ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ರಾಮುಲು ರಾಜೀನಾಮೆ: ಬಿಜೆಪಿಯಲ್ಲಿ ಆತಂಕದ ಛಾಯೆ (Sriramulu | MLA | Resigned | BJP | Reddy brothers | Congress | Kannada News | Karnataka News)
PR
ಮಾಜಿ ಸಚಿವ ಶ್ರೀರಾಮುಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಬಿಜೆಪಿ ವಲಯದಲ್ಲಿ ಆತಂಕದ ಛಾಯೆ ಮೂಡಿಸಿದೆ.

ಪಕ್ಷದ ವರಿಷ್ಠರೊಂದಿಗೆ ಮಾತುಕತೆ ನಡೆಸದೆ ದಿಢೀರ್ ರಾಜೀನಾಮೆ ಘೋಷಿಸಿರುವುದು ದಿಗ್ಬ್ರಮೆ ಮೂಡಿಸಿದೆ ಎಂದು ಬಿಜೆಪಿ ಕೆಲ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತಮ್ಮ ರಾಜೀನಾಮೆಯಿಂದ ಸದಾನಂದಗೌಡ ನೇತೃತ್ವದ ಸರಕಾರಕ್ಕೆ ಧಕ್ಕೆಯಾಗದು ಎಂದು ರಾಮುಲು ಹೇಳಿಕೆ ನೀಡಿದ್ದರೂ ಅವರ ಮುಂದಿನ ನಡೆ ಭಾರಿ ಕುತೂಹಲ ಕೆರಳಿಸಿದೆ.

ಶ್ರೀರಾಮುಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೆ,ಮುಖ್ಯಮಂತ್ರಿ ಸದಾನಂದ ಗೌಡರು ತಮ್ಮ ನಾಗ್ಪುರ್ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.

ಸಚಿವರಾದ ಸುರೇಶ್ ಕುಮಾರ್, ರೇಣುಕಾಚಾರ್ಯರೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸದಾನಂದ ಗೌಡರು ಚರ್ಚಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಮುಲು ರಾಜೀನಾಮೆ ಬಳಿಕ ರೆಡ್ಡಿ ಸಹೋದರರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವ ರಾಜೀಕಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಶ್ರೀರಾಮುಲು, ಶಾಸಕ, ರಾಜೀನಾಮೆ, ಬಿಜೆಪಿ, ರೆಡ್ಡಿ ಸಹೋದರರು, ಕಾಂಗ್ರೆಸ್, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಭಾರತೀಯ ಸುದ್ದಿ, ಕರ್ನಾಟಕ ರಾಜಕೀಯ