ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » 'ಕೈ'ಗೆ ಅಧಿಕಾರ ಸಿಗದಿದ್ರೆ ರಾಜಕೀಯ ಸನ್ಯಾಸ: ಸಿದ್ದು (Congress | BJP | Siddaramaiah | yeddyurappa | JDS)
WD
ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ನೂರಕ್ಕೆ,ನೂರಷ್ಟು ಕಾಂಗ್ರೆಸ್ ಅಧಿಕಾರದ ಗದ್ದುಗೆಗೆ ಏರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಕಾಂಗ್ರೆಸ್ ಮುಖಂಡ, ವಿಧಾನಸಭಾ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಒಂದು ವೇಳೆ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ದೊರೆಯದಿದ್ದಲ್ಲಿ ತಾನು ರಾಜಕೀಯ ಸನ್ಯಾಸ ತೆಗೆದುಕೊಳ್ಳುವುದಾಗಿ ಶಪಥ ಮಾಡಿದ್ದಾರೆ.

ಗುರುವಾರ ದಾವಣಗೆರೆಗೆ ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿನ ಆಡಳಿತಾರೂಢ ಬಿಜೆಪಿ ಸರಕಾರ ಹಣಬಲ ಮತ್ತು ತೋಳ್ಬಲದಿಂದ ಚುನಾವಣೆಯಲ್ಲಿ ಗೆಲುವು ಸಾಧಿಸಿ, ರಾಜ್ಯವನ್ನು ಲೂಟಿ ಮಾಡುತ್ತಿರುವುದಾಗಿ ಆರೋಪಿಸಿದರು.

ಆದರೆ ಬಿಜೆಪಿ ಸರಕಾರದ ಭ್ರಷ್ಟಾಚಾರ, ದುರಾಡಳಿತ, ಸ್ವಜನಪಕ್ಷಪಾತವನ್ನು ಜನರೇ ಕಣ್ಣಾರೆ ನೋಡುತ್ತಿದ್ದಾರೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ರಾಜ್ಯದ ಜನರೇ ಇವರಿಗೆ ಬುದ್ದಿ ಕಲಿಸುವುದು ಖಚಿತ ಎಂದ ಸಿದ್ದರಾಮಯ್ಯ, ಕಾಂಗ್ರೆಸ್ ಅಧಿಕಾರದ ಗದ್ದುಗೆಗೆ ಏರುವುದು ನೂರಕ್ಕೆ,ನೂರರಷ್ಟು ಸತ್ಯ ಎಂದು ಭವಿಷ್ಯ ನುಡಿದರು.

ಮೆದುಳಿಲ್ಲದ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಬಾಯಿಗೆ ಬಂದಂತೆ ಮಾತನಾಡುತ್ತಿರುವುದಾಗಿ ಕಿಡಿಕಾರಿದ ಅವರು, ತಾವು ಈಶ್ವರಪ್ಪ ಟೀಕೆಗಳಿಗೆಲ್ಲ ಉತ್ತರ ಕೊಡಲು ಹೋಗಲ್ಲ ಎಂದು ಹೇಳಿದರು.

ಸಿದ್ದು ಅವಕಾಶವಾದಿ ರಾಜಕಾರಣಿ-ಈಶ್ವರಪ್ಪ:
ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವಕಾಶವಾದಿ ರಾಜಕಾರಣಿ ಎಂದು ತಿರುಗೇಟು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ, ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಮಾಡುತ್ತದೆ ಎಂಬ ಒಂದೇ ಕಾರಣಕ್ಕಾಗಿ ಅವರು ಕಾಯುತ್ತಿರುವುದಾಗಿ ವ್ಯಂಗ್ಯವಾಡಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಎಸ್.ಎಂ.ಕೃಷ್ಣ, ದೇವೇಗೌಡ ಹಾಗೂ ಕುಮಾರಸ್ವಾಮಿಯನ್ನು ಜೈಲಿಗಟ್ಟುವುದಾಗಿ ಹೇಳಿದ್ದ ಸಿದ್ದರಾಮಯ್ಯ, ಇದೀಗ ಅದೇ ಕಾಂಗ್ರೆಸ್ ಪಕ್ಷದಲ್ಲಿ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಅಲ್ಲದೇ ಜೆಡಿಎಸ್ ಜತೆಯೂ ಉತ್ತಮ ಬಾಂಧವ್ಯ ಹೊಂದಿರುವುದಾಗಿ ದೂರಿದರು.
ಇವನ್ನೂ ಓದಿ