WD ಮಧ್ಯಪ್ರದೇಶದ ಮಾಳ್ವಾ ಪ್ರದೇಶದಲ್ಲಿರುವ ನರ್ಮದಾ ನದಿಯ ದಂಡೆಯ ಮೇಲೆ ಕಂಗೊಳಿಸುತ್ತಿದೆ ಶ್ರೀ ಓಂಕಾರೇಶ್ವರ ಸನ್ನಿಧಿ. ಭಾರತದಲ್ಲಿರುವ 12 ಜ್ಯೋತಿರ್ಲಿಂಗಗಳಲ್ಲಿ ಒಂದಾಗಿರುವ ಇದು, ಭಕ್ತ ಜನಕೋಟಿಯನ್ನು ಕೈಬೀಸಿ ಕರೆಯುತ್ತಿದೆ.ಪುರಾಣ ಕಥೆಗಳಲ್ಲಿ ಓಂಕಾರೇಶ್ವರ ಹಾಗೂ ಮಮಲೇಶ್ವರ ಕುರಿತ ಉಲ್ಲೇಖವಿದೆ. ಭಕ್ತರು ಮಂದಿರವನ್ನು ಪ್ರವೇಶಿಸುವ ಮುಂಚೆ ಎರಡು ಮಂಟಪಗಳನ್ನು ದಾಟಿ ಸಾಗಬೇಕಾಗುತ್ತದೆ. ಓಂಕಾರೇಶ್ವರ ಜ್ಯೋತಿರ್ಲಿಂಗವು ನೆಲದ ಮೇಲೆ ಸ್ಥಾಪಿತವಾಗದೇ ನೈಸರ್ಗಿಕವಾಗಿ ಎತ್ತರದ ಸ್ಥಳದಲ್ಲಿ ನಿರ್ಮಾಣಗೊಂಡಿದೆ. WD ಜ್ಯೋತಿರ್ಲಿಂಗ ಕ್ಷೇತ್ರದ ಸುತ್ತಲೂ ಸದಾ ಸ್ಫಟಿಕದಂತೆ