ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » 3 ವರ್ಷ-ಬಿಜೆಪಿ ಸರಕಾರ ರಾಜ್ಯದ ಪಾಲಿಗೆ ಶಾಪ: ಕಾಂಗ್ರೆಸ್ (Congress | JDS | KPCC | Parameshwar | Yeddyurappa | BJP | 3 Years)
ಜನರ ತೆರಿಗೆ ಹಣವನ್ನು ಬೇಕಾಬಿಟ್ಟಿ ಪೋಲು ಮಾಡಿ ಬಿಜೆಪಿ ಸರಕಾರ ಮೂರು ವರ್ಷಗಳ ಆಡಳಿತ ಪೂರೈಸಿದೆ ಎಂದು ಆರೋಪಿಸಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಬಿಜೆಪಿ ಸರಕಾರ ರಾಜ್ಯದ ಪಾಲಿಗೆ ಶಾಪವಾಗಿ ಪರಿಣಮಿಸಿದೆ ಎಂದು ವಾಗ್ದಾಳಿ ನಡೆಸಿದರು.

ಭ್ರಷ್ಟಾಚಾರ, ಸ್ವಜನಪಕ್ಷಪಾತ, ಆಪರೇಷನ್ ಕಮಲ ನಡೆಸಿ ಸಂವಿಧಾನ ವಿರೋಧಿಯಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದಾರೆ. ಅಲ್ಲದೇ ಜನತೆಗೆ ಅಭಿವೃದ್ಧಿ ಆಸೆ ತೋರಿಸುತ್ತಾ ರಾಷ್ಟ್ರದ ಆಸ್ತಿಯನ್ನು ಲೂಟಿ ಮಾಡುತ್ತಿದ್ದಾರೆ ಎಂದು ಅವರು ಪತ್ರಿಕಾ (ಮೇ 30ಕ್ಕೆ ಬಿಜೆಪಿ ಸರಕಾರ ಅಧಿಕಾರದ ಗದ್ದುಗೆಗೆ ಏರಿ ಮೂರು ವರ್ಷ ಕಳೆದಿದೆ) ಹೇಳಿಕೆಯಲ್ಲಿ ಸರಕಾರದ ಕಾರ್ಯವೈಖರಿಯನ್ನು ಟೀಕಿಸಿದ್ದಾರೆ.

ಪ್ರತಿಯೊಂದಕ್ಕೂ ಉತ್ಸವ ನಡೆಸುತ್ತಾ ತೆರಿಗೆ ಹಣ ಪೋಲು ಮಾಡುತ್ತಿರುವ ಯಡಿಯೂರಪ್ಪ ಅವರು ರಾಜ್ಯವನ್ನು ಆರ್ಥಿಕವಾಗಿ ದಿವಾಳಿಯಂಚಿಗೆ ಕೊಂಡೊಯ್ದಿದ್ದಾರೆ ಎಂದು ದೂರಿದರು.

ಕಳೆದ ಮೂರು ವರ್ಷಗಳ ಅವಧಿಯಲ್ಲಿ ಆಡಳಿತಾರೂಢ ಬಿಜೆಪಿ ಸರಕಾರ ಒಳಜಗಳ, ಅಧಿಕಾರ ಉಳಿಸಿಕೊಳ್ಳಲು ಹೋರಾಟ ನಡೆಸಿದೆಯೇ ವಿನಾಃ ರಾಜ್ಯದ ಅಭಿವೃದ್ಧಿ ಬಗ್ಗೆ ಯಾವುದೇ ಲಕ್ಷ್ಯವಹಿಸಿಲ್ಲ. ಮುಖ್ಯಮಂತ್ರಿ ವಿರುದ್ಧ ಭ್ರಷ್ಟಾಚಾರದ ಆರೋಪವಿದ್ದರೂ ಕೂಡ ಬಿಜೆಪಿ ಹೈಕಮಾಂಡ್ ಅವರಿಗೆ ರಕ್ಷಣೆ ನೀಡುತ್ತಿದೆ ಎಂದು ಕಿಡಿಕಾರಿದರು.

ಅಧಿಕಾರದಲ್ಲಿ ಮುಂದುವರಿಯುವ ನಿಟ್ಟಿನಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷದ ಶಾಸಕರನ್ನು ಆಪರೇಶನ್ ಕಮಲದ ಮೂಲಕ ಸೆಳೆದು ಸಂವಿಧಾನ ವಿರೋಧಿಯಾಗಿ ನಡೆಕೊಂಡಿದ್ದಾರೆ. ತಮ್ಮ ಅನುಕೂಲತೆಗೆ ತಕ್ಕಂತೆ ಸ್ಪೀಕರ್ ಅವರ ಸ್ಥಾನವನ್ನೂ ಕಲುಷಿತಗೊಳಿಸಿದ ಕೀರ್ತಿ ಬಿಜೆಪಿಗೆ ಸಲ್ಲಬೇಕು ಎಂದು ವ್ಯಂಗ್ಯವಾಡಿದರು.
ಇವನ್ನೂ ಓದಿ