ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ಕೊಪ್ಪಳ ಮಿನಿಸಮರ: ಮತದಾನಕ್ಕೆ ಕ್ಷಣಗಣನೆ (Koppal | Byelection | Congress | BJP | JDS)
PR
ಆಪರೇಷನ್ ಕಮಲಕ್ಕೆ ಒಳಗಾಗಿ ಜೆಡಿಎಸ್ ಶಾಸಕರಾಗಿದ್ದ ಸಂಗಣ್ಣ ಕರಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕೊಪ್ಪಳ ವಿಧಾನಸಭೆ ಕ್ಷೇತ್ರಕ್ಕೆ ನಾಳೆ ಉಪ ಚುನಾವಣೆ ನಡೆಯುತ್ತಿದೆ,

ನಾಳೆ ನಡೆಯಲಿರುವ ಮತದಾನಕ್ಕೆ ಯಾವುದೇ ಅಹಿತಕರ ಘಟನೆ ನಡೆಯದಂತೆ, ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು,ಮತದಾನಕ್ಕೆ ಸಂಪೂರ್ಣ ಸಜ್ಜುಗೊಳಿಸಲಾಗಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ನಿನ್ನೆವರೆಗೆ ಕಳೆದ ಒಂದು ವಾರದಿಂದ ಕ್ಷೇತ್ರದಲ್ಲಿ ಠಿಖಾಣಿ ಹೂಡಿದ್ದು, ತಮ್ಮ ಅಭ್ಯರ್ಥಿಗಳಿಗೆ ಮತ ನೀಡುವಂತೆ ಮನವಿ ಮಾಡಿದ್ದರು.

ಕಾಂಗ್ರೆಸ್ ಪಕ್ಷದ ಸಿದ್ಧರಾಮಯ್ಯ, ಮುಖ್ಯಮಂತ್ರಿ ಸದಾನಂದ ಗೌಡ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಬೆಂಬಲಿಗರ ಪರ ಅಬ್ಬರದ ಪ್ರಚಾರ ನಡೆಸಿ, ತಮ್ಮದೇ ಅಭ್ಯರ್ಥಿ ಚುನಾವಣೆಯಲ್ಲಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಬಿಜೆಪಿಯಿಂದ ಸಂಗಣ್ಣ ಕರಡಿ, ಕಾಂಗ್ರೆಸ್‌ನಿಂದ ಬಸವರಾಜ್ ಹಿತ್ಲಾಳ ಮತ್ತು ಜೆಡಿಎಸ್‌ನಿಂದ ಪ್ರದೀಪ್ ಗೌಡ ಹಾಗೂ ಪಕ್ಷೇತರರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರೂ ಕಾಂಗ್ರೆಸ್-ಬಿಜೆಪಿ-ಜೆಡಿಎಸ್ ಮಧ್ಯೆ ತ್ರೀಕೋನ ಪೈಪೋಟಿ ಎರ್ಪಟ್ಟಿದೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಕೊಪ್ಪಳ, ಉಪಚುನಾವಣೆ, ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಭಾರತೀಯ ಸುದ್ದಿ, ಕರ್ನಾಟಕ ರಾಜಕೀಯ