ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕಾನೂನಿನಿಂದ ತಪ್ಪಿಸಿಕೊಳ್ಳಲು ಸಿಎಂಗೆ ಸಾಧ್ಯವಿಲ್ಲ: ಎಚ್‌ಡಿಕೆ (BJP | Yeddyurappa | Kumaraswamy | JDS | Lokayuktha | Governor)
PR
ರಾಜ್ಯದಲ್ಲಿ ಪ್ರವಾಹದಿಂದಾಗಿ ಹಲವು ಜೀವಹಾನಿ, ಮನೆ-ಮಠ ಹಾನಿಯಾಗಿರುವ ಘಟನೆ ನಡೆದಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾರಿಷಸ್ ದ್ವೀಪಕ್ಕೆ ತೆರಳಿ ಅಲ್ಲಿನ ಸಮುದ್ರದಲ್ಲಿ ಅಡಗಿಕೊಂಡು ಮೋಜಿನಲ್ಲಿ ತೊಡಗಿರುವುದಾಗಿ ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಎಲ್ಲಿ ಹೋದರು ಕಾನೂನಿನ ಕಣ್ಣಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಮಂಗಳವಾರ ಅಕ್ರಮ ಗಣಿಗಾರಿಕೆ ಕುರಿತ ಅಂತಿಮ ವರದಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಸರನ್ನು ಕೈಬಿಡುವಂತೆ ಒತ್ತಾಯಿಸಿ ಹಾಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಬಿಜೆಪಿ ಸರಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ಜೆಡಿಎಸ್ ಪಕ್ಷದ ವತಿಯಿಂದ ನಡೆದ ಪ್ರತಿಭಟನಾ ರಾಲಿಗೆ ಚಾಲನೆ ನೀಡಿದ ನಂತರ ಸುದ್ದಿಗಾರರ ಜತೆ ಮಾತನಾಡುತ್ತ ಈ ಪ್ರತಿಕ್ರಿಯೆ ನೀಡಿದರು.

ರಾಜ್ಯದಲ್ಲಿ ಮಳೆಯಿಂದಾಗಿ ಪ್ರವಾಹದಿಂದ ಹಲವೆಡೆ ಜನ ತತ್ತರಿಸಿ ಹೋಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಅವರು ರಾಜಧಾನಿ ಬಿಟ್ಟು ಹೊರಗೆ ಹೋಗಬಾರದಿತ್ತು. ಆದರೆ ಮುಖ್ಯಮಂತ್ರಿಗಳು ತಮ್ಮ ಕುಟುಂಬ ಸಮೇತ ಆರು ದಿನಗಳ ಕಾಲ ಮಾರಿಷಸ್ ಪ್ರವಾಸಕ್ಕೆ ತೆರಳಿರುವುದು ಬೇಜವಾಬ್ದಾರಿಯ ಪರಮಾವಧಿ ಎಂದು ಕಿಡಿಕಾರಿದರು.

ರಾಜ್ಯ ಸರ್ಕಾರ ವಜಾಗೊಳಿಸುವಂತೆ ಗವರ್ನರ್‌ಗೆ ಮನವಿ:
ಜೆಡಿಎಸ್ ಕಚೇರಿಯಿಂದ ಹೊರಟ ಸಾವಿರಾರು ಮಂದಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. ರಾಜ್ಯಪಾಲರ ಭವನದವರೆಗೆ ಪ್ರತಿಭಟನಾ ರಾಲಿ ನಡೆಯಿತು. ಈ ಸಂದರ್ಭದಲ್ಲಿ ಜೆಡಿಎಸ್ ನಿಯೋಗ ರಾಜ್ಯಪಾಲರನ್ನು ಭೇಟಿಯಾಗಿ ರಾಜ್ಯ ಸರ್ಕಾರ ವಜಾಕ್ಕೆ ಆಗ್ರಹಿಸಿ ಮನವಿ ನೀಡಿತು.

ರಾಜ್ಯಪಾಲರ ಭೇಟಿ ನಂತರ ಸುದ್ದಿಗಾರರ ಜತೆ ಮಾತನಾಡಿದ ಜೆಡಿಎಸ್ ಮುಖಂಡ ಎಂ.ಸಿ.ನಾಣಯ್ಯ, ಅಕ್ರಮ ಗಣಿಗಾರಿಕೆ ವರದಿಗೆ ಸಂಬಂಧಿಸಿದಂತೆ ಲೋಕಾಯುಕ್ತರ ಮೇಲೆ ಒತ್ತಡ ಹೇರಿದ ಧನಂಜಯ್ ಕುಮಾರ್, ವಿ.ಎಸ್.ಆಚಾರ್ಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿರುವುದಾಗಿ ಹೇಳಿದರು.

ಬಿಜೆಪಿಯವ್ರು ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ. ಆಪರೇಷನ್ ಕಮಲದಂತೆಯೇ, ಆಪರೇಷನ್ ಲೋಕಾಯುಕ್ತಕ್ಕೂ ಮುಂದಾಗಿರುವ ಭ್ರಷ್ಟ ಬಿಜೆಪಿ ಸರ್ಕಾರ ವಜಾಗೊಳಿಸುವಂತೆ ರಾಜ್ಯಪಾಲರಲ್ಲಿ ಮನವಿ ಮಾಡಿರುವುದಾಗಿ ತಿಳಿಸಿದರು.
ಇವನ್ನೂ ಓದಿ