ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಆಣೆ-ಧಾರ್ಮಿಕ ಸ್ಥಳವನ್ನ ಅಪವಿತ್ರಗೊಳಿಸ್ಬೇಡಿ:ಪರಮೇಶ್ವರ್ (BJP | Congress | Parameshwara | Congress | Yeddyurappa | Kumaraswamy)
PR
ಮಾಧ್ಯಮಗಳ ಮೂಲಕ ಜಾಹೀರಾತು, ಪಂಥಾಹ್ವಾನ ನೀಡುವುದು ಮುಖ್ಯಮಂತ್ರಿಯಂತಹ ಜವಾಬ್ದಾರಿ ಹುದ್ದೆಯಲ್ಲಿರುವವರ ಘನತೆಗೆ ತಕ್ಕದ್ದಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಅವರ ರಾಜಕೀಯ ಜಂಗೀಕುಸ್ತಿ ವಿರುದ್ಧ ಕಿಡಿಕಾರಿದ್ದಾರೆ.

ಕಾಂಗ್ರೆಸ್ ನಡಿಗೆ, ಜನರ ಬಳಿಗೆ ಎಂಬ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ಆಡಳಿತಾರೂಢ ಬಿಜೆಪಿ ಅಭಿವೃದ್ಧಿ ಕೆಲಸಗಳನ್ನು ಮಾಡುವ ಬದಲು ಪತ್ರಿಕೆಗಳ ಮೂಲಕ ಸವಾಲುಗಳನ್ನು ಹಾಕುವುದು ಎಷ್ಟು ಸಮಂಜಸ ಎಂದು ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿ ಆರೋಪ ಮಾಡಿ ಹೇಳಿಕೆ ನೀಡಿದ್ದಾರೆ. ಅದಕ್ಕೆ ಬಿಜೆಪಿ ಮುಖಂಡರು ಪ್ರತಿಕ್ರಿಯೆ ನೀಡಿದ್ದರು. ಸ್ವತಃ ಮುಖ್ಯಮಂತ್ರಿಗಳೇ ಪತ್ರಿಕಾಗೋಷ್ಠಿ ಕರೆದು ವಿಷಯ ಸ್ಪಷ್ಟಪಡಿಸಬಹುದಿತ್ತು. ಅದನ್ನು ಬಿಟ್ಟು ಪತ್ರಿಕೆಗಳಿಗೆ ಜಾಹೀರಾತು ನೀಡಿ ಸವಾಲು ಹಾಕುವುದು ಆಣೆ, ಪ್ರಮಾಣಕ್ಕೆ ಬನ್ನಿ ಎನ್ನುವುದು ಮುಖ್ಯಮಂತ್ರಿ ಸ್ಥಾನಕ್ಕೆ ಘನತೆ ತರುವಂತಹದ್ದಲ್ಲ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಆಡಳಿತ ಪಕ್ಷವಾಗಿರುವ ಬಿಜೆಪಿ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಬೇಕಾಗಿದೆ. ಉತ್ತಮ ಆಡಳಿತ ನಡೆಸಲು ಜನ ಆದೇಶ ಕೊಟ್ಟಿದ್ದಾರೆ. ಅದನ್ನು ಬಿಟ್ಟು ಮುಖ್ಯಮಂತ್ರಿ ಯಡಿಯೂರಪ್ಪ ದೇವಾಲಯ, ಆಣೆ, ಪ್ರಮಾಣದಲ್ಲಿ ಕಾಲಹರಣ ಮಾಡುತ್ತಿದ್ದಾರೆ.

ಅನಾವಶ್ಯಕವಾಗಿ ಪ್ರಮಾಣ ಮಾಡೋಣ ಧರ್ಮಸ್ಥಳಕ್ಕೆ ಬನ್ನಿ,ಮಂಜುನಾಥನ ಸನ್ನಿಧಿಗೆ ಬನ್ನಿ ಎಂದು ಪಂಥಾಹ್ವಾನ ನೀಡುವ ಮೂಲಕ ಧಾರ್ಮಿಕ ಸ್ಥಳಗಳನ್ನೇಕೆ ಅಪವಿತ್ರಗೊಳಿಸುತ್ತೀರಿ ಎಂದು ಪರಮೇಶ್ವರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇವನ್ನೂ ಓದಿ