ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ರೆಡ್ಡಿ ಬಂಧನ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತರೋಲ್ಲ: ಸದಾನಂದ ಗೌಡ (Janardana Reddy | CBI | Illegal Mining | Sadananda Gowda | BJP | Karnataka News | Bangalore News,)
ಗಣಿಧಣಿ, ಮಾಜಿ ಸಚಿವ ಜನಾರ್ದನ ರೆಡ್ಡಿ ಬಂಧನ ಹಾಗೂ ರೆಡ್ಡಿ ಸಹೋದರರ ವಿಚಾರಣೆಯಿಂದ ಬಿಜೆಪಿ ವರ್ಚಸ್ಸಿಗೆ ಯಾವುದೇ ರೀತಿಯಲ್ಲೂ ಧಕ್ಕೆಯಾಗಿಲ್ಲ ಎಂದು ಮುಖ್ಯಮಂತ್ರಿ ಸದಾನಂದ ಗೌಡ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೆಡ್ಡಿ ಸಹೋದರರ ಮೇಲಿನ ಆರೋಪ ಹೊಸದೇನಲ್ಲ. ಮೊದಲಿನಿಂದಲೂ ಅವರ ಮೇಲೆ ಆರೋಪ ಕೇಳಿಬರುತ್ತಿದೆ. ಇದರಿಂದಾಗಿ ರಾಜ್ಯ ಬಿಜೆಪಿಗೆ ತೊಂದರೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಜನಾರ್ದನ ರೆಡ್ಡಿಯವರ ವಿಚಾರಣೆ ನಡೆಯುತ್ತಿದೆ. ಅವರು ಆರೋಪಿಯಷ್ಟೇ, ಆದರೆ ಅಪರಾಧಿಯಲ್ಲ ಎಂದು ಈ ಸಂದರ್ಭದಲ್ಲಿ ಸಮರ್ಥಿಸಿಕೊಂಡರು.

ಗುಲ್ಬರ್ಗಾದಲ್ಲಿ ನಡೆದ ವಿಮೋಚನಾ ದಿನದ ಸಂಭ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, ರಾಜಕೀಯ ಪ್ರೇರಿತವಾಗಿ ಸಿಬಿಐ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದರು. ಅಲ್ಲದೇ ಲೋಕಾಯುಕ್ತ ವರದಿಯಲ್ಲಿ ಹೆಸರಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಜನಾರ್ದನ ರೆಡ್ಡಿ, ಸಿಬಿಐ, ಸದಾನಂದ ಗೌಡ, ಬಿಜೆಪಿ, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಭಾರತೀಯ ಸುದ್ದಿ, ಕರ್ನಾಟಕ ರಾಜಕೀಯ, ಕನ್ನಡ ಆನ್ಲೈನ್ ನ