ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » 'ಕೈ' ಹೀನಾಯ ಸೋಲಿಗೆ ಕಾರಣ ಏನು?: ಸೋನಿಯಾ ಗಾಂಧಿ ಗರಂ (Congress | Madhusudan Mistry | Sonia Gandhi | By election | KPCC | Karnataka News | Bangalore News,)
ರಾಜ್ಯದಲ್ಲಿ ನಡೆದ ಉಪಚುನಾವಣೆ, ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಕಾರಣ ಏನು ಎಂದು ವಿವರಣೆ ಕೊಡುವಂತೆ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊತ್ತಿರುವ ಮಧುಸೂದನ್ ಮಿಸ್ತ್ರಿ ಅವರಿಗೆ ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

2008ರ ಸಾರ್ವತ್ರಿಕ ಚುನಾವಣೆ ನಂತರ ಕಾಂಗ್ರೆಸ್ ಪಕ್ಷ ಲೋಕಸಭೆ, ಉಪಚುನಾವಣೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಕಾಂಗ್ರೆಸ್ ಸತತವಾಗಿ ಸೋಲು ಅನುಭವಿಸಿದೆ. ಆ ಹಿನ್ನೆಲೆಯಲ್ಲಿ ಸೋಲಿಗೆ ಕಾರಣ ಏನು ಎಂಬ ಬಗ್ಗೆ ವರದಿಯೊಂದಿಗೆ ಖುದ್ದು ಭೇಟಿಯಾಗುವಂತೆ ಮಿಸ್ತ್ರಿ ಅವರಿಗೆ ಸೋನಿಯಾ ಪತ್ರ ಬರೆದಿದ್ದಾರೆ.

ಆಡಳಿತಾರೂಢ ಬಿಜೆಪಿ ಸ್ವಜನಪಕ್ಷಪಾತ, ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿದ್ದರೂ ಕೂಡ, ಆ ವಿಷಯವನ್ನು ಸಮರ್ಥವಾಗಿ ನಿಭಾಯಿಸಿ ಕಾಂಗ್ರೆಸ್ ಪಕ್ಷವನ್ನು ಗೆಲುವಿನ ಹಾದಿಯಲ್ಲಿ ಮುನ್ನೆಡಸಲು ಕಾಂಗ್ರೆಸ್ ಮುಖಂಡರು ವಿಫಲರಾಗಿರುವುದು ಸೋನಿಯಾ ಆಕ್ರೋಶಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ರಾಜ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಗೆಲುವು ಸಾಧಿಸದೆ ಸತತ ಸೋಲಿನ ಸರಣಿ ಮುಂದುವರಿಸಲು ಕಾರಣ ಏನು, ಈ ಬಗ್ಗೆ ಪೂರ್ಣ ವಿವರ ಕೊಡುವಂತೆ ಮಿಸ್ತ್ರಿಗೆ ಸೋನಿಯಾ ತಾಕೀತು ಮಾಡಿದ್ದಾರೆ. ಅಲ್ಲದೇ ರಾಜ್ಯ ಕಾಂಗ್ರೆಸ್ ಮುಖಂಡರಿಗೂ ದೆಹಲಿಗೆ ಬುಲಾವ್ ಬರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗೆ ಕೊಪ್ಪಳದಲ್ಲಿ ನಡೆದ ಉಪ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪರಾಜಯಗೊಂಡಿತ್ತು.

ತೀವ್ರ ಅನಾರೋಗ್ಯದಿಂದ ಅಮೆರಿಕದಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಭಾರತಕ್ಕೆ ವಾಪಸ್ ನಂತರ ಮೊದಲ ಬಾರಿಗೆ ರಾಜ್ಯ ರಾಜಕಾರಣದ ಬಗ್ಗೆ ಗಮನ ಹರಿಸಿರುವ ಸೋನಿಯಾ ಗಾಂಧಿ ಕಾಂಗ್ರೆಸ್ ಸೋಲಿನ ಬಗ್ಗೆ ಗರಂ ಆಗಿದ್ದು, ಈ ಬಗ್ಗೆ ವಿವರಣೆ ಕೇಳಿದ್ದಾರೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಕಾಂಗ್ರೆಸ್, ಸೋನಿಯಾ ಗಾಂಧಿ, ಉಪ ಚುನಾವಣೆ ಸೋಲು, ಕೆಪಿಸಿಸಿ, ಮಧುಸೂದನ್ ಮಿಸ್ತ್ರಿ, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಕರ್ನಾಟಕ ರಾಜಕೀಯ, ಕನ್ನಡ ಆನ್ಲೈನ್ ನ್ಯೂಸ್