ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು, ಗುರುವಾರ, 7 ಫೆಬ್ರವರಿ 2019 (09:06 IST)

ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


 
ಮೇಷ: ವಿದ್ಯಾರ್ಥಿಗಳಿಗೆ ಯಶಸ್ಸು ಸಿಗುವುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಹುದ್ದೆ ಸಿಗುವುದಷ್ಟೇ. ಉತ್ತಮ ದಿನಗಳಿಗಾಗಿ ಕಾಯಬೇಕಾಗುತ್ತದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮಾಡಿಕೊಳ್ಳಬೇಡಿ. ಖರ್ಚು ವೆಚ್ಚದ ಬಗ್ಗೆ ಹಿಡಿತ ಅಗತ್ಯ.
 
ವೃಷಭ: ಉದ್ಯೋಗದಲ್ಲಿ ನಿರೀಕ್ಷಿತ ಮುನ್ನಡೆ ಸಿಕ್ಕಿ ನಿಮ್ಮ ಸ್ಥಾನ ಮಾನಗಳು ಉತ್ತಮವಾಗುತ್ತದೆ. ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಶುಭ ಮಂಗಲ ಕಾರ್ಯಗಳನ್ನು ನೆರವೇರಿಸಲು ಓಡಾಟ ನಡೆಸುವಿರಿ.
 
ಮಿಥುನ: ಆರೋಗ್ಯದಲ್ಲಿ ಸಮಸ್ಯೆ ಕಂಡುಬರುವುದು. ಸಂಗಾತಿಯೊಂದಿಗೆ ಮನಸ್ತಾಪ ಮಾಡಿಕೊಳ್ಳುವಿರಿ. ಹಣಕಾಸಿನ ಲೆಕ್ಕಾಚಾರದಲ್ಲಿ ಎಚ್ಚರಿಕೆ ಅಗತ್ಯ. ಉದ್ಯೋಗದಲ್ಲಿ ಯಶಸ್ಸು ಸಿಗುವುದು.
 
ಕರ್ಕಟಕ: ಹೊಸ ವ್ಯವಹಾರಗಳಿಗೆ ಕೈ ಹಾಕಿದರೆ ಲಾಭ ಪಡೆಯುವಿರಿ. ಉದ್ಯಮಿಗಳಿಗೆ ಶುಭ ದಿನ. ಮನೆಯಲ್ಲಿ ಕಾರ್ಯಕ್ರಮವೊಂದನ್ನು ನೆರವೇರಿಸಲು ಓಡಾಡುವಿರಿ. ಶಿಕ್ಷಣ ವೃತ್ತಿಯಲ್ಲಿರುವವರಿಗೆ, ವಿದ್ಯಾರ್ಥಿಗಳಿಗೆ ಒಳಿತಾಗುವುದು.
 
ಸಿಂಹ: ಕಾರ್ಯ ಕ್ಷೇತ್ರದಲ್ಲಿ ಓಡಾಟ ಹೆಚ್ಚಿ ದೇಹಾಯಾಸವಾಗುವುದು. ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ. ಧನಾಗಮನವಾಗಿ ಆರ್ಥಿಕ ಲಾಭ ಗಳಿಸುವಿರಿ. ಆದರೆ ಯಾವುದೋ ಬೇಡದ ಆಲೋಚನೆಗಳಿಂದ ಮನಸ್ಸು ಕ್ಲೇಶಕ್ಕೊಳಗಾಗುವುದು.
 
ಕನ್ಯಾ: ವೃತ್ತಿ ರಂಗದಲ್ಲಿ ಸಹೋದ್ಯೋಗಿಗಳೊಂದಿಗೆ ಸ್ಪರ್ಧೆ ಎದುರಿಸಬೇಕಾದೀತು. ಹಾಗಿದ್ದರೂ ಜಯ ನಿಮ್ಮದೇ. ವಾಹನ ಖರೀದಿಗೆ ಇಂದು ಯೋಗ್ಯ ದಿನವಲ್ಲ. ಚಾಲನೆಯಲ್ಲೂ ಎಚ್ಚರಿಕೆ ಅಗತ್ಯ. ಕುಟುಂಬದಲ್ಲಿ ನೆಮ್ಮದಿ ಸಿಗಲಿದೆ.
 
ತುಲಾ: ದೇವರ ಆಶೀರ್ವಾದದಿಂದ ನೀವು ಅಂದುಕೊಂಡ ಕಾರ್ಯಗಳು ನೆರವೇರುವುದು. ಉದ್ಯೋಗದಲ್ಲಿ ಮುನ್ನಡೆ ಸಿಗುವುದು. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವುದು.
 
ವೃಶ್ಚಿಕ: ಮಾನಸಿಕ ಕೊರಗು ಕಾಡುವುದು. ಇದರಿಂದ ಮನೆಯಲ್ಲೂ ಭಿನ್ನಾಬಿಪ್ರಾಯಗಳು ಮೂಡಿ ನೆಮ್ಮದಿ ಕಳೆದುಕೊಳ್ಳುವಿರಿ. ತಾಳ್ಮೆಯಿಂದ ನಿಭಾಯಿಸಿದರೆ ಮುಂದೊಂದು ದಿನ ಶುಭ ಫಲ ಸಿಗುವುದು. ಆಶಾವಾದಿಯಾಗಿರಿ.
 
ಧನು: ಕೈಗೊಂಡ ಕಾರ್ಯಗಳಿಗೆ ಕೆಲವು ವಿಘ್ನಗಳು ಎದುರಾಗಿ ವಿಳಂಬವಾಗುವುದು. ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿ. ವೃತ್ತಿಯಲ್ಲಿ ಮುನ್ನಡೆ ಗಳಿಸಿ ನಿಧಾನವಾಗಿ ಚೇತರಿಕೆ ಕಾಣುವಿರಿ. ವಿದ್ಯಾರ್ಥಿಗಳಿಗೆ ಪ್ರಯತ್ನ ಬಲ ಅಗತ್ಯ.
 
ಮಕರ: ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗುವುದು. ಆರೋಗ್ಯ ಹದಗೆಡುವ ಸಾಧ್ಯತೆಯಿದೆ. ಆದರೆ ಧನಾಗಮನ ಉತ್ತಮವಾಗಿದ್ದು, ಮನೆಗೆ ಬೇಕಾದ ವಸ್ತುಗಳನ್ನು ಖರೀದಿಸುವಿರಿ. ಆಸ್ತಿ ವ್ಯವಹಾರಗಳಿಗೆ ಕೈ ಹಾಕದೇ ಇರುವುದು ಒಳ್ಳೆಯದು.
 
ಕುಂಭ: ನಿಮ್ಮದೇ ಸ್ವಯಂಕೃತ ಅಪರಾಧಗಳಿಂದ ಕೆಲಸಗಳು ವಿಳಂಬವಾಗುವುದು. ದೂರ ಸಂಚಾರ ಮಾಡಬೇಕಾಗಿ ಬರುತ್ತದೆ. ವಿದ್ಯಾರ್ಥಿಗಳಿಗೆ ವಿದೇಶ ಪ್ರಯಾಣ ಯೋಗವಿದೆ. ಆದರೆ ಕಾರ್ಯದಲ್ಲಿ ವಿಘ್ನ ಎದುರಾಗಿ ತಾಳ್ಮೆ ಕಳೆದುಕೊಳ್ಳುವಿರಿ.
 
ಮೀನ: ಸಮಾಜದಲ್ಲಿ ನಿಮ್ಮ ಸ್ಥಾನ ಮಾನ ಹೆಚ್ಚುವುದು. ನಿಮ್ಮ ಕೆಲಸಗಳು ಜನಪ್ರಿಯವಾಗಿ ಗೌರವ ಸಂಪಾದಿಸಲಿದ್ದೀರಿ. ಆರೋಗ್ಯದ ಸಮಸ್ಯೆ ಕಾಡೀತು, ಎಚ್ಚರಿಕೆ ಅಗತ್ಯ. ಉದ್ಯೋಗದಲ್ಲೂ ನಿರೀಕ್ಷಿತ ಮುನ್ನಡೆ ಇದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.        ಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಿಮ್ಮ ವೃತ್ತಿ ಬದುಕಿನ ಭವಿಷ್ಯ ಹೀಗಿರುತ್ತದೆ

ಬೆಂಗಳೂರು: ವೃತ್ತಿ ಬದುಕಿನಲ್ಲಿ ಯಶಸ್ಸು ಕಾಣಬೇಕೆಂಬುದು ಎಲ್ಲರ ಕನಸು. ನಮ್ಮ ಜನ್ಮ ದಿನಾಂಕಕ್ಕೆ ...

news

ಜನ್ಮ ದಿನಾಂಕಕ್ಕೆ ಅನುಗುಣವಾಗಿ ಈ ವರ್ಷ ನಿಮ್ಮ ಭವಿಷ್ಯ ಹೇಗಿರುತ್ತದೆ ಗೊತ್ತಾ?

ಬೆಂಗಳೂರು: ಜನ್ಮ ದಿನಾಂಕಕ್ಕೆ ಅನುಗುಣವಾಗಿ ಒಬ್ಬೊಬ್ಬರಿಗೆ ಅದೃಷ್ಟ ಸಂಖ್ಯೆ ಎಂದಿರುತ್ತದೆ. ಆಯಾ ಜನ್ಮ ...

news

ಶನಿವಾರ ಜನಿಸಿದವರು ಈ ಉದ್ಯೋಗ ಮಾಡಿದರೆ ಯಶಸ್ಸು ಖಂಡಿತಾ

ಬೆಂಗಳೂರು: ನಿಮ್ಮ ಜನ್ಮ ದಿನಕ್ಕೆ ಅನುಗುಣವಾಗಿ ಯಾವ ಉದ್ಯೋಗ ಮಾಡಿದರೆ ನಿಮಗೆ ಯಶಸ್ಸು ಸಿಗುತ್ತದೆ ನೋಡೋಣ. ...

news

ಧನು ರಾಶಿಯವರು ಯಾವ ರಾಶಿಯವರನ್ನು ಮದುವೆಯಾಗುವುದು ಸೂಕ್ತ?

ಬೆಂಗಳೂರು: ಮದುವೆ ಸ್ವರ್ಗದಲ್ಲೇ ನಿಶ್ಚಯವಾಗಿರುತ್ತದೆ ಎಂಬ ಮಾತಿದೆ. ಅದೇನೇ ಇದ್ದರೂ ಒಂದೊಂದು ರಾಶಿಗೆ ...