ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ಭ್ರಷ್ಟಾಚಾರ: ಗಣಿ ಲೂಟಿಗೆ ಯಡಿಯೂರಪ್ಪ-ಕುಮಾರಸ್ವಾಮಿ ಸಹಿ (Kumaraswamy | Yeddyurappa | Illegal Mining Report | Lokayukta | U V Singh | CEC | Latest News in Kannada | Kannada News | Karnataka News | Latest Karn)
kumaraswamy
PR
ಅಕ್ರಮ ಗಣಿ ವರದಿಯಿಂದಾಗಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಇದೀಗ ಬಂಧನ ಭೀತಿಯಲ್ಲಿ ದಿನಕಳೆಯುತ್ತಿದ್ದರೆ, ಮತ್ತೊಂದೆಡೆ ಲೋಕಾಯುಕ್ತ ಮಧ್ಯಂತರ ವರದಿ ನಂತರವೂ ರಾಮಗಢದ ಸಂರಕ್ಷಿತ ಅರಣ್ಯಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅನುಮತಿ ನೀಡಿರುವುದು ಯು.ವಿ.ಸಿಂಗ್ ವರದಿಯಲ್ಲಿ ಉಲ್ಲೇಖವಾಗಿದೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ರಾಮಗಢದ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ರಾಮರಾವ್ ಎಂ.ಪೌಲ್ ಎಂಬವರಿಗೆ 70 ಎಕರೆ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ಯಡಿಯೂರಪ್ಪ ಗ್ರೀನ್ ಸಿಗ್ನಲ್ ನೀಡಿದ್ದರು.

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಶುರುವಾದ ಪರವಾನಿಗೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅರಣ್ಯನಾಶ ಮತ್ತು ಗಣಿ ಸಂಪತ್ತು ಲೂಟಿಗೆ ದಾರಿ ಮಾಡಿಕೊಟ್ಟಿದ್ದು ಯಡಿಯೂರಪ್ಪ ಅವಧಿಯಲ್ಲಿ. 2007ರಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕರಾಗಿದ್ದ ಐಎಎಸ್ ಅಧಿಕಾರಿ ಕೆ.ಎಸ್.ಪ್ರಭಾಕರ್ ಅವರು 746 ಅರ್ಜಿಗಳನ್ನು ಮೂಲೆಗುಂಪು ಮಾಡಿ ರಾಮರಾವ್ ಪೌಲ್‌ಗೆ ಗಣಿಗಾರಿಕೆ ಪರವಾನಿಗೆ ನೀಡಲು ಮುಂದಾಗಿದ್ದರು. ಆ ನಂತರದ ಮುಖ್ಯಮಂತ್ರಿಗಳು ಕೂಡ ಇದಕ್ಕೆ ಬೆಂಬಲವಾಗಿ ನಿಂತರು ಎಂದು ಯು.ವಿ.ಸಿಂಗ್ ಅವರು ದೋಷಾರೋಪ ಪಟ್ಟಿ ಮಾಡಿದ್ದಾರೆ.

ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ರಾಮಗಢ ಅರಣ್ಯ ಪ್ರದೇಶವನ್ನು 1963ರ ಕರ್ನಾಟಕ ಅರಣ್ಯ ಕಾಯಿದೆಯನ್ವಯ ಸಂರಕ್ಷಿತ ಅರಣ್ಯವೆಂದು ಘೋಷಿಸಲಾಗಿದೆ. ಸಿಇಸಿ (ಕೇಂದ್ರ ಉನ್ನತಾಧಿಕಾರ ಸಮಿತಿ) ವರದಿಯಲ್ಲಿಯೂ ರಾಮರಾವ್ ಪೌಲ್, ಆದರ್ಶ್ ಎಂಟರ್‌ಪ್ರೈಸಸ್, ಜೆ.ಎಂ.ವೃಷಭೇಂದ್ರಯ್ಯ, ಸ್ಟಾರ್ಕ್‌ಲೈನ್ ಮೈನಿಂಗ್ ಸಂಸ್ಥೆಗಳು ಅವ್ಯಾಹತವಾಗಿ ಅರಣ್ಯನಾಶ ಮಾಡಿ, ಗಣಿ ಸಂಪತ್ತು ಲೂಟಿ ಮಾಡಿರುವುದನ್ನು ವಿವರಿಸಿದೆ.

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಆರಂಭವಾದ ಪರವಾನಿಗೆ ಪ್ರಕ್ರಿಯೆ ಯಡಿಯೂರಪ್ಪ ಅವಧಿಯಲ್ಲಿ ಪೂರ್ಣಗೊಂಡಿದ್ದರಿಂದಾಗಿ ಇಬ್ಬರೂ ಈ ಪ್ರಕರಣದಲ್ಲಿ ಶಾಮೀಲಾಗಿರುವುದು ಮೇಲ್ನೋಟಕ್ಕೆ ಸಾಬೀತಾಗುತ್ತದೆ. ವರದಿಯ ಶಿಫಾರಸಿನಲ್ಲಿ ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ಎಂದಷ್ಟೇ ಉಲ್ಲೇಖಿತವಾಗಿದೆಯಾದರೂ ಅದು ಇಬ್ಬರನ್ನೂ ಆಪಾದಿತರ ಸ್ಥಾನದಲ್ಲಿ ನಿಲ್ಲಿಸುತ್ತದೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಕುಮಾರಸ್ವಾಮಿ, ಯಡಿಯೂರಪ್ಪ, ಅಕ್ರಮ ಗಣಿ ವರದಿ, ಲೋಕಾಯುಕ್ತ, ಯುವಿಸಿಂಗ್, ಸಿಇಸಿ, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಕರ್ನಾಟಕ ರಾಜಕೀಯ, ಕನ್ನಡ ಆನ್ಲೈನ್ ನ್ಯೂಸ್