ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕೊನೆಗೂ ವರ್ತೂರು, ಜಾರಕಿಹೊಳಿ ಸೇರಿ ಐವರು ಪ್ರಮಾಣವಚನ (Varthuru prakash | Balachandra Jarakiholi | Sadananda Gowda | Eshwarappa |BJP | 2nd phase Cabinet expand)
PR
ಮುಖ್ಯಮಂತ್ರಿ ಸದಾನಂದ ಗೌಡ ನೇತೃತ್ವದಲ್ಲಿ ಪ್ರಥಮ ಹಂತದಲ್ಲಿ 21 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಇದೀಗ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಸೇರಿದಂತೆ ಐವರು ಗುರುವಾರ ಸಂಜೆ ರಾಜಭವನದ ಗಾಜಿನಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಗಾಗಿ ನವದೆಹಲಿಗೆ ಆಗಮಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ, ಮುಖ್ಯಮಂತ್ರಿ ಸದಾನಂದ ಗೌಡ ಅವರು ಪಕ್ಷದ ವರಿಷ್ಠರಾದ ರಾಜನಾಥ್ ಸಿಂಗ್, ಅರುಣ್ ಜೇಟ್ಲಿ, ಧರ್ಮೇಂದ್ರ ಪ್ರಧಾನ್, ಆರ್ಎಸ್ಎಸ್ ಮುಖಂಡ ಸತೀಶ್ ಅವರ ಜತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಂಡಿದ್ದರು. ಸಿ.ಪಿ.ಯೋಗೀಶ್ವರ್, ರಾಜೂ ಗೌಡ ಹಾಗೂ ವರ್ತೂರು ಪ್ರಕಾಶ್ ಮೊದಲ ಬಾರಿಗೆ ಸಚಿವರಾಗಿದ್ದರೆ, ರಾಜಕೀಯ ಜಂಗೀಕುಸ್ತಿಯ ನಂತರ ಆನಂದ್ ಅಸ್ನೋಟಿಕರ್, ಬಾಲಚಂದ್ರ ಜಾರಕಿಹೊಳಿ ಎರಡನೇ ಅವಧಿಗೆ ಮುಂದುವರಿದಂತಾಗಿದೆ.

ಮೊದಲ ಹಂತದಲ್ಲಿ 21 ಮಂದಿ ಪ್ರಮಾಣವಚನ ಸ್ವೀಕರಿಸಿದ್ದು, ಇಂದು ಎರಡನೇ ಹಂತದಲ್ಲಿ ಐವರು ಪ್ರಮಾಣವಚನ ಸ್ವೀಕರಿಸಲು ಅನುವು ಮಾಡಿಕೊಡಬೇಕೆಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸಂಜೆ 5-30ಕ್ಕೆ ವರ್ತೂರು, ಜಾರಕಿಹೊಳಿ ಸೇರಿದಂತೆ ಐವರಿಗೆ ರಾಜ್ಯಪಾಲರು ಪ್ರತಿಜ್ಞಾ ವಿಧಿ ಬೋಧಿಸಿದರು.

PR
ಚನ್ನಪಟ್ಟಣ ಕ್ಷೇತ್ರದ ಸಿ.ಪಿ.ಯೋಗೀಶ್ವರ್, ಕಾರವಾರ ಕ್ಷೇತ್ರ ಆನಂದ್ ಅಸ್ನೋಟಿಕರ್, ಅರಭಾವಿ ಕ್ಷೇತ್ರದ ಬಾಲಚಂದ್ರ ಜಾರಕಿಹೊಳಿ, ಸುರಪುರ ಕ್ಷೇತ್ರದ ರಾಜೂಗೌಡ ಹಾಗೂ ಕೋಲಾರದ ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಮುಖ್ಯಮಂತ್ರಿ ಸದಾನಂದ ಗೌಡ ಸೇರಿದಂತೆ 34 ಮಂದಿ ಸಚಿವ ಸಂಪುಟದಲ್ಲಿ ಇರಬಹುದಾಗಿದ್ದು, ಈಗಾಗಲೇ 21 ಜನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಎರಡನೇ ಹಂತದಲ್ಲಿ ಐವರು ಪ್ರಮಾಣವಚನ ಸ್ವೀಕರಿಸಲಿದ್ದು, ಇನ್ನೂ ಏಳು ಮಂದಿಗೆ ಅವಕಾಶ ನೀಡಬಹುದಾಗಿದೆ.

PR
ಆದರೆ ಪಕ್ಷದಲ್ಲಿ ಸಾಕಷ್ಟು ಆಕಾಂಕ್ಷಿಗಳು ಇದ್ದಿರುವುದರಿಂದ ಅಂತಿಮ ಪಟ್ಟಿ ಸಾಕಷ್ಟು ಗೊಂದಲ ಹುಟ್ಟಿಸುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ಬಳ್ಳಾರಿ ರೆಡ್ಡಿ ಬ್ರದರ್ಸ್ ಸಂಪುಟದಿಂದ ಔಟ್ ಆಗಿದ್ದಾರೆ. ಆ ನಿಟ್ಟಿನಲ್ಲಿ ಶಾಸಕ ಸೋಮಶೇಖರ್ ರೆಡ್ಡಿಯವರಿಗೆ ಸಚಿವಗಿರಿ ಕೊಡಬೇಕೆಂಬ ಬೇಡಿಕೆ ಇಟ್ಟಿದ್ದಾರೆನ್ನಲಾಗಿದೆ. ಮತ್ತೊಂದೆಡೆ ಎಸ್.ಕೆ.ಬೆಳ್ಳುಬ್ಬಿ, ಸಿ.ಟಿ.ರವಿ, ಬೇಳೂರು ಗೋಪಾಲಕೃಷ್ಣ, ಜೀವರಾಜ್, ಶಂಕರಲಿಂಗೇಗೌಡ, ಮಾಲೂರು ಕ್ಷೇತ್ರದ ಕೃಷ್ಣಯ್ಯ ಸೆಟ್ಟಿ ಸೇರಿದಂತೆ ಹಲವರು ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದು ತೀವ್ರ ಲಾಬಿ ನಡೆಸುತ್ತಿದ್ದಾರೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ವರ್ತೂರು ಪ್ರಕಾಶ್, ಬಾಲಚಂದ್ರ ಜಾರಕಿಹೊಳಿ, ಸದಾನಂದ ಗೌಡ, ಈಶ್ವರಪ್ಪ, ಬಿಜೆಪಿ, ಮಂತ್ರಿಗಿರಿ