ನರೇಂದ್ರ ಮೋದಿ ಸುಳ್ಳುಗಾರ, ಬೇಜವಾಬ್ದಾರಿ ವ್ಯಕ್ತಿ: ತರುಣ್ ಗೊಗೈ

ಶುಕ್ರವಾರ, 14 ಮಾರ್ಚ್ 2014 (15:42 IST)

PR
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಎರಡಪ ಸಾರ್ವಜನಿಕ ಸಭೆಗಳಲ್ಲಿ ಸುಳ್ಳು ಹೇಳಿಕೆಗಳನ್ನು ಬೇಜವಾಬ್ದಾರಿಯಾಗಿ ವರ್ತಿಸಿದ್ದಾರೆ ಎಂದು ಆಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೈ ಆರೋಪಿಸಿದ್ದಾರೆ.

ಇಂದು ನರೇಂದ್ರ ಮೋದಿಯವರ ಗುಟ್ಟು ರಟ್ಟು ಮಾಡುವಂತಹ ಸುವರ್ಣಾವಕಾಶ ಒದಗಿ ಬಂದಿದೆ. ಮೋದಿಯೊಬ್ಬ ಸಾಮಾನ್ಯ ಮನುಷ್ಯ. ಇಂತಹ ಬೇಜವಾಬ್ದಾರಿ ವ್ಯಕ್ತಿಯನ್ನು ನಾನು ಯಾವತ್ತೂ ನೋಡಿಲ್ಲ. ಇಂತಹ ವ್ಯಕ್ತಿ ದೇಶದ ಪ್ರಧಾನಿಯಾಗಲು ಬಯಸುತ್ತಾನೆ ಎಂದು ಲೇವಡಿ ಮಾಡಿದ್ದಾರೆ.

ಮೋದಿ ಮೊಸಳೆ ಕಣ್ಣೀರು ಹರಿಸುತ್ತಿದ್ದಾರೆ. ಕೆಲ ತಿಂಗಳುಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವುದರಿಂದ ಅವರಿಗೆ ಆಸ್ಸಾಂ ರಾಜ್ಯದ ನೆನಪಾಗಿದೆ. ರಾಜ್ಯದಿಂದ ಹೊರ ಹೊದ ನಂತರ ಆಸ್ಸಾಂ ರಾಜ್ಯವನ್ನು ಮರೆತುಬಿಡುತ್ತಾರೆ. ವಾಜಪೇಯಿ ಅಧಿಕಾರದಲ್ಲಿದ್ದಾಗ ಕೂಡಾ ಆಸ್ಸಾಂ ರಾಜ್ಯಕ್ಕೆ ಯಾವುದೇ ಕೊಡುಗೆ ನೀಡಿರಲಿಲ್ಲ ಎಂದು ಕಿಡಿಕಾರಿದ್ದಾರೆ.

ನರೇಂದ್ರ ಮೋದಿ ಮಹಾತ್ಮಾ ಗಾಂಧಿಯನ್ನು ಹತ್ಯೆ ಮಾಡಿದ ಆರೆಸ್ಸೆಸ್ ಸಿದ್ಧಾಂತಕ್ಕೆ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದಲ್ಲದೇ ಆ ಸಂಸ್ಥೆಗೆ ಬದ್ದರಾಗಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...