ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ವಾಜಪೇಯಿ ನೆನೆದು ಗದ್ಗದಿತರಾದ ಡಿ.ವಿ.ಸದಾನಂದ ಗೌಡ (Atal Bihari Vajpayee | Sadananda gowda | BJP | Yeddyurappa | Karnataka News | Bangalore News,)
ಅಟಲ್ ಬಿಹಾರಿ ವಾಜಪೇಯಿಯವರಂಥ ಹಿರಿಯರು ಕಟ್ಟಿ ಬೆಳೆಸಿದಂತಹ ಭಾರತೀಯ ಜನತಾ ಪಕ್ಷವನ್ನು ನಾವು ಒಗ್ಗಟ್ಟಿನಿಂದ ದುಡಿಯುವ ಮೂಲಕ ಉಳಿಸಿಕೊಂಡು ಹೋಗಬೇಕಾದ ಮಹತ್ತರವಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳುತ್ತಲೇ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಗದ್ಗದಿತರಾದ ಪ್ರಸಂಗ ಬುಧವಾರ ನಡೆಯಿತು.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಬುಧವಾರ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇರಕೂಡದು. ಎಲ್ಲರೂ ಒಗ್ಗಟ್ಟಾಗಿ ಪಕ್ಷವನ್ನು ಕಟ್ಟಿ ಬೆಳೆಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದಾಗ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಭೇಟಿ ಮಾಡಿದ್ದ ಸಂದರ್ಭದಲ್ಲಿ ಅವರು, ಪಕ್ಷವನ್ನು ಶ್ರಮಪಟ್ಟು ಕಟ್ಟಿದ್ದೇವೆ ಅದನ್ನು ಉಳಿಸಿಕೊಳ್ಳಿ ಎಂದು ನೀಡಿದ್ದ ಸಲಹೆಯನ್ನು ಸ್ಮರಿಸಿ ಗೌಡರು ಕಣ್ಣೀರಿಟ್ಟರು.

ಆದರೆ ಇತ್ತೀಚೆಗಿನ ಕೆಲವು ಬೆಳವಣಿಗೆ ಮತ್ತು ತಮಗೆ ಸೂಕ್ತವಾದ ರೀತಿಯಲ್ಲಿ ಬೆಂಬಲ ಸಿಗುತ್ತಿಲ್ಲ ಎಂಬ ಬಗ್ಗೆ ಸದಾನಂದ ಗೌಡರು ಪರೋಕ್ಷವಾಗಿ ತಮ್ಮ ಅಸಮಾಧಾನ ಹೊರಹಾಕಿದರು. ತಾವೂ ಒತ್ತಡದಲ್ಲಿ ಕೆಲಸ ಮಾಡುತ್ತಿರುವುದಾಗಿಯೂ ತಮ್ಮ ಅಸಹಾಯಕತೆಯನ್ನೂ ತೋಡಿಕೊಂಡರು.

ಯಾವುದೇ ಅಸಮಾಧಾನ ಇದ್ದರೂ ಕೂಡ ಅದನ್ನು ಕೂಡಲೇ ಪರಿಹರಿಸಿಕೊಳ್ಳಬೇಕೆ ವಿನಃ, ಅದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುವ ರೀತಿಯಲ್ಲಿ ನಡೆದುಕೊಳ್ಳುವುದು, ಅಸಹಕಾರ ನೀಡುವುದು ಉತ್ತಮವಾದ ಬೆಳವಣಿಗೆ ಅಲ್ಲ ಎಂದರು.

ಇಂದು ನಡೆದ ಸಭೆಯಲ್ಲಿ ಕೊಪ್ಪಳ ಉಪ ಚುನಾವಣೆ ಬಗ್ಗೆ, ಪಕ್ಷ ಸಂಘಟನೆ ಕುರಿತು ಚರ್ಚೆ ನಡೆದಿರುವುದಾಗಿ ಸಭೆಯ ನಂತರ ಬಿಜೆಪಿ ವಕ್ತಾರ ಆಯನೂರು ಮಂಜುನಾಥ್ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ ತಿಳಿಸಿದರು.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಅಟಲ್ ಬಿಹಾರಿ ವಾಜಪೇಯಿ, ಸದಾನಂದ ಗೌಡ, ಬಿಜೆಪಿ, ಯಡಿಯೂರಪ್ಪ, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಭಾರತೀಯ ಸುದ್ದಿ, ಕರ್ನಾಟಕ ರಾಜಕೀಯ, ಕನ್ನಡ ಆ