ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ವಿದ್ಯುತ್ ದರ ಏರಿಕೆ ಅನಿವಾರ್ಯ: ಶೋಭಾ ಕರಂದ್ಲಾಜೆ (Shobha karandlaje | Power | BJP | Yeddyurappa | Karnataka)
ರೈತರಿಗೆ ಉಚಿತ ವಿದ್ಯುತ್ ನೀಡಿಕೆ, ಕಲ್ಲಿದ್ದಲು ದರ ಏರಿಕೆಗಳಿಂದ ವಿದ್ಯುತ್ ಉತ್ಪಾದನಾ ವೆಚ್ಚ ಅಧಿಕವಾಗಿದ್ದು, ವಿದ್ಯುತ್ ದರ ಏರಿಕೆ ಅನಿವಾರ್ಯವಾಗಿದೆ ಎಂದು ಇಂಧನ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಎನ್‌ಟಿಪಿಸಿ ಜತೆ ಕರ್ನಾಟಕ ವಿದ್ಯುತ್ ಕಂಪನಿ 100 ಮೆಗಾವ್ಯಾಟ್ ಪವನ ವಿದ್ಯುತ್ ಖರೀದಿಸುವ ಒಪ್ಪಂದಕ್ಕೆ ಬುಧವಾರ ಸಹಿ ಹಾಕಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಯೂನಿಟ್‌ಗೆ 88 ಪೈಸೆ ವಿದ್ಯುತ್ ದರ ಏರಿಸುವಂತೆ ಎಲ್ಲ ಎಸ್ಕಾಂಗಳು ಕರ್ನಾಟಕ ರಾಜ್ಯ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎಂದರು.

ದರ ಏರಿಕೆ ನಿರ್ಧಾರ ಈಗ ಆಯೋಗದ ಕೈಯಲ್ಲಿದ್ದು, ಆಯೋಗ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದರು. ವಿದ್ಯುತ್ ಉತ್ಪಾದನಾ ದರದಲ್ಲಿ ಹೆಚ್ಚಳವಾಗಿರುವುದರಿಂದ ವಿದ್ಯುತ್ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಕಳೆದ ಬಾರಿ ಸಹ ಆಯೋಗ 22 ಪೈಸೆಯಷ್ಟು ಮಾತ್ರ ದರ ಹೆಚ್ಚಿಸಿತ್ತು ಎಂದು ತಿಳಿಸಿದರು.

ಕೇಂದ್ರ ಸರಕಾರ ರಾಜ್ಯದ ಮಹತ್ವಾಕಾಂಕ್ಷೆ ಯೋಜನೆಗಳಾದ ಛತ್ತೀಸ್‌ಗಢ ಮತ್ತು ಬಳ್ಳಾರಿಯ 4ನೇ ಹಂತದ ವಿದ್ಯುತ್ ಉತ್ಪಾದನಾ ಯೋಜನೆಗಳಿಗೆ ಕಲ್ಲಿದ್ದಲು ಪೂರೈಕೆ ಸಂಬಂಧ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಹಾಗಾಗಿ ಪರಿಸರ ಇಲಾಖೆ ಅನುಮತಿ ನೀಡದಿರುವುದರಿಂದ ಈ ಯೋಜನೆಗಳ ಕಾಮಗಾರಿಗಳು ಆರಂಭವಾಗುವುದಕ್ಕೆ ವಿಳಂಬವಾಗುತ್ತಿರುವುದಾಗಿ ಹೇಳಿದರು.
ಇವನ್ನೂ ಓದಿ