ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ತಪ್ಪು ಸಾಬೀತಾದರೆ ರಾಜೀನಾಮೆ ಕೊಡ್ತೀನಿ: ಯಡಿಯೂರಪ್ಪ (Lokayukta Report | Illegal Mining | Yeddyurappa | Kumaraswamy)
PTI
ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಕುರಿತು ಲೋಕಾಯುಕ್ತ ಕಚೇರಿಯಿಂದ ಸೋರಿದ ವರದಿಯಲ್ಲಿರುವ ವಿಷಯಗಳ ಬಗ್ಗೆ ಯಾವುದೇ ರೀತಿಯ ಊಹಾಪೋಹಗಳನ್ನು ಮಾಡುವುದಿಲ್ಲ. ನನ್ನ ವಿರುದ್ಧದ ಆರೋಪಗಳು ಸಾಬೀತಾದಲ್ಲಿ ರಾಜೀನಾಮೆ ನೀಡಲು ಹಿಂಜರಿಯುವುದಿಲ್ಲ ಎಂದು ಮಾರಿಷಿಯಸ್ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಯಲ್ಲಿ ಮುಖ್ಯಮಂತ್ರಿ ಮತ್ತವರ ಸಂಪುಟ ಸಹೋದ್ಯೋಗಿಗಳು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಕಾಂಗ್ರೆಸ್ ಸಂಸದ ಅನಿಲ್ ಲಾಡ್ ಮುಂತಾದವರು ತಪ್ಪಿತಸ್ಥರು ಎಂಬ ಉಲ್ಲೇಖವಿರುವ ಲೋಕಾಯುಕ್ತ ವರದಿ ಸೋರಿಕೆಯಾದ ಹಿನ್ನೆಲೆಯಲ್ಲಿ ಯಡಿಯೂರಪ್ಪ ತಮ್ಮ ಟ್ವಿಟರ್ ಖಾತೆಯ ಮೂಲಕ ಪ್ರತಿಕ್ರಿಯಿಸಿದ್ದಾರೆ.

ನಾನೇನೂ ಓಡಿಹೋಗಲ್ಲ ಎಂದ ಕುಮಾರಸ್ವಾಮಿ
ಅಕ್ರಮ ಗಣಿಗಾರಿಕೆ ವರದಿಯಲ್ಲಿ ತಮ್ಮ ಹೆಸರು ಪ್ರಸ್ತಾಪವಾಗಿರುವ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ನನ್ನ ಹೆಸರು ಅಲ್ಲಿದ್ದರೆ, ಖಂಡಿತವಾಗಿಯೂ ನಾನು ಓಡಿ ಹೋಗೋದಿಲ್ಲ. ಯಾವುದೇ ರೀತಿಯ ತನಿಖೆ ಎದುರಿಸಲು ಸಿದ್ಧ ಎಂದು ದಿಟ್ಟ ನಿಲುವು ಪ್ರಕಟಿಸಿದ್ದಾರೆ.

ನನ್ನ 20 ತಿಂಗಳ ಅಧಿಕಾರಾವಧಿಯಲ್ಲಿ ರಾಜ್ಯದ ಬೊಕ್ಕಸಕ್ಕೆ ಏನಾದರೂ ನಷ್ಟ ಮಾಡಿದ್ದೇನೆಂದಾದರೆ, ನಾನು ಅದನ್ನು ಜನತೆಗೆ ವಿವರಿಸುತ್ತೇನೆ ಎಂದು ದೆಹಲಿಯಲ್ಲಿರುವ ಕುಮಾರಸ್ವಾಮಿ ಹೇಳಿದರು.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಲೋಕಾಯುಕ್ತ ವರದಿ, ಅಕ್ರಮ ಗಣಿಗಾರಿಕೆ, ಯಡಿಯೂರಪ್ಪ, ಕುಮಾರಸ್ವಾಮಿ, ಕರ್ನಾಟಕ, ಗಣಿ ವರದಿ