ್ಟ್ರಪತಿ ಆಡಳಿತ ಹೇರದಿದ್ರೆ ಕೇಂದ್ರದ ವಿರುದ್ಧವೇ ಹೋರಾಟ' (BJP | Karnataka Crisis | Congress | Jafar Shariff | Governor | UPA)
ಸಂವಿಧಾನ ವಿರೋಧಿಯಾಗಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರಕಾರವನ್ನು ಕೂಡಲೇ ವಜಾಗೊಳಿಸಬೇಕು. ಅಲ್ಲದೇ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ರಾಜ್ಯಪಾಲರ ವರದಿಗೆ ಕೇಂದ್ರ ಕೂಡಲೇ ಅಂಕಿತ ಹಾಕಬೇಕು. ಇಲ್ಲದಿದ್ದರೆ ಕೇಂದ್ರದ ವಿರುದ್ಧವೇ ಹೋರಾಟ ಮಾಡಬೇಕಾಗುತ್ತದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಜಾಫರ್ ಶರೀಫ್ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ನಾಲ್ಕು ಹೈವೇ ಬಂದ್ ನಡೆಸಿ ಪ್ರತಿಭಟನೆ ಕೈಗೊಂಡ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರ ಸರಕಾರ ಮೀನಮೇಷ ಎಣಿಸುವ ಮೂಲಕ ತಪ್ಪು ಮಾಡುತ್ತಿದೆ. ಒಂದು ವೇಳೆ ಕೇಂದ್ರ ರಾಷ್ಟ್ರಪತಿ ಆಡಳಿತ ಹೇರದಿದ್ದರೆ ಕೇಂದ್ರದ ವಿರುದ್ಧವೂ ಹೋರಾಟ ಅನಿವಾರ್ಯ ಎಂದರು.

ಒಂದು ವೇಳೆ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರದಿದ್ದರೆ ಅಣ್ಣಾ ಹಜಾರೆ ಸತ್ಯಾಗ್ರಹಕ್ಕೆ ಬೆಲೆ ಎಲ್ಲಿಂದ ಬರುತ್ತದೆ. ಭ್ರಷ್ಟರೇ ಆಡಳಿತ ನಡೆಸುವುದಾದರೆ ನಾವು ಯಾಕೆ ಇಲ್ಲಿರಬೇಕು ಎಂದು ಖಾರವಾಗಿ ಪ್ರಶ್ನಿಸಿದ ಜಾಫರ್ ಶರೀಫ್, ರಾಜ್ಯಪಾಲರ ಕ್ರಮ ಸರಿ ಇದೆ. ಕೇಂದ್ರ ಸರಕಾರ ನಿರ್ಧಾರ ಕೈಗೊಳ್ಳಲು ವಿಳಂಬ ಮಾಡುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮತ್ತೊಂದೆಡೆ ವಿಧಾನಪರಿಷತ್ ವಿಪಕ್ಷ ನಾಯಕಿ ಮೋಟಮ್ಮ ಕೂಡ, ಕೇಂದ್ರ ಸರಕಾರ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ರಾಜ್ಯಪಾಲರ ಶಿಫಾರಸನ್ನು ಅಂಗೀಕರಿಸದಿದ್ದರೆ ತಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ. ಅದೇ ರೀತಿ ಕಾಂಗ್ರೆಸ್‌ನ ಎಲ್ಲಾ ಶಾಸಕರು, ವಿಧಾನಪರಿಷತ್ ಸದಸ್ಯರು ರಾಜೀನಾಮೆ ಕೊಡುವುದಾಗಿಯೂ ತಿಳಿಸಿದ್ದಾರೆ. ಆದರೆ ಈ ಬಗ್ಗೆ ಪಕ್ಷದ ವರಿಷ್ಠರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದರು.
ಇವನ್ನೂ ಓದಿ