ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗಡಿಭಾಗದ ಕನ್ನಡ ಶಾಲೆಗಳನ್ನು ಮುಚ್ಚುವುದಿಲ್ಲ: ಸಿಎಂ (Yeddiyurappa | Vishweshwara hegade | School | Kannada)
PR
ರಾಜ್ಯದ ಗಡಿಭಾಗಗಳಲ್ಲಿರುವ ಕನ್ನಡ ಶಾಲೆಗಳನ್ನು ಮುಚ್ಚುವುದಿಲ್ಲ. ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಹಣ ಬಿಡುಗಡೆಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಶಾಲೆಗಾಗಿ ನಾವು-ನೀವು ಯೋಜನೆ ಕಾರ್ಯಕ್ರಮದಂಗವಾಗಿ ಶಾಲೆಗಳಿಗೆ ಬೇಟಿ ನೀಡಿದ ಅವರು, ತಿಂಗಳಲ್ಲಿ ಒಂದು ಬಾರಿ ಪೋಷಕರೊಂದಿಗೆ ಸಂವಾದ ನಡೆಸುವುದಾಗಿ ಭರವಸೆ ನೀಡಿದರು.

ಹೆಣ್ಣುಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡುವಂತೆ ಪೋಷಕರಿಗೆ ಮನವಿ ಮಾಡಿದ ಅವರು, ಶಾಲೆಗಳಲ್ಲಿ ಹೆಣ್ಣುಮಕ್ಕಳಿಗೆ ಅಗತ್ಯವಾಗಿರುವ ಶೌಚಾಲಯಗಳ ನಿರ್ಮಾಣಕ್ಕೆ ಯೋಜನೆಯನ್ನು ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಶಾಲಾ ಆವರಣದ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಆದೇಶಿಸಿದರು.

ಶಾಲೆಯಲ್ಲಿ ಸಸಿ ನೆಟ್ಟ ಮುಖ್ಯಮಂತ್ರಿಗಳು ತಮ್ಮ ಪರಿಸರ ಪ್ರೇಮವನ್ನು ತೋರಿದರು ಎಂದು ಶಿಕ್ಷಣ ಖಾತೆ ಸಚಿವ ವಿಶ್ವೇಶ್ವರ ಹೆಗ್ಡೆ ಹೇಳಿದ್ದಾರೆ
ಇವನ್ನೂ ಓದಿ