ಸರ್ವಜ್ಞ | ಪ್ರಚಲಿತ | ವಿಮಾನ ದುರಂತ | ರಾಷ್ಟ್ರೀಯ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ಬಿಜೆಪಿ ಚುನಾವಣಾ ಪ್ರಚಾರದ ಅಧ್ಯಕ್ಷರಾಗಿ ಜನರ ಬಳಿಗೆ ಯಡಿಯೂರಪ್ಪ? (B.S. Yeddyurappa | Campaign Committee | Assembly Elections | Election Campaigning | Latest News in Kannada)
PR
ಅಕ್ರಮ ಪ್ರಕರಣಗಳ ಸುಳಿಯಲ್ಲಿ ಸಿಲುಕಿದ್ದರೂ ಮುಖ್ಯಮಂತ್ರಿ ಹುದ್ದೆಗಾಗಿ ಹೊಂಚುಹಾಕುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯ ಚುನಾವಣಾ ಪ್ರಚಾರದ ಅಧ್ಯಕ್ಷ ಸ್ಥಾನವನ್ನು ನೀಡಲು ಭಾರತೀಯ ಜನತಾ ಪಕ್ಷದ ಹೈಕಮಾಂಡ್ ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಟ್ಟು ಸಡಿಲಿಸದೆ ಹಠ ಹಿಡಿಯುತ್ತಿರುವ ಯಡಿಯೂರಪ್ಪ ಅವರಿಗೆ ಉನ್ನತ ಜವಾಬ್ದಾರಿಯನ್ನು ನೀಡಲು ಉದ್ದೇಶಿಸಿರುವ ಹೈಕಮಾಂಡ್ ಇದೀಗ ಈ ನಿರ್ಧಾರಕ್ಕೆ ಬಂದಿರುವುದಾಗಿ ಪಕ್ಷದ ಆಪ್ತ ಮೂಲಗಳು ಸ್ಪಷ್ಟಪಡಿಸಿವೆ.

ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳಿಂದ ಆರೋಪ ಮುಕ್ತರಾಗಿ ಹೊರಬಂದ ನಂತರವಷ್ಟೇ ಮುಖ್ಯಮಂತ್ರಿ ಸ್ಥಾನದ ಕುರಿತು ಚಿಂತನೆ ನಡೆಸಲಾಗುವುದು ಎಂದು ಹೈಕಮಾಂಡ್ ಖಡಕ್ ಹೇಳಿಕೆ ನೀಡಿದ ಬಳಿಕ ಅಸಮಾಧಾನಗೊಂಡಿರುವ ಯಡಿಯೂರಪ್ಪ ಅವರಿಗೆ ಸಮಾಧಾನವಾಗಲು ಈ ನಿರ್ಧಾರ ಕೈಗೊಳ್ಳಲಾಗುತ್ತಿರುವುದಾಗಿ ಮೂಲಗಳು ತಿಳಿಸಿವೆ.
ಇವನ್ನೂ ಓದಿ
WebduniaWebdunia