ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು, ಶನಿವಾರ, 16 ಫೆಬ್ರವರಿ 2019 (08:49 IST)

ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


 
ಮೇಷ: ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಕಾರ್ಯಗಳಲ್ಲಿ ಪ್ರಗತಿ ಕಾಣುವುದು. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ. ವಿದ್ಯಾರ್ಥಿಗಳಿಗೆ ಪ್ರಯತ್ನ ಬಲ ಅಗತ್ಯ.
 
ವೃಷಭ: ಮಹಿಳೆಯರಿಗೆ ಇಂದು ಅಂದುಕೊಂಡ ಕಾರ್ಯಗಳು ನೆರವೇರಿ ಶುಭದಿನವಾಗುವುದು. ಹೊಸ ವ್ಯವಹಾರಗಳಿಗೆ ಕೈ ಹಾಕಿದರೆ ಲಾಭ ಗಳಿಸುವಿರಿ. ನಿರುದ್ಯೋಗಿಗಳಿಗೆ ಸೂಕ್ತ ಉದ್ಯೋಗಕ್ಕಾಗಿ ಕೆಲವು ದಿನ ಕಾಯಬೇಕಾದೀತು.
 
ಮಿಥುನ: ಆರೋಗ್ಯದಲ್ಲಿ ಏರುಪೇರಾಗುವುದು. ಅವಿವಾಹಿತರಿಗೆ ಮನಸ್ಸಿಗೆ ಹಿಡಿಸುವ ಸಂಬಂಧಗಳು ಕೂಡಿಬರುವುದು. ದೂರ ಸಂಚಾರ ಯೋಗವಿದ್ದು, ಎಚ್ಚರಿಕೆ ಅಗತ್ಯ.  ಅನಿರೀಕ್ಷಿತವಾಗಿ ಬರುವ ಅತಿಥಿಗಳಿಂದ ಸಂತಸ.
 
ಕರ್ಕಟಕ: ಸಾಮಾಜಿಕ ಕಾರ್ಯಗಳಿಂದ ಮನ್ನಣೆ, ಗೌರವ ಸಿಗುವುದು. ನಿರುದ್ಯೋಗಿಗಳಿಗೆ ಹೊಸ ಉದ್ಯೋಗ ಅವಕಾಶಗಳು ಲಭಿಸಲಿವೆ. ವಾಹನ ಖರೀದಿ ಯೋಗವಿದೆ. ಆರ್ಥಿಕವಾಗಿ ಚೇತರಿಕೆ ಕಾಣುವಿರಿ.
 
ಸಿಂಹ: ಆದಾಯವಿದ್ದಷ್ಟೇ ಖರ್ಚುಗಳೂ ಅಧಿಕವಾಗಲಿದೆ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರುವುದು. ಸಂಗಾತಿಯ ಮಾತಿಗೆ ಕಿವಿಗೊಡಬೇಕಾದೀತು. ಮಕ್ಕಳಿಂದ ಸಂತಸ.
 
ಕನ್ಯಾ: ಮಕ್ಕಳಾಗದ ದಂಪತಿಗೆ ಆಶಾಕಿರಣವೊಂದು ಮೂಡಲಿದೆ. ನವದಂಪತಿಗಳಿಗೆ ಮಧುಚಂದ್ರ ಭಾಗ್ಯ. ನೌಕರಿಯಲ್ಲಿ ಬಡ್ತಿ, ವೇತನ ಹೆಚ್ಚಳದಂತಹ ಮುನ್ನಡೆ ಕಾಣಲಿದ್ದೀರಿ. ಮಕ್ಕಳೊಂದಿಗೆ ಸಂತಸದ ಕ್ಷಣ ಕಳೆಯುವಿರಿ.
 
ತುಲಾ: ಕಚೇರಿಯಲ್ಲಿ ಮೇಲಧಿಕಾರಿಗಳ ಕಿರಿ ಕಿರಿಯಿಂದ ಮನಸ್ಸಿಗೆ ಬೇಸರವಾಗುವುದು. ಕಾರ್ಯದೊತ್ತಡದಿಂದ ದೇಹಾಯಾಸವಾಗಲಿದೆ. ಮನೆಯಲ್ಲಿ ಶುಭ ಕಾರ್ಯಗಳನ್ನು ನೆರವೇರಿಸಲು ಚಿಂತನೆ ಮಾಡುವಿರಿ. ತಾಳ್ಮೆ ಅಗತ್ಯ.
 
ವೃಶ್ಚಿಕ: ಮಾನಸಿಕ ತುಮುಲಗಳು ನಿಮ್ಮನ್ನು ಕಾಡುವುದರಿಂದ ನಿರ್ಧಾರ ತೆಗೆದುಕೊಳ್ಳುವಲ್ಲಿ ಸೋಲುವಿರಿ. ಹಿರಿಯರ ಅಭಿಪ್ರಾಯಗಳಿಗೆ ಕಿವಿಗೊಡಿ. ಹಣಕಾಸಿನ ಮುಗ್ಗಟ್ಟು ಎದುರಾಗಿ ಆತಂಕ ಎದುರಿಸುವಿರಿ. ದೇವತಾ ಪ್ರಾರ್ಥನೆ ಮಾಡಿ.
 
ಧನು: ವಿದ್ಯಾರ್ಥಿಗಳಿಗೆ ತೀವ್ರ ಪ್ರಯತ್ನ ಅಗತ್ಯ. ಅನಿರೀಕ್ಷಿತವಾಗಿ ಅಂದುಕೊಂಡ ಕಾರ್ಯ ನೆರವೇರಲು ಸಹಾಯಹಸ್ತ ಸಿಗುವುದು. ಅವಿವಾಹಿತರು ಕೊಂಚ ದಿನ ಕಾಯಬೇಕು. ಸಂಗಾತಿಯೊಂದಿಗೆ ಮನಸ್ತಾಪ ಬೇಡ.
 
ಮಕರ: ಕುಟುಂಬದಲ್ಲಿ ನೀವು ಕೈಗೊಂಡ ಕಾರ್ಯದಿಂದ ನಿಮ್ಮ ಸ್ಥಾನ ಮಾನ ಹೆಚ್ಚುವುದು. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಸಿಗಲಿದೆ. ಸಹೋದರರ ವಿವಾಹ ಸಂಬಂಧಿತ ಕಾರ್ಯಗಳಿಗೆ ಓಡಾಟ ನಡೆಸುವಿರಿ.
 
ಕುಂಭ: ಕಚೇರಿಯಲ್ಲಿ ಮೇಲಧಿಕಾರಿಗಳಿಂದ ಕಿರಿ ಕಿರಿ ಇದ್ದರೂ ನಿಮ್ಮ ಕಾರ್ಯ ನೆರವೇರಿಸಲು ತೊಂದರೆಯಾಗದು. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ತಲೆದೋರುವುದು. ವ್ಯಾಪಾರ ವ್ಯವಹಾರದಲ್ಲಿ ತೊಡಗಿಸಿಕೊಂಡರೆ ಲಾಭ ಗಳಿಸುವಿರಿ.
 
ಮೀನ: ಕೂಡಿಟ್ಟ ಸಂಪತ್ತನ್ನು ಕಾಪಾಡುವ ಚಿಂತೆ ಕಾಡಲಿದೆ. ಹೊಸ ಕೆಲಸಗಳಿಗೆ ಕೈ ಹಾಕಿದರೆ ವಿಘ್ನಗಳು ಎದುರಾದೀತು. ಕುಲದೇವರಿಗೆ ಸಂಬಂಧಿಸಿದ ಹರಕೆ ತೀರಿಸುವಿರಿ. ತಾಳ್ಮೆಯಿಂದ ನಡೆದುಕೊಳ್ಳುವುದು ಮುಖ್ಯ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ಅಕಾಲಿಕ ರೋಗ, ಮೃತ್ಯುಭಯ ಹೋಗಲಾಡಿಸಲು ಈ ಹೋಮ ಮಾಡಬೇಕು

ಬೆಂಗಳೂರು: ವೈದಿಕ ಗ್ರಂಥಗಳ ಪ್ರಕಾರ, ಮೃತ್ಯುಂಜಯ ಹೋಮ ಜೀವನದಲ್ಲಿ ಅಪಾಯಗಳನ್ನು ಕಡಿಮೆ ಮಾಡುವ ಮೂಲಕ ...

news

ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಿಮ್ಮ ವೃತ್ತಿ ಬದುಕಿನ ಭವಿಷ್ಯ ಹೀಗಿರುತ್ತದೆ

ಬೆಂಗಳೂರು: ವೃತ್ತಿ ಬದುಕಿನಲ್ಲಿ ಯಶಸ್ಸು ಕಾಣಬೇಕೆಂಬುದು ಎಲ್ಲರ ಕನಸು. ನಮ್ಮ ಜನ್ಮ ದಿನಾಂಕಕ್ಕೆ ...

news

ಜನ್ಮ ದಿನಾಂಕಕ್ಕೆ ಅನುಗುಣವಾಗಿ ಈ ವರ್ಷ ನಿಮ್ಮ ಭವಿಷ್ಯ ಹೇಗಿರುತ್ತದೆ ಗೊತ್ತಾ?

ಬೆಂಗಳೂರು: ಜನ್ಮ ದಿನಾಂಕಕ್ಕೆ ಅನುಗುಣವಾಗಿ ಒಬ್ಬೊಬ್ಬರಿಗೆ ಅದೃಷ್ಟ ಸಂಖ್ಯೆ ಎಂದಿರುತ್ತದೆ. ಆಯಾ ಜನ್ಮ ...

news

ನಿಮ್ಮ ರಾಶಿಗೆ ಅನುಗುಣವಾಗಿ ನಿಮ್ಮ ಉತ್ತಮ ಮತ್ತು ಕೆಟ್ಟ ಸ್ವಭಾವಗಳು ಹೀಗಿರುತ್ತವೆ!

ಬೆಂಗಳೂರು: ಒಂದೊಂದು ರಾಶಿಯವರ ಗುಣ ಸ್ವಭಾವ ಒಂದೊಂದು ರೀತಿಯಿರುತ್ತದೆ. ದಿನಕ್ಕೊಂದು ರಾಶಿಯವರ ಗುಣ ಮತ್ತು ...