ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ನಾಳೆ ಯಡಿಯೂರಪ್ಪ ರಾಜೀನಾಮೆಗೆ ನಿರ್ಧಾರ (Yeddiyurappa | BJP | Highcommand | Resign)
PR
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಸಚಿವ ವಿ.ಎಸ್.ಆಚಾರ್ಯ ಹೇಳಿದ್ದಾರೆ.

ನಾಳೆ ಸಂಜೆ 4 ಗಂಟೆಯೊಳಗೆ ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ನೀಡಲಿದ್ದು, ನೂತನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಆದರೆ, ಯಡಿಯೂರಪ್ಪ ಬೆಂಬಲಿಗ ಸಚಿವರು ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬೇಡ ಎಂದು ಪಟ್ಟು ಹಿಡಿದು ಕುಳಿತಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆಯವರೆಗೆ ರಾಜೀನಾಮೆ ನೀಡದಿದ್ದಲ್ಲಿ ಪಕ್ಷದಿಂದ ಉಚ್ಚಾಟಿಲಾಗುವುದು ಎನ್ನುವ ಹೈಕಮಾಂಡ್ ಆದೇಶದಿಂದಾಗಿ ಯಡ್ಡಿ ಬೆಂಬಲಿಗರಲ್ಲಿ ಆತಂಕ ಮೂಡಿಸಿದೆ.

ಹೈಕಮಾಂಡ್ ಕಠಿಣ ನಿಲುವಿಗೆ ಮಣಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ ಎಂದು ಮುಖ್ಯಮಂತ್ರಿಗಳ ಆಪ್ತರು ಹೇಳಿಕೆ ನೀಡಿದ್ದಾರೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಯಡಿಯೂರಪ್ಪ, ಬಿಜೆಪಿ, ಹೈಕಮಾಂಡ್, ರಾಜೀನಾಮೆ