ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಫೋನ್ ಕದ್ದಾಲಿಕೆ ಮಾಹಿತಿ ಕೊಡಿ: ಕೇಂದ್ರ ರಾಜ್ಯಕ್ಕೆ (Lokayukta | Illegal Mining Report | Santhosh hegde | Phone tapping, Yeddyurappa | UPA)
ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ದೂರವಾಣಿ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಂಪೂರ್ಣ ಮಾಹಿತಿಯನ್ನು ನೀಡಬೇಕೆಂದು ಕೇಂದ್ರ ಗೃಹ ಇಲಾಖೆ ರಾಜ್ಯದ ಮುಖ್ಯಕಾರ್ಯದರ್ಶಿ ಎಸ್.ವಿ.ರಂಗನಾಥ್ ಅವರಿಗೆ ಪತ್ರ ಮುಖೇನ ಸೂಚನೆ ನೀಡಿದೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ದೂರವಾಣಿ ಕದ್ದಾಲಿಕೆಗೆ ಕುರಿತಂತೆ ರಾಜ್ಯ ಸರ್ಕಾರದ ಬಳಿ ಏನೇನು ದಾಖಲೆಗಳಿವೆಯೋ ಅವೆಲ್ಲವನ್ನೂ ರವಾನಿಸುವಂತೆ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ ಹಾಗೂ ಮುಖ್ಯ ಕಾರ್ಯದರ್ಶಿಗೆ ಕೇಂದ್ರ ಸರ್ಕಾರ ಪತ್ರ ಬರೆದಿದೆ.

ಅಲ್ಲದೇ ಒಂದು ವಾರದಲ್ಲಿ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುವಂತೆ ಕೇಂದ್ರ ಸ್ಪಷ್ಟ ನಿರ್ದೇಶನ ನೀಡಿದೆ. ಫೋನ್ ಕದ್ದಾಲಿಕೆ ಕುರಿತಂತೆ ಕೇಂದ್ರದಿಂದ ಪತ್ರ ಬಂದಿರುವುದನ್ನು ಮುಖ್ಯಕಾರ್ಯದರ್ಶಿ ಎಸ್.ವಿ.ರಂಗನಾಥ್ ಕೂಡ ಸ್ಪಷ್ಟಪಡಿಸಿದ್ದಾರೆ.

ಅಕ್ರಮ ಗಣಿಗಾರಿಕೆ ಕುರಿತ ಅಂತಿಮ ವರದಿ ಸರ್ಕಾರಕ್ಕೆ ಸಲ್ಲಿಸುವ ಮುನ್ನವೇ ಕೆಲವು ಮಹತ್ವದ ಅಂಶಗಳು ಮಾಧ್ಯಮವೊಂದಕ್ಕೆ ಸೋರಿಕೆಯಾಗಿತ್ತು. ಈ ಪ್ರಕರಣ ರಾಜ್ಯರಾಜಕಾರಣದಲ್ಲಿ ಸಾಕಷ್ಟು ಆರೋಪ-ಪ್ರತ್ಯಾರೋಪಕ್ಕೂ ಕೂಡ ಕಾರಣವಾಗಿತ್ತು. ಅಲ್ಲದೇ ಈ ಸೋರಿಕೆ ಹಿಂದೆ ಫೋನ್ ಕದ್ದಾಲಿಕೆ ಆಗಿರುವುದಾಗಿ ನ್ಯಾ.ಸಂತೋಷ್ ಹೆಗ್ಡೆ ಗಂಭೀರವಾಗಿ ಆರೋಪಿಸಿದ್ದರು.

ನನ್ನ ಮನೆ ಹಾಗೂ ಲೋಕಾಯುಕ್ತ ಕಚೇರಿಯ ದೂರವಾಣಿಯನ್ನು ಕಳೆದ ಮೂರು ತಿಂಗಳಿನಿಂದ ಕದ್ದಾಲಿಸಲಾಗುತ್ತಿದೆ. ಈ ಬಗ್ಗೆ ನನಗೆ ಮೊದಲೇ ಸಂಶಯ ಇತ್ತು ಎಂದು ಹೆಗ್ಡೆ ಆರೋಪಿಸಿದ್ದರು.

ಫೋನ್ ಕದ್ದಾಲಿಕೆ ವಿಚಾರ ಕೂಡ ಮತ್ತಷ್ಟು ವಿವಾದಕ್ಕೆ ಕಾರಣವಾಗಿತ್ತು. ಫೋನ್ ಕದ್ದಾಲಿಕೆ ಪ್ರಕರಣ ಗಂಭೀರ ವಿಚಾರವಾಗಿದ್ದು, ಈ ಬಗ್ಗೆ ಪ್ರಧಾನಿ ಮನಮೋಹನ್ ಸಿಂಗ್ ಮಧ್ಯಪ್ರವೇಶಿಸಿ ಕೇಂದ್ರದಿಂದ ವಿಶೇಷ ತಂಡ ಕಳುಹಿಸಿ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾರಿಷಸ್ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್ ಆದ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದರು.

ಫೋನ್ ಕದ್ದಾಲಿಕೆ ಪ್ರಕರಣ ತನಿಖೆಯಲ್ಲಿ ನಾನು ಆರೋಪಿ ಎಂದು ಸಾಬೀತಾದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಮಾತ್ರವಲ್ಲ, ರಾಜಕೀಯದಿಂದಲೇ ನಿವೃತ್ತಿಯಾಗುವುದಾಗಿ ಸವಾಲು ಹಾಕಿದ್ದರು.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಲೋಕಾಯುಕ್ತ, ಅಕ್ರಮ ಗಣಿ ವರದಿ, ಸಂತೋಷ್ ಹೆಗ್ಡೆ, ಫೋನ್ ಕದ್ದಾಲಿಕೆ, ಯುಪಿಎ, ಯಡಿಯೂರಪ್ಪ