ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಿಎಂಗೆ ತಾಕತ್ತಿದ್ದರೆ ಭ್ರಷ್ಟ ಕಾಂಗ್ರೆಸ್ಸಿಗರ ಹೆಸರು ಬಹಿರಂಗಪಡಿಸಲಿ: ಪರಮೇಶ್ವರ್ (Congress | Bjp | B.S Yediyurappa | G. Parameshwar | Jds | Corruption)
PR
ಭ್ರಷ್ಟಾಚಾರ, ಗಣಿಲೂಟಿಯಲ್ಲಿ ತೊಡಗಿದ ಕಾಂಗ್ರೆಸ್ ಮುಖಂಡರ ಹೆಸರುಗಳನ್ನು ಬಹಿರಂಗಗೊಳಿಸುವುದಾಗಿ ಕಳೆದ ಒಂದು ವರ್ಷದಿಂದ ಮುಖ್ಯಮಂತ್ರಿಗಳು ಹೇಳುತ್ತಾ ಬಂದಿದ್ದಾರೆ. ಅವರಿಗೆ ನಿಜವಾಗಲು ತಾಕತ್ತಿದ್ದರೆ ಹೆಸರಗಳನ್ನು ಬಹಿರಂಗಪಡಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸವಾಲೆಸೆದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣಿ ಸಂಪತ್ತು ಲೂಟಿ, ಭ್ರಷ್ಟಾಚಾರದಲ್ಲಿ ಒಂದು ವೇಳೆ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರೆ ಇಂದೇ ಪಟ್ಟಿ ಬಿಡುಗಡೆ ಮಾಡಲಿ. ತಪ್ಪಿತಸ್ಛರನ್ನು ಜೈಲಿಗೆ ಕಳುಹಿಸಲಿ. ಅದನ್ನು ಬಿಟ್ಟು ಬ್ಲ್ಯಾಕ್‌ಮೇಲ್ ಮಾಡುವಂತೆ ತಮ್ಮಲ್ಲಿ ಪಟ್ಟಿ ಇದೆ ಎನ್ನುವ ಹೇಳಿಕೆ ನೀಡುವುದು ಏಕೆ? ನಾವೇನು ತಡೆದಿಲ್ಲ. ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿಲ್ಲ ಎಂದು ಕಿಡಿಕಾರಿದರು.

ಕಾಂಗ್ರೆಸ್ ಪಕ್ಷದ ನಾಯಕರು ತಪ್ಪು ಮಾಡಿದ್ದಲ್ಲಿ ಕಾನೂನಿನ ಪ್ರಕಾರ ಶಿಕ್ಷೆ ಕೈಗೊಳ್ಳುವುದಕ್ಕೆ ನಮ್ಮ ಅಭ್ಯಂತರವಿಲ್ಲ . ಕಾಂಗ್ರೆಸ್ ಅಷ್ಟೆ ಅಲ್ಲ. ಬಿಜೆಪಿ, ಜೆಡಿಎಸ್ ಸೇರಿದಂತೆ ಯಾವುದೇ ಪಕ್ಷಗಳ ನಾಯಕರು ಇಂತಹ ಕೃತ್ಯಗಳಲ್ಲಿ ಭಾಗಿಯಾಗಿದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಿ ಎಂದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರೋಧ ಪಕ್ಷಗಳನ್ನು ಹೆದರಿಸಿ, ಬೆದರಿಸಿ ಬ್ಲ್ಯಾಕ್‌ಮೇಲ್ ತಂತ್ರ ಮಾಡಿ ತಮ್ಮ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಆದರೆ, ವಿರೋಧ ಪಕ್ಷಗಳು ಇಂತಹ ಗೊಡ್ಡು ಬೆದರಿಕೆಗಳಿಗೆ ಮಣಿಯುವುದಿಲ್ಲ ಎಂದು ಹೇಳಿದರು.
ಇವನ್ನೂ ಓದಿ