ಗುಣವರ್ಧನ ಶೆಟ್ಟಿ PTI ಇರಾಕ್ನಲ್ಲಿ ಸರ್ವಾಧಿಕಾರಿಯಂತೆ ಮೆರೆದ ಮಾಜಿ ಅಧ್ಯಕ್ಷ ಸದ್ದಾಂ ಹುಸೇನ್ ಅವರನ್ನು ಗಲ್ಲಿಗೇರಿಸಿದ ಬಳಿಕ ಭುಗಿಲೆದ್ದಿರುವ ಹಿಂಸಾಚಾರ, ಭಾರತೀಯ ಸಂಜಾತೆ ಅಮೆರಿಕದ ಬಾಹ್ಯಾಕಾಶ ಯಾನಿ ಸುನೀತಾ ವಿಲಿಯಮ್ಸ್ ಅಭೂತಪೂರ್ವ ಸಾಧನೆ, ಶ್ರೀಲಂಕಾ ವಾಯುಪಡೆಯ ಬಾಂಬ್ ದಾಳಿಯಿಂದ ಎಲ್ಟಿಟಿಇಯ ನಾಯಕ ತಮಿಳು ಸೆಲ್ವನ್ ನಿಧನದ ಬಳಿಕ ಎಲ್ಟಿಟಿಇಗೆ ತೀವ್ರ ಹಿನ್ನಡೆ, ಜಾಗತಿಕ ತಾಪಮಾನದ ಬದಲಾವಣೆ ಕುರಿತು ಇಂಡೋನೇಶಿಯ ಬಾಲಿಯ ಹವಾಮಾನ ಸಮಾವೇಶದಲ್ಲಿ ವ್ಯಕ್ತವಾದ ಕಳವಳ, ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ