ಥಾಯ್ಲೆಂಡ್‌ನಲ್ಲಿ ನಡೆಯುತ್ತಿರುವ ಮಹಿಳಾ ಏಷ್ಯಾ ಕಪ್ ಹಾಕಿ ಟೂರ್ನಮೆಂಟ್‌ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಭಾರತೀಯ ತಂಡ ಸೆಮಿಫೈನಲ್‌ಗೆ ಪ್ರವೇಶಿಸಿದ್ದು, ಫೈನಲ್‌ನತ್ತ ದಿಟ್ಟ ಹೆಜ್ಜೆಯನ್ನಿಟ್ಟಿದೆ.
ಭಾರತ ಶುಕ್ರವಾರ ನಡೆಯುವ ದಕ್ಷಿಣ ಕೊರಿಯಾ ವಿರುದ್ಧದ ಪಂದ್ಯದಲ್ಲಿ ಜಯಗಳಿಸಲು ಸಫಲವಾದರೆ ಮುಂದಿನ ವರ್ಷ ನಡೆಯಲಿರುವ ವಿಶ್ವಕಪ್‌ಗೆ ನೇರ ಅರ್ಹತೆಯನ್ನು ಪಡೆಯಲಿದೆ. ಇದರೊಂದಿಗೆ ಕಳೆದ ಬಾರಿಯ ವಿಶ್ವಕಪ್‌ನಲ್ಲಿ ದಕ್ಷಿಣ ಕೊರಿಯಾ ವಿರುದ್ಧ ಸೆಮಿಯಲ್ಲಿ ಎದುರಾದ ಸೋಲಿಗೆ ಸೇಡು ತಿರಿಸಿಕೊಳ್ಳಬಹುದಾಗಿದೆ.
ಕಳೆದ ಬಾರಿ ಹಾಂಕಾಂಗ್‌ನಲ್ಲಿ ನಡೆದ ವಿಶ್ವಕಪ್‌ನಲ್ಲಿ ಭಾರತೀಯ ಮಹಿಳಾ ಪಡೆ 2-5 ಗೋಲುಗಳ ಅಂತರದಿಂದ ದಕ್ಷಿಣ ಕೊರಿಯಾ ವಿರುದ್ಧ ಮಣಿದಿತ್ತು.
ಆದರೆ ಪ್ರಸಕ್ತ ಟೂರ್ನಿಯಲ್ಲಿನ ಉತ್ತಮ ಪ್ರದರ್ಶನ ನೀಡುತ್ತಿರುವ ಭಾರತೀಯರು ಸೆಮಿಯಲ್ಲಿ ಮೇಲುಗೈ ಸಾಧಿಸುವ ಹಂಬಲದಲ್ಲಿದೆ.