ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ಕೊಪ್ಪಳ ಮಿನಿಸಮರ: ಮತಪೆಟ್ಟಿಗೆಯಲ್ಲಿ ಅಭ್ಯರ್ಥಿಗಳ ಹಣೆಬರಹ (Koppal | Byelection | Congress | BJP | JDS)
PR
ಆಪರೇಷನ್ ಕಮಲಕ್ಕೆ ಒಳಗಾಗಿ ಜೆಡಿಎಸ್ ಶಾಸಕರಾಗಿದ್ದ ಸಂಗಣ್ಣ ಕರಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕೊಪ್ಪಳ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯ ಮತದಾನ ಸೋಮವಾರ ಬೆಳಿಗ್ಗೆ ಆರಂಭಗೊಂಡಿದ್ದು, ಬಿಸಿಲ ಬೇಗೆಯಿಂದಾಗಿ ಜನರು ಮತಗಟ್ಟೆಗೆ ಬರಲು ಹಿಂದೇಟು ಹಾಕಿದ ಪರಿಣಾಮ ಮಧ್ಯಾಹ್ನದವರೆಗೆ ಮತದಾನ ಮಂದಗತಿಯಲ್ಲಿ ಸಾಗಿತ್ತು. ಸಂಜೆ ಮತದಾನ ಅಂತ್ಯಗೊಂಡಿದ್ದು, ಶೇ.70ರಷ್ಟು ಮತದಾನವಾಗಿದೆ.

ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 210 ಮತಗಟ್ಟೆಗಳಿದೆ. ಅದರಲ್ಲಿ 94 ಅತಿ ಸೂಕ್ಷ್ಮ, 65 ಸೂಕ್ಷ್ಮ ಹಾಗೂ 51 ಸಾಮಾನ್ಯ ಮತಗಟ್ಟೆಗಳಿವೆ. ಎಲ್ಲಾ ಮತಗಟ್ಟೆಗಳಲ್ಲಿಯೂ ಮತದಾನ ಮಂದಗತಿಯಲ್ಲಿ ಸಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದೆ ಶೇ.65ರಷ್ಟು ಮತದಾನವಾಗಿರುವುದಾಗಿ ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ನಿನ್ನೆವರೆಗೆ ಕಳೆದ ಒಂದು ವಾರದಿಂದ ಕ್ಷೇತ್ರದಲ್ಲಿ ಠಿಖಾಣಿ ಹೂಡಿದ್ದು, ತಮ್ಮ ಅಭ್ಯರ್ಥಿಗಳಿಗೆ ಮತ ನೀಡುವಂತೆ ಮನವಿ ಮಾಡಿದ್ದರು.

ಕಾಂಗ್ರೆಸ್ ಪಕ್ಷದ ಸಿದ್ಧರಾಮಯ್ಯ, ಮುಖ್ಯಮಂತ್ರಿ ಸದಾನಂದ ಗೌಡ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಬೆಂಬಲಿಗರ ಪರ ಅಬ್ಬರದ ಪ್ರಚಾರ ನಡೆಸಿ, ತಮ್ಮದೇ ಅಭ್ಯರ್ಥಿ ಚುನಾವಣೆಯಲ್ಲಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಬಿಜೆಪಿಯಿಂದ ಸಂಗಣ್ಣ ಕರಡಿ, ಕಾಂಗ್ರೆಸ್‌ನಿಂದ ಬಸವರಾಜ್ ಹಿಟ್ಲಾಳ್ ಮತ್ತು ಜೆಡಿಎಸ್‌ನಿಂದ ಪ್ರದೀಪ್ ಗೌಡ ಹಾಗೂ ಪಕ್ಷೇತರರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರೂ ಕಾಂಗ್ರೆಸ್-ಬಿಜೆಪಿ-ಜೆಡಿಎಸ್ ಮಧ್ಯೆ ತ್ರೀಕೋನ ಪೈಪೋಟಿ ಏರ್ಪಟ್ಟಿತ್ತು. ಇಂದು ಘಟಾನುಟಿಗಳ ಭವಿಷ್ಯ ಮಂತ್ರಯಂತ್ರ ಸೇರಿದ್ದು, ಸೆಪ್ಟೆಂಬರ್ 29ರಂದು ಮತಎಣಿಕೆ ನಡೆಯಲಿದ್ದು ವಿಜಯಲಕ್ಷ್ಮಿ ಯಾರಿಗೆ ಒಲಿಯಲಿದೆ ಎಂಬುದನ್ನು ಕಾದುನೋಡಬೇಕಾಗಿದೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಕೊಪ್ಪಳ, ಉಪಚುನಾವಣೆ, ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಭಾರತೀಯ ಸುದ್ದಿ, ಕರ್ನಾಟಕ ರಾಜಕೀಯ