ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಾಜ್ಯಾಧ್ಯಕ್ಷ ಪಟ್ಟ ಕೊಡಿ,ರಾಜೀನಾಮೆ ಕೊಡ್ತೇನೆ: ಸಿಎಂ ಷರತ್ತು (BJP | Yeddyurappa | Illegal mining Report | Lokayukta | Sadananda Gowda)
ಅಕ್ರಮ ಗಣಿ ವರದಿ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಬಿ.ಎಸ್.ಯಡಿಯೂರಪ್ಪ ಅವರಿಗೆ ಪದತ್ಯಾಗಕ್ಕೆ ಸೂಚನೆ ನೀಡಿದ್ದು, ಏತನ್ಮಧ್ಯೆ ತನಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕೊಟ್ಟರೆ ರಾಜೀನಾಮೆ ಕೊಡಲು ಸಿದ್ಧ ಎಂದು ಹೈಕಮಾಂಡ್‌ಗೆ ಷರತ್ತು ವಿಧಿಸುವ ಮೂಲಕ ಯಡಿಯೂರಪ್ಪ ಮತ್ತೊಂದು ದಾಳ ಉರುಳಿಸಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಷರತ್ತು ಬದ್ಧ ರಾಜೀನಾಮೆಗೆ ಬಿ.ಎಸ್.ಯಡಿಯೂರಪ್ಪ ಸಮ್ಮತಿಸಿದ್ದಾರೆ. ತಮ್ಮ ಆಪ್ತ ಸಚಿವರು, ಶಾಸಕರ ಜತೆ ಸುಮಾರು 45 ನಿಮಿಷಗಳ ಕಾಲ ಮಾತುಕತೆ ನಡೆಸಿದ ನಂತರ ಈ ನಿರ್ಧಾರ ಕೈಗೊಂಡಿರುವುದಾಗಿ ಬಿಜೆಪಿ ಮೂಲಗಳು ತಿಳಿಸಿವೆ.

ಲೋಕಾಯುಕ್ತರು ಬುಧವಾರ ಅಕ್ರಮ ಗಣಿಗಾರಿಕೆಯ ಅಂತಿಮ ವರದಿಯನ್ನು ಸರ್ಕಾರಕ್ಕೆ ಮತ್ತು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರಿಗೆ ಸಲ್ಲಿಸಿದ್ದರು. ವರದಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬಕ್ಕೆ ಗಣಿ ಕಂಪನಿಯೊಂದು 20 ಕೋಟಿ ರೂಪಾಯಿ ದೇಣಿಗೆ ನೀಡಿರುವುದು ಕೂಡ ಉಲ್ಲೇಖವಾಗಿದೆ. ಅಲ್ಲದೇ ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರು ಸೂಕ್ತ ಕ್ರಮ ಕೈಗೊಳ್ಳಬೇಕೆಂಬುದಾಗಿಯೂ ಲೋಕಾಯುಕ್ತರು ಶಿಫಾರಸು ಮಾಡಿದ್ದರು.

ಗಣಿ ವರದಿ ಸಲ್ಲಿಕೆಯಾಗುತ್ತಿದ್ದಂತೆಯೇ ಬಿಜೆಪಿ ವಲಯದಲ್ಲಿ ಬಿರುಸಿನ ಚಟುವಟಿಕೆ ಕಾಣಿಸಿಕೊಂಡಿತ್ತು. ಆ ನಿಟ್ಟಿನಲ್ಲಿ ಬಿಜೆಪಿ ಹೈಕಮಾಂಡ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಸೂಚಿಸಿದ್ದರು. ಒಟ್ಟಿನಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಗಾದಿಯಿಂದ ಕೆಳಗಿಳಿಯುವ ಹೈಕಮಾಂಡ್ ಸೂಚನೆ ಪಾಲಿಸುತ್ತಾರಾ ಅಥವಾ ಯಡಿಯೂರಪ್ಪ ಷರತ್ತು ಹೈಕಮಾಂಡ್ ಒಪ್ಪುತ್ತಾ ಎನ್ನುವ ಕುತೂಹಲ ಮೂಡಿಸಿದೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಬಿಜೆಪಿ, ಯಡಿಯೂರಪ್ಪ, ಅಕ್ರಮ ಗಣಿ ವರದಿ, ಲೋಕಾಯುಕ್ತ, ಸದಾನಂದ ಗೌಡ, ಬಿಜೆಪಿ ಹೈಕಮಾಂಡ್