ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಲೋಕಾಯುಕ್ತ ಸಿಬ್ಬಂದಿಗೆ ಭದ್ರತೆ ನೀಡಿ: ಸಂತೋಷ್‌ ಹೆಗ್ಡೆ (Lokayukta | Santosh hegde | illegal mining report | politician)
ಅಕ್ರಮ ಗಣಿಗಾರಿಕೆ ಕುರಿತು ವರದಿ ತಯಾರಿಸಿರುವ ಲೋಕಾಯುಕ್ತ ಕಚೇರಿ ಸಿಬ್ಬಂದಿಗೆ ಸೂಕ್ತ ಭದ್ರತೆ ಒದಗಿಸುವಂತೆ ಲೋಕಾಯುಕ್ತ ಸಂತೋಷ್‌ ಹೆಗ್ಡೆ ಒತ್ತಾಯಿಸಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಅಕ್ರಮ ಗಣಿಗಾರಿಕೆ ವರದಿಯಲ್ಲಿ ಅಧಿಕಾರಿಗಳು ಹಾಗೂ ಪ್ರಭಾವಿ ರಾಜಕಾರಣಿಗಳ ಹೆಸರಿದೆ, ಇದರಿಂದಾಗಿ ವರದಿ ತಯಾರಿಸುತ್ತಿರುವ ಕಚೇರಿ ಸಿಬ್ಬಂದಿಗೆ ರಕ್ಷಣೆ ನೀಡುವುದು ಅಗತ್ಯ ಎಂದು ಹೇಳಿದ್ದಾರೆ.

ಶೀಘ್ರ ವರದಿಗೆ ಸಚಿವ ಶ್ರೀರಾಮುಲು ಒತ್ತಾಯ
ಅಕ್ರಮ ಗಣಿಗಾರಿಕೆ ವರದಿ ನೀಡಲು ಲೋಕಾಯುಕ್ತರು ವಿಳಂಬ ಮಾಡಬಾರದು ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ರಾಯಚೂರು ಜಿಲ್ಲೆಯ ಚಿಕ್ಕ ಮಂಚಾಲೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಗಣಿ ವರದಿಯನ್ನು ಸಿನಿಮಾ ರೀತಿ ಎಳೆಯದೇ ಶೀಘ್ರವಾಗಿ ನೀಡುವಂತೆ ಒತ್ತಾಯಿಸಿದ್ದಾರೆ.

ಸರಕಾರಕ್ಕೆ ಯಾವುದೇ ಹಾನಿಯಿಲ್ಲ
ಲೋಕಾಯುಕ್ತ ವರದಿಯಿಂದ ರಾಜ್ಯ ಸರಕಾರದ ಕಾರ್ಯನಿರ್ವಹಣೆಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಬಿಜೆಪಿ ಮುಖಂಡ ಸದಾನಂದ ಗೌಡ ಹೇಳಿದ್ದಾರೆ. ವರದಿಯಿಂದಾಗಿ ರಾಜ್ಯದಲ್ಲಿ ಮಧ್ಯಂತರ ಚುನಾವಣೆಗಳು ನಡೆಯಲಿವೆ ಎಂಬ ಊಹಾಪೋಹಗಳಿಗೆ ತೆರೆ ಎಳೆದ ಅವರು ಸರಕಾರವು ಐದು ವರ್ಷಗಳ ಅಧಿಕಾರಾವಧಿಯನ್ನು ಯಶಸ್ವಿಯಾಗಿ ಪೂರೈಸಲಿದೆ ಎಂದು ತಿಳಿಸಿದ್ದಾರೆ.

ಲೋಕಾಯುಕ್ತರಿಗೆ ಕಾಂಗ್ರೆಸ್‌ ಮನವಿ
ಅಕ್ರಮ ಗಣಿ ವರದಿಯಲ್ಲಿ ಮುಖ್ಯಮಂತ್ರಿ ಹೆಸರು ಪ್ರಸ್ತಾಪಿಸದಂತೆ ಪ್ರಭಾವ ಬೀರಲು ಯತ್ನಿಸಿದ ಧನಂಜಯ ಕುಮಾರ್ ಹಾಗೂ ಸಚಿವ ವಿ.ಎಸ್‌.ಆಚಾರ್ಯ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾಂಗ್ರೆಸ್‌ ಮುಖಂಡ ಉಗ್ರಪ್ಪ ನೇತೃತ್ವದಲ್ಲಿ ಬುಧವಾರ ಜಾಥಾ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು ಲೋಕಾಯುಕ್ತರಿಗೆ ಮನವಿ ಸಲ್ಲಿಸಿದರು.



ಇವನ್ನೂ ಓದಿ
ಇದನ್ನು ಸಹ ಶೋಧಿಸು: ಸಂತೋಷ್ ಹೆಗ್ಡೆ, ಲೋಕಾಯುಕ್ತ, ಅಕ್ರಮ ಗಣಿ ವರದಿ, ರಾಜಕಾರಣಿಗಳು