ಕ್ರಿಕೆಟ್‌ ಸುದ್ದಿ | ಕ್ರಿಕೆಟಿಗರು | ಲೇಖನಗಳು | ಐಪಿಎಲ್ | ಕ್ರಿಕೆಟ್ ಟಿಕರ್ | ಅಂಕಿಅಂಶ | ಟಿ-20ವಿಶ್ವಕಪ್
ಮುಖ್ಯ ಪುಟ » ಕ್ರೀಡಾ ಜಗತ್ತು » ಕ್ರಿಕೆಟ್‌ » ಕ್ರಿಕೆಟ್‌ ಸುದ್ದಿ » ಧೋನಿ ಕೆಳ ಕ್ರಮಾಂಕದಲ್ಲಿ ಆಡುವುದೇಕೆ:ಗಂಗೂಲಿ ಪ್ರಶ್ನೆ (Sourav Ganguly | MS Dhoni | ODI series | Australia)
Feedback Print Bookmark and Share
 
ಧೋನಿ ತಂಡಕ್ಕೆ ಅಗತ್ಯವಾದಂತೆ ಎರಡನೇ ಮೂರನೇ ಕ್ರಮಾಂಕದಲ್ಲಿ ಆಡುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ ಗಂಗೂಲಿ,ಬಿರುಸಿನ ಹೊಡೆತಗಳನ್ನು ಬಾರಿಸುವ ಮಹೇಂದ್ರ ಸಿಂಗ್ ಧೋನಿ, ಸ್ವಾಭಾವಿಕ ಆಟವಾಡಬೇಕಾದ ಅಗತ್ಯವಿದೆ ಎಂದು ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಏಳು ಏಕದಿನಸರಣಿಯನ್ನು ಗೆಲ್ಲಬೇಕಾದಲ್ಲಿ ಟೀಂಇಂಡಿಯಾ ತಂಡದ ನಾಯಕ ಧೋನಿ ಮಹತ್ವದ ಪಾತ್ರ ನಿಭಾಯಿಸಬೇಕಾಗುತ್ತದೆ ಎಂದು ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ.

ಇಂಗ್ಲೆಂಡ್ ವಿರುದ್ಧ ನಡೆದ ಏಕದಿನ ಸರಣಿಯನ್ನು 6-1 ರಿಂದ ಗೆದ್ದುಕೊಂಡು ,ನಂತರ ಚಾಂಪಿಯನ್ಸ್ ಟ್ರೋಫಿಯನ್ನು ತನ್ನದಾಗಿಸಿಕೊಂಡ ಆಸ್ಟ್ರೇಲಿಯಾ ಪ್ರತಿಭಾನ್ವಿತ ಕ್ರಿಕೆಟ್‌ ಆಟಗಾರರನ್ನು ಹೊಂದಿರುವುದರಿಂದ ತಂಡ ಬಲಿಷ್ಠವಾಗಿದೆ.ಆಸ್ಟ್ರೇಲಿಯಾವನ್ನು ಎದುರಿಸಲು ತಂಡದ ಆಟಗಾರರು ಉತ್ತಮ ಪ್ರದರ್ಶನ ನೀಡುವುದು ಅಗತ್ಯವಾಗಿದೆ ಎಂದು ಸಲಹೆ ನೀಡಿದ್ದಾರೆ.

ಖಾಸಗಿ ನ್ಯೂಸ್‌ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಗಂಗೂಲಿ, ಧೋನಿ ಐದನೇ ಅಥವಾ ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡುವುದು ಉತ್ತಮವಾಗಿದೆ ಎಂದಿದ್ದಾರೆ.

ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಹಣಾಹಣಿ ಅಕ್ಟೋಬರ್ 25 ರಿಂದ ಆರಂಭವಾಗಲಿದೆ.
ಸಂಬಂಧಿತ ಮಾಹಿತಿ ಹುಡುಕಿ