ಸರ್ವಜ್ಞ | ಪ್ರಚಲಿತ | ವಿಮಾನ ದುರಂತ | ರಾಷ್ಟ್ರೀಯ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ಎಚ್ಡಿಕೆ, ಚೆನ್ನಿಗಪ್ಪ ವಿರುದ್ಧ ಚಾರ್ಜ್‌ಶೀಟ್: ಬಂಧನ ಸಾಧ್ಯತೆ (H.D.Kumarswamy | Chargesheet | Arrest | Lokayukta Court | Chennigappa)
PR
ಅಕ್ರಮ ಡಿನೋಟಿಫಿಕೇಶನ್‌ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಿ.ಚೆನ್ನಿಗಪ್ಪ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.

ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಥಣಿಸಂದ್ರದಲ್ಲಿ 3 ಎಕರೆ 8 ಗುಂಟೆ ಜಮೀನನ್ನು ಡಿನೋಟಿಫಿಕೇಶನ್ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

ಕುಮಾರಸ್ವಾಮಿ ಹಾಗೂ ಚೆನ್ನಿಗಪ್ಪ ವಿರುದ್ಧ ಐಪಿಸಿ ಸೆಕ್ಷನ್ 182, 420,120(ಬಿ), 13(ಬಿ), 13(2)ರಡಿ ಪ್ರಕರಣ ದಾಖಲಿಸಲಾಗಿದ್ದು, 1600 ದಾಖಲೆಗಳನ್ನೊಳಗೊಂಡ 54 ಪುಟಗಳ ಆರೋಪಪಟ್ಟಿಯನ್ನು ತನಿಖಾಧಿಕಾರಿ ರವಿಶಂಕರ್ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಚಾರ್ಜ್‌ಶೀಟ್ ಸಲ್ಲಿಕೆಯ ನಂತರ ಮಾಜಿ ಕುಮಾರಸ್ವಾಮಿ ಬಂಧನದ ಭೀತಿ ಎದುರಿಸುತ್ತಿದ್ದಪ ನಿರೀಕ್ಷಣಾ ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಇವನ್ನೂ ಓದಿ
Feedback Print