ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಿಎಂ-ಗವರ್ನರ್ ಮುಖಾಮುಖಿ; ಕೈಕುಲುಕಿ ಮಾತುಕತೆ (BJP | Karnataka Crisis | Congress | Yeddyurappa | Bharadwaj | JDS)
ಆಡಳಿತಾರೂಢ ಬಿಜೆಪಿ ಸರಕಾರ ಮತ್ತು ಗವರ್ನರ್ ನಡುವೆ ಜಿದ್ದಾಜಿದ್ದಿಯ ಜಂಗೀಕುಸ್ತಿ, ಆರೋಪಗಳ ಸುರಿಮಳೆಗೈಯುತ್ತಿರುವ ನಡುವೆಯೇ ಬುಧವಾರ ಕರ್ನಾಟಕ ಲೋಕಸೇವಾ ಆಯೋಗದ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ರಾಜ್ಯಪಾಲ ಹಂಜರಾಜ್ ಮುಖಾಮುಖಿಯಾಗಿ ಉಭಯಕುಶಲೋಪರಿ ವಿಚಾರಿಸಿಕೊಂಡು ಅಚ್ಚರಿಹುಟ್ಟಿಸಿದರು.

11 ಮಂದಿ ಬಿಜೆಪಿ ಮತ್ತು ಐವರು ಪಕ್ಷೇತರ ಶಾಸಕರ ಅನರ್ಹತೆಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದ ಬೆನ್ನಲ್ಲೇ, ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಕೇಂದ್ರಕ್ಕೆ ಶಿಫಾರಸು ಮಾಡಿದ್ದರು. ಹಾಗಾಗಿ ಕಳೆದ ನಾಲ್ಕೈದು ದಿನಗಳಿಂದ ರಾಜ್ಯರಾಜಕಾರಣದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದ್ದು, ಆ ಸ್ಥಿತಿ ಇನ್ನೂ ಮುಂದುವರಿದಿದೆ.

ರಾಜ್ಯಪಾಲರ ಕ್ರಮದ ವಿರುದ್ಧ ಮುಖ್ಯಮಂತ್ರಿ ಸೇರಿದಂತೆ ಬಿಜೆಪಿ ಮುಖಂಡರು ತೀವ್ರ ವಾಗ್ದಾಳಿ ನಡೆಸಿದ್ದರು. ಆದರೆ ಇಂದು ಬೆಳಿಗ್ಗೆ ಕೆಪಿಎಸ್‌ಸಿ ವಜ್ರಮಹೋತ್ಸವ ಕಾರ್ಯಕ್ರಮದ ಒಂದೇ ವೇದಿಕೆಯಲ್ಲಿ ಕಡುವೈರಿಗಳೆಂದೇ ಬಿಂಬಿಸಲ್ಪಟ್ಟಿರುವ ಮುಖ್ಯಮಂತ್ರಿ ಮತ್ತು ರಾಜ್ಯಪಾಲರು ಏನು ನಡೆದೇ ಇಲ್ಲವೆಂಬಂತೆ ಪರಸ್ಪರ ಕೈಕುಲುಕಿ ಮಾತುಕತೆಯಲ್ಲಿ ತೊಡಗಿದ್ದು ಕುತೂಹಲಕ್ಕೆ ಕಾರಣವಾಯಿತು.

ವೇದಿಕೆಯಲ್ಲಿ ಅಕ್ಕ-ಪಕ್ಕದಲ್ಲಿಯೇ ಕುಳಿತಿದ್ದ ಮುಖ್ಯಮಂತ್ರಿ ಮತ್ತು ರಾಜ್ಯಪಾಲರು ಕೆಲವು ನಿಮಿಷಗಳ ಕಾಲ ಗುಸು, ಗುಸು ಮಾತನಾಡಿಕೊಂಡರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರಾಜ್ಯಪಾಲರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು. ನಂತರ ಇಬ್ಬರು ಒಟ್ಟಾಗಿ ವಜ್ರಮಹೋತ್ಸವ ಕಾರ್ಯಕ್ರಮವನ್ನು ದೀಪ ಬೆಳಗಿಸಿ ನಗುಮುಖದಿಂದಲೇ ಉದ್ಘಾಟಿಸಿದರು.

ಸಿಎಂ ಮೇಲೆ ನನಗೆ ದ್ವೇಷವಿಲ್ಲ-ಗವರ್ನರ
ಉದ್ಘಾಟನೆಯ ನಂತರ ಭಾಷಣ ಮಾಡಿದ ರಾಜ್ಯಪಾಲ ಹಂಸರಾಜ್ ಭಾರದ್ವಾಜ್, ನಾನು ನನ್ನ ಜೀವನದಲ್ಲಿ ಎಂದೂ ಪಕ್ಷಪಾತ ಮಾಡಿಲ್ಲ. ದೇಶದಲ್ಲೇ ಕರ್ನಾಟಕ ಅತ್ಯತ್ತಮ ರಾಜ್ಯವಾಗಿದ್ದು, ವಿಜ್ಞಾನ ಕ್ಷೇತ್ರದಲ್ಲಿ ರಾಜ್ಯ ಮಹತ್ವದ ಸಾಧನೆ ಮಾಡಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಕಷ್ಟಪಟ್ಟು ದುಡಿಯುತ್ತಿದ್ದಾರೆ ಎಂದು ಶ್ಲಾಘಿಸಿದರು.

ರಾಜ್ಯದ ಅಭಿವೃದ್ಧಿಗೆ ಹಲವು ಸಿಎಂಗಳ ಕೊಡುಗೆ ಅಪಾರವಾಗಿದೆ. ಆ ನಿಟ್ಟಿನಲ್ಲಿ ಯಡಿಯೂರಪ್ಪ ಕೂಡ ದಿನಕ್ಕೆ 16-17 ಗಂಟೆ ದುಡಿಯುತ್ತಾರೆ. ನನಗೆ ವೈಯಕ್ತಿಕವಾಗಿ ಸಿಎಂ ಮೇಲೆ ದ್ವೇಷವಿಲ್ಲ. ನಾನು ಎಲ್ಲರ ಸ್ನೇಹಿತ. ಅಷ್ಟೇ ಅಲ್ಲ ಸಂವಿಧಾನಬದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂದರು.

ಯಡಿಯೂರಪ್ಪ ಸರಕಾರಕ್ಕೆ ಸಂಪೂರ್ಣ ಬಹುಮತವಿದೆ. ಎಸ್.ಆರ್.ಬೊಮ್ಮಾಯಿ ಪ್ರಕರಣ ಒಂದು ಕಾರಣ ಅಷ್ಟೇ. ಸಂವಿಧಾನದ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸುವಾಗ ನಿಷ್ಪಕ್ಷಪಾತದಿಂದ ವರ್ತಿಸಬೇಕಾಗುತ್ತದೆ ಎಂದು ಹೇಳಿದರು.
ಇವನ್ನೂ ಓದಿ