ಸರ್ವಜ್ಞ | ಪ್ರಚಲಿತ | ವಿಮಾನ ದುರಂತ | ರಾಷ್ಟ್ರೀಯ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ಹೊಸ ಪಕ್ಷ ಕಟ್ಟಿದೋರು ಉದ್ಧಾರ ಆಗಿಲ್ಲ: ಅಶೋಕ್ (R Ashok | bjp | Sriramulu | Bellary Byepoll)
R Ashok
WD
ರಾಜ್ಯದಲ್ಲಿ ಹೊಸ ಪಕ್ಷ ಕಟ್ಟಿದೋರು ಯಾರೂ ಉದ್ಧಾರ ಆಗಿಲ್ಲ, ಇಲ್ಲಿ ಏನಿದ್ರೂ ರಾಷ್ಟ್ರೀಯ ಪಕ್ಷಗಳಿಗೇ ಹೆಚ್ಚು ಮಾನ್ಯತೆಯಿದೆ ಎಂದು ಗೃಹ ಸಚಿವ ಆರ್. ಅಶೋಕ್‌ ಅವರು ಶ್ರೀರಾಮುಲು ಹೇಳಿಕೆಗೆ ಈ ರೀತಿ ತಿರುಗೇಟು ನೀಡಿದ್ದಾರೆ.

ಬಿಜೆಪಿಯ ವಿರುದ್ಧ ಬಂಡೆದ್ದು, ಬಳ್ಳಾರಿ ಉಪ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಫರ್ಧಿಸಿರುವ ಮಾಜಿ ಸಚಿವ ಶ್ರೀರಾಮುಲು ಅವರು ರಾಜ್ಯದಲ್ಲಿ ಹೊಸ ಪಕ್ಷ ಕಟ್ಟುವ ಕುರಿತು ಮಂಗಳವಾರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಶೋಕ್‌ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಕಟ್ಟಿದೋರೆಲ್ಲಾ ಹೇಳ ಹೆಸರಿಲ್ಲದಂತಾಗಿದ್ದಾರೆ ಇಲ್ಲೇನಿದ್ದರೂ ರಾಷ್ಟ್ರೀಯ ಪಕ್ಷಗಳಿಗೆ ಹೆಚ್ಚು ಬೆಲೆಯಿದೆ ಎಂದು ಅಭಿಪ್ರಾಯಪಟ್ಟರು.

ಬಿರುಗಾಳಿ ಬೀಸೋಲ್ಲ:

ಶ್ರೀರಾಮುಲು ಅವರು ತಮ್ಮ ಬೆಂಬಲಕ್ಕಿರುವ ಶಾಸಕರು ಸರಕಾರಕ್ಕೆ ನೀಡಿರುವ ಬೆಂಬಲವನ್ನು ಹಿಂತೆಗೆದುಕೊಂಡರೆ ಬಿರುಗಾಳಿ ಬೀಸಲಿದೆ ಎಂಬ ಊಹಾಪೋಹಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶ್ರೀರಾಮುಲು ಯಾವುದೇ ಬಿರುಗಾಳಿಯೂ ಸರಕಾರವನ್ನು ಬೀಳಿಸುವುದಿಲ್ಲ. ಮುಖ್ಯಮಂತ್ರಿ ಸದಾನಂದ ಗೌಡ ಅವರು ಬಾಕಿ ಉಳಿದಿರುವ ಒಂದೂವರೆ ವರ್ಷ ಅವಧಿಯಲ್ಲ ನಿರಾತಂಕವಾಗಿ ಆಡಳಿತ ನಡೆಸುತ್ತಾರೆ ಎಂದು ಹೇಳಿದರು.
ಇವನ್ನೂ ಓದಿ
WebduniaWebdunia