ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಹೊಸ ಸರ್ಕಾರಕ್ಕೆ ಯಾವುದೇ ತೊಂದ್ರೆ ಕೊಡಲ್ಲ: ಗವರ್ನರ್ (Governor | BJP | Illegal Mining Report | Lokayukta | HR Bhardwaj)
ನೂತನ ಸರ್ಕಾರ ರಚನೆ ಅಥವಾ ಸರ್ಕಾರ ಪತನಗೊಳ್ಳುವುದು ಸಾಂವಿಧಾನಿಕ ಕ್ರಮ. ಅಲ್ಲದೇ ಹೊಸ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಬಿಜೆಪಿ ಇನ್ನೂ ಹೆಚ್ಚಿನ ಸಮಯವನ್ನು ಬೇಕಾದ್ರೆ ತೆಗೆದುಕೊಳ್ಳಲಿ ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ತಿಳಿಸಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ನೂತನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅವರು ಮತ್ತಷ್ಟು ಸಮಯ ತೆಗೆದುಕೊಳ್ಳಲಿ. ಈ ಬಗ್ಗೆ ನಾನೇನೂ ಮಧ್ಯಪ್ರವೇಶ ಮಾಡುವುದಿಲ್ಲ. ಆದರೆ ಮಾಧ್ಯಮಗಳಲ್ಲಿ ಮಾತ್ರ ಗವರ್ನರ್ ಸರ್ಕಾರವನ್ನು ವಜಾಗೊಳಿಸುತ್ತಾರೆಂದು ವರದಿ ಮಾಡುತ್ತಿರುವುದಾಗಿ ಈ ಸಂದರ್ಭದಲ್ಲಿ ಹೇಳಿದರು.

ಅಕ್ರಮ ಗಣಿ ವರದಿ ಹಿನ್ನೆಲೆಯಲ್ಲಿ ಬಿ.ಎಸ್.ಯಡಿಯೂರಪ್ಪ ಭಾನುವಾರ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಹಾಗಾಗಿ ನೂತನ ಸರ್ಕಾರದ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವ ಪ್ರಶ್ನೆ ಇಲ್ಲ. ಆದರೆ ಅಕ್ರಮ ಗಣಿ ಹಗರಣದ ಕುರಿತಂತೆ ಲೋಕಾಯುಕ್ತರು ನೀಡಿರುವ ಅಂತಿಮ ವರದಿ ಬಗ್ಗೆ ಕ್ರಮ ಕೈಗೊಳ್ಳದೇ ಇದ್ದಲ್ಲಿ ತಾನು ಮಧ್ಯಪ್ರವೇಶಿಸುವುದಾಗಿ ರಾಜ್ಯಪಾಲರು ಸ್ಪಷ್ಟಪಡಿಸಿದ್ದಾರೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಗವರ್ನರ್, ಬಿಜೆಪಿ, ಅಕ್ರಮ ಗಣಿ ವರದಿ, ಯಡಿಯೂರಪ್ಪ, ಲೋಕಾಯುಕ್ತ, ಎಚ್ಆರ್ಭಾರದ್ವಾಜ್