ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಖರ್ಚು ವೆಚ್ಚಗಳು ಅಧಿಕವಾಗುವುದು. ದೂರ ಪ್ರಯಾಣದ ಯೋಗವಿದ್ದು, ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಉದ್ಯೋಗದಲ್ಲಿ ಕಾರ್ಯದೊತ್ತಡವಿರುವುದು. ಹಿರಿಯ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಬೇಡಿ.ವೃಷಭ: ಶತ್ರುಭಯವಿದ್ದರೂ ನಿಮ್ಮ ಆತ್ಮಸ್ಥೈರ್ಯದಿಂದ ಸವಾಲುಗಳನ್ನು ಎದುರಿಸುವಿರಿ. ಸಂಕಷ್ಟದ ಸಮಯದಲ್ಲಿ ಬಂಧು ಮಿತ್ರರ ಸಹಕಾರ ಸಿಗಲಿದೆ. ಆರ್ಥಿಕವಾಗಿ ಸಾಕಷ್ಟು ಲಾಭ ಗಳಿಸುವಿರಿ.ಮಿಥುನ: ಧನಾಗಮನವಿದ್ದಷ್ಟೇ ಖರ್ಚು ವೆಚ್ಚಗಳೂ ಅಧಿಕವಾಗುವುದು. ವಿದ್ಯಾರ್ಥಿಗಳಿಗೆ ತೀವ್ರ ಪ್ರಯತ್ನ ಬಲ ಅಗತ್ಯ. ತಾಳ್ಮೆಯಿಂದ