ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ನೂತನ ಸಿಎಂ; ಮುಂಚೂಣಿಯಲ್ಲಿ ಹಸನ್ಮುಖಿ ಸದಾನಂದ ಗೌಡ (Sadananda Gowda | Yaddyurappa | Eshwarappa | State Politics)
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ರಾಜೀನಾಮೆ ನೀಡುವುದು ಬಹುತೇಕ ಖಚಿತವಾದ ಹಿನ್ನಲೆಯಲ್ಲಿ ನೂತನ ಸಿಎಂ ಆಯ್ಕೆ ಕಸರತ್ತು ಬಿರುಸುಗೊಂಡಿದ್ದು, ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿದೆ ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಇಂದು ಮಧ್ಯಾಹ್ನ 2.30ಕ್ಕೆ ರಾಜ್ಯಪಾಲ ಹಂಸರಾಜ ಭಾರಧ್ವಾಜ್ ಭೇಟಿಯಾಗಲಿರುವ ಯಡಿಯೂರಪ್ಪ, ಅಧಿಕೃತವಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ. ಆದರೆ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರಿಗೆ ರವಾನಿಸಿರುವ ಪತ್ರದಲ್ಲಿ ನೂತನ ಸಿಎಂ ಆಯ್ಕೆ ಹಕ್ಕನ್ನು ತನಗೆ ನೀಡಬೇಕು ಎಂದು ಯಡಿಯೂರಪ್ಪ ಪಟ್ಟು ಹಿಡಿದಿರುವುದು ಬಿಕ್ಕಟ್ಟಿಗೆ ಕಾರಣವಾಗಿದೆ.

ಗಡ್ಕರಿಗೆ ರವಾನಿಸಿರುವ ಪತ್ರದಲ್ಲಿ ಕೆಲವು ಷರತ್ತುಗಳನ್ನು ಹೇರಿದ್ದ ಯಡಿಯೂರಪ್ಪ, ತಾವು ಸೂಚಿಸಿದವರನ್ನೇ ನೂತನ ಸಿಎಂ ಮಾಡಬೇಕು. ಹಾಗೆಯೇ ತನ್ನನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಘೋಷಿಸಬೇಕು. ಒಂದು ವೇಳೆ ಇದಕ್ಕೆ ಒಪ್ಪದಿದ್ದಲ್ಲಿ ಸಿಎಂ ಆಯ್ಕೆ ಪ್ರಕ್ರಿಯೆಯನ್ನು ಮತದಾನದ ಮೂಲಕ ನಡೆಸಬೇಕು ಎಂದಿದ್ದರು.

ಇದಕ್ಕೆಲ್ಲ ಒಪ್ಪಿಗೆ ನೀಡದಿದ್ದಲ್ಲಿ ತಾನೂ ಹಾಗೂ ತನ್ನ ಬೆಂಬಲಿಗ ಶಾಸಕರು ಹಾಗೂ ಸಂಸದರು ಶಾಸಕಾಂಗ ಪಕ್ಷದ ಸಭೆಯನ್ನು ಬಹಿಷ್ಕರಿಸುವುದಾಗಿ ಹೇಳುವ ಮೂಲಕ ಹೈಕಮಾಂಡ್ ಮೇಲೆ ಒತ್ತಡ ಹೇರುವ ತಂತ್ರಕ್ಕೆ ಮುಂದಾಗಿದ್ದರು.

ಈ ನಡುವೆ ಯಡಿಯೂರಪ್ಪ ಅಥವಾ ಅನಂತ ಕುಮಾರ್ ಬಣಗಳಿಗೆ ಯಾವುದೇ ಬೇಸರವಾಗದಂತೆ ನೂತನ ಸಿಎಂ ಅಯ್ಕೆ ಮಾಡಲು ವರಿಷ್ಠರು ನಿರ್ಧರಿಸಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಸದಾನಂದ ಗೌಡರು ಹಾಗೂ ಉಪಮುಖ್ಯಮಂತ್ರಿ ಸ್ಥಾನಕ್ಕೆ ಕೆ. ಎಸ್. ಈಶ್ವರಪ್ಪ ಅವರನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಪ್ರಸ್ತುತ ಸಿಎಂ ರೇಸ್‌ನಲ್ಲಿ ಸದಾನಂದ ಗೌಡ ಸೇರಿದಂತೆ, ಜಗದೀಶ್ ಶೆಟ್ಟರ್, ಅನಂತ ಕುಮಾರ್ ಮತ್ತು ಈಶ್ವರಪ್ಪ ಇದ್ದಾರೆ. ಆದರೆ ಈ ಸಮಸ್ಯೆಗಳನ್ನು ವರಿಷ್ಠರು ಹೇಗೆ ಪರಿಹಾರ ಕಾಣಲಿದ್ದಾರೆ ಎಂಬುದು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ವೆಬ್‌ದುನಿಯಾ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಸದಾನಂದ ಗೌಡ, ಯಡಿಯೂರಪ್ಪ, ಈಶ್ವರಪ್ಪ, ಬಿಜೆಪಿ, ಕರ್ನಾಟಕ ಮುಖ್ಯಮಂತ್ರಿ