ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಾಬಾಗೆ ಹೋರಾಟ ನಡೆಸುವ ನೈತಿಕ ಹಕ್ಕಿಲ್ಲ: ಸಿದ್ದು ಕಿಡಿ (Siddaramaiah | BJP | Congress | Black money | Ram dev | Hunger strike)
ಕಪ್ಪು ಹಣ ವಾಪಸಾತಿ ಹಾಗೂ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಯೋಗ ಗುರು ಬಾಬಾ ರಾಮದೇವ್ ವಿರುದ್ಧ ಕಾಂಗ್ರೆಸ್ ಮುಖಂಡ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುವುದಾಗಿ ಘೋಷಿಸುವ ಬಾಬಾ ರಾಮದೇವ್ ಅವರೇ ಸ್ವತಃ ಕೋಟ್ಯಂತರ ರೂಪಾಯಿ ಆಸ್ತಿ ಹೊಂದಿದ್ದಾರೆ. ಈ ಆಸ್ತಿ ಎಲ್ಲಿಂದ ಬಂತು? ಹೇಗೆ ಬಂತು? ಎಂಬುದನ್ನು ಮೊದಲು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.

ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು,ರಾಮದೇವ್ ಅವರು ಆರ್ಎಸ್ಎಸ್ ಕೃಪಾಶಯದೊಂದಿಗೆ ಹೋರಾಟ ನಡೆಸಿ ಬಿಜೆಪಿಯನ್ನು ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಕೂರಿಸುವ ಸಂಚು ಇದಾಗಿದೆ ಎಂದು ಆರೋಪಿಸಿದರು.

ಯೋಗ ಗುರು ರಾಮದೇವ್ ಅವರಿಗೆ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುವ ಯಾವುದೇ ಹಕ್ಕಿಲ್ಲ ಎಂದ ಸಿದ್ದರಾಮಯ್ಯ, ರಾಮದೇವ್ ವಿರುದ್ಧ ಕೇಂದ್ರ ಸರಕಾರ ತೆಗೆದುಕೊಂಡ ನಿರ್ಧಾರ ಸಮಂಜಸವಾದದ್ದು ಎಂದು ಸಮಜಾಯಿಷಿ ನೀಡಿದರು.
ಇವನ್ನೂ ಓದಿ