ಅಗ್ರ 10ರ ಪಟ್ಟಿಗೆ ಲಗ್ಗೆಯಿಟ್ಟ ದ್ರಾವಿಡ್; ಲಕ್ಷ್ಮಣ್‌ಗೂ ಬಡ್ತಿ

ನವದೆಹಲಿ, ಶನಿವಾರ, 19 ನವೆಂಬರ್ 2011 (09:39 IST)

PTI
ಪ್ರವಾಸಿ ವೆಸ್ಟ್‌ಇಂಡೀಸ್ ವಿರುದ್ಧ ಮೊದಲೆರಡು ಪಂದ್ಯಗಳಲ್ಲಿನ ಅಮೋಘ ಪ್ರದರ್ಶನದ ನೆರವಿನಿಂದ ಭಾರತದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳಾದ ರಾಹುಲ್ ದ್ರಾವಿಡ್ ಮತ್ತು ವಿವಿಎಸ್ ಲಕ್ಷ್ಮಣ್, ನೂತನವಾಗಿ ಬಿಡುಗಡೆಗೊಂಡಿರುವ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬ್ಯಾಟಿಂಗ್ ರ‌್ಯಾಂಕಿಂಗ್‌ ಪಟ್ಟಿಯಲ್ಲಿ ಭರ್ಜರಿ ನೆಗೆತ ಕಂಡಿದ್ದಾರೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಮತ್ತೊಮ್ಮೆ ಅಗ್ರ 10ರ ಪಟ್ಟಿಗೆ ಪ್ರವೇಶಿಸುವಲ್ಲಿ 'ವಾಲ್' ಖ್ಯಾತಿಯ ದ್ರಾವಿಡ್ ಯಶಸ್ವಿಯಾಗಿದ್ದಾರೆ. ಮತ್ತೊಂದೆಡೆ ಕಲಾತ್ಮಕ ಲಕ್ಷ್ಮಣ್ 13ನೇ ಸ್ಥಾನಕ್ಕೆ ನೆಗೆತ ಕಂಡಿದ್ದಾರೆ. ವಿಂಡೀಸ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಶತಕ ಸಾಧನೆ ಮಾಡಿರುವುದೇ ಈ ಇಬ್ಬರ ಬ್ಯಾಟಿಂಗ್ ಕ್ರಮಾಂಕದಲ್ಲಿ ಏರಿಕೆಗೆ ಕಾರಣವಾಗಿದೆ.

ದ್ರಾವಿಡ್ ಆಕರ್ಷಕ 119 ರನ್ ಬಾರಿಸಿದ್ದರೆ ಲಕ್ಷ್ಮಣ್ ಅಜೇಯ 176 ರನ್ ಗಳಿಸಿದ್ದರು. ಪಂದ್ಯವನ್ನು ಇನ್ನಿಂಗ್ಸ್ ಹಾಗೂ 15 ರನ್ನುಗಳಿಂದ ಗೆದ್ದುಕೊಂಡಿತ್ತು. ಪ್ರಸ್ತುತ ದ್ರಾವಿಡ್ ಹಾಗೂ ಲಕ್ಷ್ಮಣ್ ಅನುಕ್ರಮವಾಗಿ ನಾಲ್ಕು ಹಾಗೂ ಐದು ಸ್ಥಾನಗಳ ಬಡ್ತಿ ಪಡೆದಿದ್ದಾರೆ.

ಬ್ಯಾಟಿಂಗ್ ಪಟ್ಟಿಯನ್ನು ಶ್ರೀಲಂಕಾದ ಕುಮಾರ ಸಂಗಕ್ಕರ ಮುನ್ನಡೆಸುತ್ತಿದ್ದು, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಐದನೇ ಸ್ಥಾನದಲ್ಲಿ ಸ್ಥಿರವಾಗಿದ್ದಾರೆ. ಒಟ್ಟು 796 ಪಾಯಿಂಟ್ ಹೊಂದಿರುವ ಸಚಿನ್ ಭಾರತೀಯರ ಪೈಕಿ ಶ್ರೇಷ್ಠ ರ‌್ಯಾಂಕಿಂಗ್ ಹೊಂದಿರುವ ಆಟಗಾರನಾಗಿದ್ದಾರೆ.

ಬೌಲರುಗಳ ಪೈಕಿ ಆರು ಸ್ಥಾನಗಳ ನೆಗೆತ ಕಂಡಿರುವ ಆಫ್ ಸ್ಪಿನ್ನರ್ ಪ್ರಗ್ಯಾನ್ ಓಜಾ ಜೀವನಶ್ರೇಷ್ಠ 26ನೇ ಸ್ಥಾನಕ್ಕೆ ತಲುಪಿದ್ದಾರೆ. ವಿಂಡೀಸ್ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಾಗಿ ಓಜಾ ಈಗಾಗಲೇ 13 ವಿಕೆಟುಗಳನ್ನು ಕಬಳಿಸಿದ್ದಾರೆ.

ಈ ವಿಭಾಗವನ್ನು ದಕ್ಷಿಣ ಆಫ್ರಿಕಾದ ಡೇಲ್ ಸ್ಟೈನ್ (902) ಮುನ್ನಡೆಸುತ್ತಿದ್ದು ಅಗ್ರ 10ರ ಪಟ್ಟಿಯಲ್ಲಿರುವ ಭಾರತದ ಏಕೈಕ ಬೌಲರ್ ಜಹೀರ್ ಖಾನ್ ಆರನೇ ಸ್ಥಾನದಲ್ಲಿದ್ದಾರೆ. ಅಗ್ರ 20ರೊಳಗಿರುವ ಭಾರತದ ಇಶಾಂತ್ ಶರ್ಮಾ 17ನೇ ಸ್ಥಾನದಲ್ಲಿದ್ದಾರೆ.

ವೆಬ್‌ದುನಿಯಾ ಕನ್ನಡ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!



ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

ಭಾರತೀಯ ಹಾಕಿ ತಂಡ ಯೂರೋಪ್‌‌ಗೆ ತೆರಳಲು ಸಜ್ಜಾಗಿದೆ

ನವದೆಹಲಿ :ಮುಂದಿ ದಿನಗಳಲ್ಲಿ ನಡೆಯಲಿರುವ ಹಾಕಿ ವಿಶ್ವ ಕಪ್‌‌ಗಾಗಿ ಸಿದ್ದತೆ ನಡೆಸುತ್ತಿರುವ ಇಂಡಿಯನ್‌ ...

ಧೋನಿ ಹೇಳಿಕೆ ಪರಿಶೀಲಿಸಲು ಅವಕಾಶ ಕೋರಿ ಸುಪ್ರೀಂಕೋರ್ಟ್‌ಗೆ ಬಿಸಿಸಿಐ ಅರ್ಜಿ

ನವದೆಹಲಿ: ಐಪಿಎಲ್ ಬೆಟ್ಟಿಂಗ್ ಮತ್ತು ಫಿಕ್ಸಿಂಗ್ ಹಗರಣದ ತನಿಖೆ ನಡೆಸುತ್ತಿರುವ ಮುದ್ಗಲ್ ಸಮಿತಿಯ ಮುಂದೆ ...

ಟೆನಿಸ್‌‌‌ ಶ್ರೇಯಾಂಕ: ಭಾರತೀಯರ ಶ್ರೇಯಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ

ನವದೆಹಲಿ : ಭಾರತದ ಡೆವಿಸ್‌‌‌‌ಕಪ್‌ನಲ್ಲಿ ಸೋಮದೇವ್ ದೇವವರ್ಮನ್ ಕೊರಿಯಾ ವಿರುದ್ದ ಗೆಲುವನ್ನು ಸಾಧಿಸುವುದರ ...

ಯುವಿಯನ್ನು ಸಮರ್ಥಿಸಿಕೊಂಡು ಸಚಿನ್ ಬ್ಯಾಟಿಂಗ್

ನವದೆಹಲಿ: ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಯುವರಾಜ್ ಸಿಂಗ್ ಅವರನ್ನು ಸಮರ್ಥಿಸಿಕೊಂಡು ಸಚಿನ್ ತೆಂಡೂಲ್ಕರ್ ...

Widgets Magazine