ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ಉಪ ಚುನಾವಣೆ: ಬಿಜೆಪಿಯಿಂದ ಕರಡಿ ಸಂಗಣ್ಣ ಸ್ಪರ್ಧೆ: ಈಶ್ವರಪ್ಪ (Koppal | By-election | Karadi sanganna | BJP | Congress | JD(S) | Kannada News, Karnataka News, Latest Karnataka News)
PTI
ಭಾರಿ ಕುತೂಹಲ ಕೆರಳಿಸಿರುವ ಕೊಪಪ್ಳ ಉಪಚುನಾವಣೆಗೆ ಬಿಜೆಪಿಯಿಂದ ಮಾಜಿ ಶಾಸಕ, ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಕರಡಿ ಸಂಗಣ್ಣ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಮಾತನಾಡಿ, ಕೊಪ್ಪಳ ಉಪಚುನಾವಣೆಗೆ ಮಾಜಿ ಶಾಸಕ ಕರಡಿ ಸಂಗಣ್ಣ ಅವರ ಆಯ್ಕೆಗೆ ಬಹುತೇಕ ಒಮ್ಮತವಿದೆ ಎಂದು ಹೇಳಿದ್ದಾರೆ.

ಉಪಚುನಾವಣೆ ಸೆಪ್ಟೆಂಬರ್ 26 ರಂದು ನಡೆಯಲಿದ್ದು, ಈಗಗಾಲೇ ಬೂತ್ ಮಟ್ಟದಲ್ಲಿ ಕಾರ್ಯವನ್ನು ಆರಂಭಿಸಿದ್ದು, ಬಿಜೆಪಿ ಪಕ್ಷ ಖಂಡಿತವಾಗಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೊಪ್ಪಳ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದ ನಂತರ ಆಪರೇಷನ್ ಕಮಲಕ್ಕೆ ಬಲಿಯಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಮುಖ್ಯಮಂತ್ರಿ ಸದಾನಂದಗೌಡರು ಕೊಪ್ಪಳದಿಂದ ಕಣಕ್ಕಿಳಿಯಲಿದ್ದಾರೆ ಎನ್ನುವ ಉಹಾಪೋಹಗಳಿದ್ದವು. ಆದರೆ, ಬಿಜೆಪಿ ರಾಜ್ಯಾಧ್ಯಕ್ಷರೇ ಸಂಗಣ್ಣ ಅಭಿರ್ಥಿಯಾಗಿರುವುದನ್ನು ಘೋಷಿಸಿದ್ದರಿಂದ ಎಲ್ಲಾ ಉಹಾಪೋಹಗಳಿಗೆ ತೆರೆಬಿದ್ದಂತಾಗಿದೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಕೊಪ್ಪಳ ಉಪಚುನಾವಣೆ, ಕರಡಿ ಸಂಗಣ್ಣ, ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಭಾರತೀಯ ಸುದ್ದಿ, ಕರ್ನಾಟಕ ರಾಜಕೀಯ