ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ಯಡಿಯೂರಪ್ಪ ಲಂಚ ಪ್ರಕರಣ: ಸೆಪ್ಟೆಂಬರ್‌ 22ಕ್ಕೆ ಮುಂದೂಡಿಕೆ (B.S.Yeddyurappa, Former Karnataka CM,Lokayukta Court, YSV Datta,JDS Spokesperson,Latest News in Kannada,Upper Bhadra Irrigation Project)
PTI
ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಭದ್ರಾ ಮೇಲ್ದಂಡೆ ಯೋಜನೆಯ 2ನೇ ಹಂತದ ಕಾಮಗಾರಿಯ ಗುತ್ತಿಗೆ ನೀಡಲು ನಿರ್ಮಾಣ ಕಂಪನಿಗಳಿಂದ ಲಂಚ ಪಡೆದಿದ್ದಾರೆ ಎಂದು ಆಪಾದಿಸಿ ಸಲ್ಲಿಸಿದ್ದ ಅರ್ಜಿಯ ಕುರಿತು ಶನಿವಾರ ವಿಚಾರಣೆ ನಡೆಸಿದ ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಚಾರಣೆಯನ್ನು ಸೆಪ್ಟೆಂಬರ್‌ 22ಕ್ಕೆ ಮುಂದೂಡಿದೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಅವರ ಇಬ್ಬರು ಪುತ್ರರಾದ ಬಿ.ವೈ.ರಾಘವೇಂದ್ರ, ವಿಜಯೇಂದ್ರ ಹಾಗೂ ಅಳಿಯ ಸೋಹನ್‌ ಕುಮಾರ್‌ ಅವರು ಭದ್ರಾ ಮೇಲ್ದಂಡೆ ಯೋಜನೆಯ 2ನೇ ಹಂತದ ಕಾಮಗಾರಿಯ ಗುತ್ತಿಗೆ ನೀಡಿದ್ದಕ್ಕಾಗಿ ಎರಡು ಕಂಪನಿಗಳಿಂದ 13 ಕೋಟಿ ರೂ.ಪಡೆದಿದ್ದರು ಎಂದು ಆಪಾದಿಸಿ ಜಾತ್ಯತೀತ ಜನತಾ ದಳದ ವಕ್ತಾರ ವೈ.ಎಸ್‌.ವಿ ದತ್ತಾ ಅವರು ಜುಲೈ 27ರಂದು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಯಡಿಯೂರಪ್ಪ ಲಂಚ ಪಡೆದು ಕಾಮಗಾರಿ ಟೆಂಡರ್‌ಗಾಗಿ ಅತಿ ಹೆಚ್ಚು ಮೊತ್ತ ನಮೂದಿಸಿದ್ದ ಈ ಕಂಪನಿಗಳಿಗೆ ಕಾಮಗಾರಿ ಗುತ್ತಿಗೆ ನೀಡಿದ್ದರು ಎಂದೂ ದತ್ತಾ ಆರೋಪಿಸಿದ್ದರು.

ಈ ಕುರಿತು ವಿಚಾರಣೆ ಕೈಗೆತ್ತಿಕೊಂಡಿದ್ದ ನ್ಯಾಯಮೂರ್ತಿ ಎನ್‌.ಕೆ ಸುಧೀಂದ್ರ ರಾವ್‌ ಅವರು ಈ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಆಗಸ್ಟ್‌ 10ರಂದು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿದ್ದರು.

ಈ ಕುರಿತು ನ್ಯಾಯಾಲಯಕ್ಕೆ ವಿವರಣೆ ನೀಡಿದ್ದ ಲೋಕಾಯುಕ್ತರ ಪರ ವಕೀಲರು, ಆಪಾದನೆಯ ಕುರಿತ ತನಿಖೆ ಪ್ರಗತಿಯಲ್ಲಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರಿಂದ ನ್ಯಾಯಾಧೀಶರು ವಿಚಾರಣೆಯನ್ನು ಸೆಪ್ಟೆಂಬರ್‌ 22ಕ್ಕೆ ಮುಂದೂಡಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಆರ್‌. ಎನ್‌. ಶೆಟ್ಟಿ ಮತ್ತು ಜ್ಯೋತಿ ಲಿಮಿಟೆಡ್‌ನಿಂದ ಲಂಚ ಪಡೆದಿದ್ದಾರೆ ಎಂದು ಜೆಡಿಎಸ್‌ ವಕ್ತಾರ ವೈ.ಎಸ್‌.ವಿ. ದತ್ತಾ ಅವರು ಸಲ್ಲಿಸಿದ ದೂರಿನ ಮೇರೆಗೆ ಲಂಚ ನಿಗ್ರಹ ಕಾಯ್ದೆಯಡಿ ಬಿ.ಎಸ್‌.ಯಡ್ಯೂರಪ್ಪ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಮುಖ್ಯಮಂತ್ರಿ ಬಿಎಸ್ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ, ಭದ್ರಾ ಮೇಲ್ದಂಡೆ ಯೋಜನೆ, ಕನ್ನಡ ಸುದ್ದಿ, ವೈಎಸ್ವಿ ದತ್ತಾ, ಜಾತ್ಯತೀತ ಜನತಾ ದಳದ ವಕ್ತಾರಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಭಾರತೀಯ ಸುದ್ದಿ, ಕರ್ನಾಟಕ ರಾಜಕೀಯ