ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ಗಾಂಧಿ ಬಗ್ಗೆ ಮಾತನಾಡುವ ನೈತಿಕತೆ ನಮಗಿಲ್ಲ: ಯಡಿಯೂರಪ್ಪ (Yaddyruppa | Mahatma Gandhi | Karnataka | State Politics)
ರಾಷ್ಟ್ರಪಿತ ಮಹಾತ್ಮಗಾಂಧಿ ಬಗ್ಗೆ ಮಾತನಾಡುವ ನೈತಿಕತೆ ನಮ್ಮಂಥ ರಾಜಕಾರಣಿಗಳಿಗೆ ಇಲ್ಲ ಎಂದು ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಮಹಾತ್ಮಗಾಂಧಿ ಜನ್ಮದಿನ ಪ್ರಯುಕ್ತ ಗಾಂಧಿ ಸ್ಮಾರಕ ನಿಧಿಯು ನಗರದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ತಿಳಿಸಿದ್ದ ಯಡಿಯೂರಪ್ಪ, ಇಂದಿನ ಸಮಾಜದಲ್ಲಿ ನಮ್ಮನ್ನು ಸೇರಿದಂತೆ ಯಾವುದೇ ರಾಜಕಾರಣಿಗಳಿಗೆ ಗಾಂಧೀಜಿ ತತ್ವ ಸಿದ್ಧಾಂತಗಳ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದರು.

ಅಕ್ರಮ ಗಣಿಗಾರಿಕೆ ಸಹಿತ ಹಲವು ಆರೋಪಗಳಲ್ಲಿ ಸಿಲುಕಿರುವ ಮಾಜಿ ಸಿಎಂ ಯಡಿಯೂರಪ್ಪ ಅವರ ಇಂತಹ ಹೇಳಿಕೆಯು ರಾಜ್ಯ ರಾಜಕೀಯದಲ್ಲಿ ಬಹಳ ಕುತೂಹಲಕ್ಕೆ ಕಾರಣವಾಗಿದೆ. ಅಂದ ಹಾಗೇ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಇದೀಗ ಪಶ್ಚಾತ್ತಾಪ ಕಾಡುತ್ತಿದೆಯೇ ಎಂಬ ಅನುಮಾನ ಜನಸಾಮಾನ್ಯರಲ್ಲಿ ಮೂಡುತ್ತಿರುವುದು ಸುಳ್ಳಲ್ಲ.

ಹಿಂದೊಮ್ಮೆ ಮಹಾತ್ಮಗಾಂಧಿ ರೈಲಿನಲ್ಲಿ ಮೂರನೇ ದರ್ಜೆಯಲ್ಲಿ ಪಯಣಿಸುತ್ತಿದ್ದರು. ಯಾಕೆಂದರೆ ಅದಕ್ಕಿಂತ ಕೆಳಮಟ್ಟದ ನಾಲ್ಕನೇ ದರ್ಜೆ ಅಂದು ಇರಲಿಲ್ಲ. ಇಂತಹ ಗಾಂಧೀಜಿ ತತ್ವಗಳು ನಮಗೆಲ್ಲರಿಗೂ ಆದರ್ಶವಾಗಿದೆ ಎಂದು ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.

ಗಾಂಧೀಜಿ ವಿಚಾರಗಳನ್ನು ರಾಜಕಾರಣಿಗಳು ತಮ್ಮ ಬದುಕಿನಲ್ಲಿ ಆಳವಡಿಸಿಕೊಳ್ಳಬೇಕು. ಆಗ ಮಾತ್ರ ದೇಶ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದವರು ಸೇರಿಸಿದರು.

ವೆಬ್‌ದುನಿಯಾ ಕನ್ನಡ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಯಡಿಯೂರಪ್ಪ, ಬಿಎಸ್ವೈ, ಗಾಂಧೀಜಿ, ಮಹಾತ್ಮಗಾಂಧಿ, ಗಾಂಧಿ ಜಯಂತಿ, ಬೆಂಗಳೂರು, ಕರ್ನಾಟಕ ರಾಜಕೀಯ, ಮಾಜಿ ಸಿಎಂ ಯಡಿಯೂರಪ್ಪ, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಭಾರತೀಯ ಸುದ್ದಿ, ಕರ್ನಾಟಕ ರಾಜಕೀಯ