ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕೊನೆಗೂ ಯಡಿಯೂರಪ್ಪ ನಿಜಬಣ್ಣ ಬಯಲು: ಕುಮಾರಸ್ವಾಮಿ (BJP | Yeddyurappa | Congress | Kumaraswamy | Lokayuktha | Santhosh hegde)
PR
ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆಯವರಿಗೆ ಗಾಳ ಹಾಕಲು ಪ್ರಯತ್ನಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿಜಬಣ್ಣ ಬಯಲಾಗಿರುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಅಕ್ರಮ ಗಣಿಗಾರಿಕೆ ವರದಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ಹೆಸರನ್ನು ಕೈಬಿಡುವಂತೆ ಸಚಿವ ವಿ.ಎಸ್.ಆಚಾರ್ಯ, ಬಿಜೆಪಿ ಹಿರಿಯ ಮುಖಂಡರಾದ ಧನಂಜಯ್ ಕುಮಾರ್, ಎ.ಜಿ.ಕೊಡ್ಗಿ ಒತ್ತಡ ಹೇರಿರುವುದಾಗಿ ಸಂತೋಷ್ ಹೆಗ್ಡೆ ಖಾಸಗಿ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಬಹಿರಂಗಪಡಿಸಿರುವುದಾಗಿ ರಾಜ್ಯರಾಜಕಾರಣದಲ್ಲಿ ತೀವ್ರ ಸಂಚಲನಕ್ಕೆ ಎಡೆಮಾಡಿಕೊಟ್ಟಿದೆ.

ನ್ಯಾಯಮೂರ್ತಿಯವರ ಮೇಲೆಯೇ ಒತ್ತಡ ತಂತ್ರ ಹೇರಲು ಹೊರಟಿರುವ ಮುಖ್ಯಮಂತ್ರಿ ಮತ್ತು ಬಿಜೆಪಿ ನಡವಳಿಕೆ ಅತ್ಯಂತ ಹೀನ ಕೃತ್ಯ ಎಂದು ಕುಮಾರಸ್ವಾಮಿ ಪತ್ರಿಕಾ ಹೇಳಿಕೆಯಲ್ಲಿ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿಗಳ ಒತ್ತಡ ತಂತ್ರ ಗಾಬರಿ ಹುಟ್ಟಿಸುವಂತಹದ್ದು ಎಂದು ತಿಳಿಸಿದ್ದಾರೆ.

ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಎಲ್ಲಾ ರೀತಿಯ ಒತ್ತಡ ತಂತ್ರ ಅನುಸರಿಸುತ್ತಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಹಾಗಾಗಿ ಯಡಿಯೂರಪ್ಪನವರಿಗೆ ನೈತಿಕತೆ ಇದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಇಲ್ಲದಿದ್ದರೆ ಪಕ್ಷದ ಹೈಕಮಾಂಡ್ ಕಠಿಣ ನಿರ್ಧಾರ ಕೈಗೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ಇವನ್ನೂ ಓದಿ