ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗಣಿ ವರದಿ; ಕತ್ತಿ ಹರಿತ ಮಾಡಿಕೊಳ್ಳುತ್ತಿರುವ ಗವರ್ನರ್ (Lokayuktha | Santhosh hegde | Governor | Illegal Mining | BJP | Yeddyurappa)
PR
ರಾಜ್ಯದಲ್ಲಿನ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ತನಿಖಾ ವರದಿ ತನ್ನ ಕೈಸೇರಿದ ಕೂಡಲೇ ಸಂವಿಧಾನ ಮುಖ್ಯಸ್ಥನಾಗಿ ಯಾವ ರೀತಿ ಕ್ರಮ ಕೈಗೊಳ್ಳಬೇಕೋ ಅದರಂತೆ ನಡೆದುಕೊಳ್ಳುವುದಾಗಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಹೇಳಿಕೆ ನೀಡುವ ಮೂಲಕ ಅಕ್ರಮ ಗಣಿಗಾರಿಕೆ ವಿಚಾರದ ಕುರಿತು ಮಧ್ಯಪ್ರವೇಶಿಸುವ ಎಲ್ಲ ಲಕ್ಷಣಗಳು ನಿಚ್ಚಳವಾಗತೊಡಗಿದೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಅಕ್ರಮ ಗಣಿಗಾರಿಕೆ ಕುರಿತ ಅಂತಿಮ ವರದಿ ಬಗ್ಗೆ ಶುಕ್ರವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ವರದಿ ಇನ್ನೂ ಅಧಿಕೃತವಾಗಿ ಸರ್ಕಾರಕ್ಕೆ ಸಲ್ಲಿಕೆಯಾಗಿಲ್ಲ. ವರದಿ ಸಲ್ಲಿಕೆಯಾದ ನಂತರ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದರು.

ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಸಮರ್ಥ ವ್ಯಕ್ತಿಯಾಗಿದ್ದು, ಅಕ್ರಮ ಗಣಿಗೆ ಸಂಬಂಧಿಸಿದಂತೆ ಅವರ ಶಿಫಾರಸ್ಸಿನಂತೆ ತಾನು ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಹೇಳಿದರು.

ಈ ಮೊದಲು ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿಚಾರದಲ್ಲಿಯೂ ಲೋಕಾಯುಕ್ತರು ನೀಡಿದ ವರದಿಯ ಶಿಫಾರಸ್ಸಿನಂತೆ ಸೂಕ್ತ ಕ್ರಮ ಕೈಗೊಂಡಿರುವುದಾಗಿ ತಿಳಿಸಿದರು.

ಅಕ್ರಮ ಗಣಿ ಅಂತಿಮ ವರದಿ ಸರ್ಕಾರಕ್ಕೆ ಸಲ್ಲಿಸುವ ಮೊದಲೇ ಸೋರಿಕೆಯಾಗಿರುವುದು ರಾಜ್ಯರಾಜಕಾರಣದಲ್ಲಿ ಭಾರೀ ತಳಮಳಕ್ಕೆ ಎಡೆಮಾಡಿಕೊಟ್ಟಿದೆ. ವರದಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ, ಶ್ರೀರಾಮುಲು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಘಟಾನುಘಟಿಗಳ ಹೆಸರು ಸೇರ್ಪಡೆಗೊಂಡಿದೆ.

ಗಣಿ ವರದಿ ಅಚ್ಚಿನಲ್ಲಿದ್ದು, ಶೀಘ್ರದಲ್ಲೇ ಸರ್ಕಾರಕ್ಕೆ ಸಲ್ಲಿಸುವುದಾಗಿ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಗುರುವಾರ ಸ್ಪಷ್ಟಪಡಿಸಿದ್ದರು. ಸಂತೋಷ್ ಹೆಗ್ಡೆಯವರು ಆಗಸ್ಟ್ 3ರಂದು ತಮ್ಮ ಅಧಿಕಾರಾವಧಿಯಿಂದ ನಿವೃತ್ತಿಗೊಳ್ಳಲಿದ್ದಾರೆ. ಅದಕ್ಕೂ ಮುನ್ನ ಅವರು ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದ್ದಾರೆ.

ಗಣಿಗಾರಿಕೆಗೆ ಸಂಬಂಧಿಸಿದಂತೆ ಹಾಗೂ ಆಡಳಿತಾರೂಢ ರಾಜ್ಯ ಸರ್ಕಾರದ ವಿರುದ್ಧ ಸಾಕಷ್ಟು ಬಾರಿ ಸವಾರಿ ನಡೆಸಿದ್ದ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ರಾಜಕೀಯ ಬಿಕ್ಕಟ್ಟು ಸೃಷ್ಟಿಗೆ ಕಾರಣರಾಗಿದ್ದರು. ಇದೀಗ ಮತ್ತೆ ಅಕ್ರಮ ಗಣಿಗಾರಿಕೆ ವರದಿಯಲ್ಲೂ ಮಧ್ಯಪ್ರವೇಶಿಸುವ ಹೇಳಿಕೆ ನೀಡಿರುವುದು ರಾಜ್ಯ ಸರ್ಕಾರ ಅಡಕತ್ತರಿಗೆ ಸಿಲುಕುವ ಲಕ್ಷಣಗಳು ಗೋಚರಿಸತೊಡಗಿವೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಅಕ್ರಮ ಗಣಿ ವರದಿ, ಲೋಕಾಯುಕ್ತ, ಸಂತೋಷ್ ಹೆಗ್ಡೆ, ಗವರ್ನರ್, ಬಿಜೆಪಿ, ಯಡಿಯೂರಪ್ಪ