ಸರ್ವಜ್ಞ | ಪ್ರಚಲಿತ | ವಿಮಾನ ದುರಂತ | ರಾಷ್ಟ್ರೀಯ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ನಾನು ಮತ್ತೆ ಸಿಎಂ ಆಗಿಯೇ ಆಗ್ತೇನೆ: ಬಿಎಸ್‌ವೈ ಶಪಥ (Yedduyurappa | Chief Minister | Sadanandgowda | bjp | Congress | jds)
PR
ಕುತಂತ್ರಗಳಿಂದ ನನ್ನನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದಾರೆ. ಆದರೆ, ಸಿದ್ಧಗಂಗಾ ಶ್ರೀ ಗಳ ಆಶೀರ್ವಾದದಿಂದ ನಾನು ಮತ್ತೆ ಮುಖ್ಯಮಂತ್ರಿ ಆಗಿಯೇ ಆಗ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.

ತುಮಕೂರಿನ ಗುಬ್ಬಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಪಕ್ಷದ ಕೆಲವರು, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ನಾಯಕರು ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡಿದ್ದಾರೆ ಎಂದು ಕಿಡಿಕಾರಿದರು.

ಆದರೆ, ಇಂತಹ ಆರೋಪಗಳಿಗೆ ಹೆದರಿ ಓಡಿಹೋಗುವ ವ್ಯಕ್ತಿ ನಾನಲ್ಲ. ಸೂಕ್ತ ಸಮಯ ಬಂದಾಗ ಎಲ್ಲಾ ಆರೋಪಗಳಿಗೆ ತಕ್ಕ ಉತ್ತರ ನೀಡುತ್ತೇನೆ. ಕರ್ನಾಟಕ ರಾಜ್ಯವನ್ನು ದೇಶದಲ್ಲಿಯೇ ಮಾದರಿ ರಾಜ್ಯವಾಗಿಸಬೇಕು ಎನ್ನುವುದು ನನ್ನ ಪ್ರಮುಖ ಗುರಿಯಾಗಿದೆ ಎಂದರು.

ನಾನು ಯಾವುದೇ ಭ್ರಷ್ಟಾಚಾರ ಹಗರಣದಲ್ಲಿ ಭಾಗಿಯಾಗಿಲ್ಲ. ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಜನತೆಯ ಆಶೋತ್ತರಗಳಿಗೆ ಸ್ಪಂದಿಸಿದ್ದೇನೆ. ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದೇನೆ. ನನ್ನ ಜನಪರ ಕಾರ್ಯಗಳನ್ನು ನೋಡಿ ಬೆಚ್ಚಿದ ವಿರೋಧ ಪಕ್ಷಗಳು ನನ್ನನ್ನು ಅಧಿಕಾರದಿಂದ ಕೆಳಗಿಳಿಸಲು ತಂತ್ರಗಳನ್ನು ಹೂಡಿದವು ಎಂದು ನುಡಿದರು.

ಬಿಜೆಪಿಯಲ್ಲೂ ಕೂಡಾ ನನ್ನ ಏಳಿಗೆಯನ್ನು ಸಹಿಸದ ಕೆಲ ವ್ಯಕ್ತಿಗಳು ನನ್ನ ವಿರುದ್ಧವೇ ಪಿತೂರಿ ನಡೆಸಿ ವಿರೋಧಪಕ್ಷಗಳ ಪರವಾಗಿ ವರ್ತಿಸಿವೆ. ಇಂತಹ ವ್ಯಕ್ತಿಗಳಿಗೆ ಸೂಕ್ತ ಸಮಯದಲ್ಲಿ ತಕ್ಕಪಾಠ ಕಲಿಸಲಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ವೈ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಇವನ್ನೂ ಓದಿ
WebduniaWebdunia