ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಫೋನ್ ಕದ್ದಾಲಿಕೆ ಆರೋಪದಲ್ಲಿ ಸತ್ಯಾಂಶವಿಲ್ಲ: ಸಿಎಂ (Phone tapping | Yeddiyurappa | Lokayukta | Illigal mining)
PR
ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ಫೋನ್ ಕದ್ದಾಲಿಕೆ ಮಾಡಿಲ್ಲ. ಫೋನ್ ಕದ್ದಾಲಿಕೆ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ಯಯಡಿಯೂರಪ್ಪ ಹೇಳಿದ್ದಾರೆ.

ಮಾರಿಷಸ್‌ನಿಂದ ಹೇಳಿಕೆ ನೀಡಿರುವ ಅವರು, ಫೋನ್ ಕದ್ದಾಲಿಕೆ ಆಗಿಲ್ಲ. ಈ ಪ್ರಕರಣಕ್ಕ ಸಂಬಂಧಿಸಿದಂತೆ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕೇಂದ್ರ ಗೃಹ ಸಚಿವ ಚಿದಂಬರಂ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಅಕ್ರಮ ಗಣಿಗಾರಿಕೆಯಲ್ಲಿ ನನ್ನ ಪಾತ್ರವಿಲ್ಲ. ಗಣಿಗಾರಿಕೆಯಿಂದ ಯಾವುದೇ ಲಾಭ ಪಡೆದಿಲ್ಲ. ನನ್ನ ವಿರುದ್ಧದ ಆರೋಪಗಳು ಸುಳ್ಳಿನ ಕಂತೆಯಾಗಿವೆ. ವಿಪಕ್ಷಗಳು ನಾನು ಅಧಿಕಾರಕ್ಕೆ ಬಂದಾಗಿನಿಂದ ರಾಜೀನಾಮೆಗೆ ಒತ್ತಾಯಿಸುತ್ತಿವೆ ಎಂದು ಕಿಡಿಕಾರಿದ್ದಾರೆ.

ಮಾರಿಷಸ್‌ನಿಂದ ನವದೆಹಲಿಗೆ ತೆರಳಿ ಹೈಕಮಾಂಡ್‌ನೊಂದಿಗೆ ಚರ್ಚಿಸಿದ ನಂತರ, ರಾಜ್ಯಕ್ಕೆ ಮರಳುತ್ತಿದ್ದೇನೆ. ನನ್ನ ವಿರುದ್ಧದ ಎಲ್ಲಾ ಆರೋಪಗಳಿಗೆ ಉತ್ತರಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಫೋನ್ ಕದ್ದಾಲಿಕೆ, ಯಡಿಯೂರಪ್ಪ, ಲೋಕಾಯುಕ್ತ, ಅಕ್ರಮ ಗಣಿಗಾರಿಕೆ