ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು, ಸೋಮವಾರ, 29 ಏಪ್ರಿಲ್ 2019 (08:07 IST)

ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 


ಮೇಷ: ಕಾರ್ಯದೊತ್ತಡ ಅಧಿಕವಾಗಿರುತ್ತದೆ. ಆದರೆ ಕೈಗೊಂಡ ಕೆಲಸಗಳಲ್ಲಿ ಜಯ ನಿಶ್ಚಿತ. ಆರ್ಥಿಕವಾಗಿ ಬಾಕಿ ಹಣ ಸಂದಾಯದ ಚಿಂತೆ ಕಾಡುವುದು. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಆರೋಗ್ಯ ಕಾಪಾಡಿ.
 
ವೃಷಭ: ಅನಿರೀಕ್ಷಿತವಾಗಿ ಖರ್ಚು ವೆಚ್ಚಗಳು ತಲೆದೋರಲಿವೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವುದು. ವ್ಯಾಪಾರ, ವ್ಯವಹಾರಗಳಲ್ಲಿ ನಿರೀಕ್ಷಿತ ಜಯ ಸಿಗುವುದು. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.
 
ಮಿಥುನ: ಕೆಲಸ ಕಾರ್ಯಗಳು ವಿಳಂಬಗತಿಯಲ್ಲಿ ಸಾಗಲಿವೆ. ವೈವಾಹಿಕ ಪ್ರಸ್ತಾಪಗಳಿಗೆ ಕೆಲವು ಅಡೆತಡೆಗಳು ತೋರಿಬಂದೀತು. ಮಿತ್ರರೊಂದಿಗೆ ಪ್ರವಾಸ ಕೈಗೊಳ್ಳುವಿರಿ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.
 
ಕರ್ಕಟಕ: ಉದ್ಯೋಗ ನಿಮಿತ್ತ ವಿದೇಶ ಪ್ರಯಾಣ ಯೋಗವಿದೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಆಸ್ತಿ ಸಂಬಂಧಿತ ವ್ಯವಹಾರಗಳನ್ನು ಕೆಲವು ದಿನಗಳ ಮಟ್ಟಿಗೆ ಮುಂದೂಡುವುದು ಒಳ್ಳೆಯದು. ಆರ್ಥಿಕವಾಗಿ ಸಮಾಧಾನಕರ ದಿನ.
 
ಸಿಂಹ: ಆರೋಗ್ಯ ಕೈಕೊಟ್ಟು ಆಸ್ಪತ್ರೆಗೆ ಅಲೆದಾಡಬೇಕಾದೀತು. ಆರ್ಥಿಕ ವ್ಯವಹಾರದಲ್ಲಿ ಚೇತರಿಕೆ ಕಂಡುಬರುವುದು. ಧನಾಗಮನಕ್ಕೆ ಕೊರತೆಯಾಗದು. ಸಂಗಾತಿಯೊಂದಿಗೆ ಮನಸ್ತಾಪ ಮಾಡಿಕೊಳ್ಳುವಿರಿ.
 
 
ಕನ್ಯಾ: ಮಾತಿನ ಜಾಣ್ಮೆಯಿಂದ ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಹಿತ ಶತ್ರುಗಳ ಬಗ್ಗೆ ಎಚ್ಚರಿಕೆ ಅಗತ್ಯ. ಪ್ರೇಮಿಗಳಿಗೆ ಮನೆಯವರಿಂದ ವಿರೋಧ ವ್ಯಕ್ತವಾಗುವುದು. ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು.
 
ತುಲಾ: ಸಕಾಲದಲ್ಲಿ ಆರ್ಥಿಕ ನೆರವು ದೊರೆಯುವುದರಿಂದ ಕೈಗೊಂಡ ಕಾರ್ಯಗಳನ್ನು ಸಫಲರಾಗಿ ನೆರವೇರಿಸುವಿರಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ಸಿಗುವುದು. ಆರೋಗ್ಯ ಭಾಗ್ಯ ಸುಧಾರಿಸುವುದು.
 
ವೃಶ್ಚಿಕ: ನಿಮ್ಮ ದುಡುಕು ವರ್ತನೆಯಿಂದ ವಾದ ವಿವಾದಕ್ಕೀಡಾಗುವಿರಿ. ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ಮಿತಿಯಿರಲಿ. ಇತರರೊಂದಿಗೆ ಸ್ಪರ್ಧೆಗಿಳಿಯುವ ಮನೋಭಾವದಿಂದ ನಷ್ಟ ಅನುಭವಿಸಬೇಕಾದೀತು. ಎಚ್ಚರಿಕೆ ಅಗತ್ಯ.
 
ಧನು: ಕಾರ್ಯ ಕ್ಷೇತ್ರದಲ್ಲಿ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಹಿಡಿತಬೇಕು. ಸಂಗಾತಿಯ ಮಾತುಗಳಿಗೆ ಕಿವಿಗೊಡಿ. ಆರೋಗ್ಯದ ಬಗ್ಗೆ ಉದಾಸೀನತೆ ಬೇಡ. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ ಮಾಡುವಿರಿ.
 
ಮಕರ: ನಿರುದ್ಯೋಗಿಗಳಿಗೆ ಉದ್ಯೋಗಕ್ಕಾಗಿ ನಾನಾ ಅವಕಾಶಗಳು ತೆರೆದುಕೊಳ್ಳಲಿವೆ. ಉಪಯೋಗಿಸುವ ಜಾಣ್ಮೆ ಬೇಕಷ್ಟೇ. ನೂತನ ವ್ಯವಹಾರಗಳಿಂದ ಲಾಭ ಸಿಗುವುದು. ದೇಹಾರೋಗ್ಯಕ್ಕಾಗಿ ಧನವಿನಿಯೋಗ ಮಾಡಬೇಕಾಗುತ್ತದೆ.
 
ಕುಂಭ: ದಾಯಾದಿಗಳಿಂದ ವಂಚನೆಗೊಳಗಾಗುವ ಭೀತಿಯಿದ್ದು ಎಚ್ಚರಿಕೆ ಅಗತ್ಯ. ಧನಾಗಮನವಿದ್ದಷ್ಟೇ ಖರ್ಚು ವೆಚ್ಚಗಳೂ ಇರುವುದು. ಕಾರ್ಯದೊತ್ತಡದಿಂದ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಮಾಡಬೇಡಿ.
 
ಮೀನ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಓಡಾಟ ನಡೆಸಬೇಕಾಗುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲಿದೆ. ಇಷ್ಟಮಿತ್ರರೊಂದಿಗೆ ಪ್ರವಾಸ ತೆರಳುವಿರಿ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ                  ಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ದೀಪದ ಬತ್ತಿಯಿಂದ ಯಾವ ರಾಶಿಯವರಿಗೆ ಯಾವ ದೋಷ ನಿವಾರಣೆಯಾಗುತ್ತದೆ?

ಬೆಂಗಳೂರು: ದೀಪ ಎನ್ನುವುದು ಜೀವನದಲ್ಲಿ ಕತ್ತಲೆಯನ್ನು ನಾಶ ಮಾಡಿ ಬೆಳಕು ಒದಗಿಸುವುದು. ದೇವರಿಗೆ ದೀಪ ...

news

ಗುರು ಗ್ರಹದ ಪ್ರಭಾವ ಹೆಚ್ಚಿದ್ದರೆ ಯಾವ ಪೂಜೆ ಮಾಡಬೇಕು?

ಬೆಂಗಳೂರು: ಹೆಚ್ಚಿನವರು ಗುರು ದೋಷದಿಂದ ನಾನಾ ಸಮಸ್ಯೆಗಳನ್ನು ಎದುರಿಸುತ್ತಾರೆ. ಹಾಗಿದ್ದರೆ ಈ ಗ್ರಹದ ...

news

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

news

ಗೃಹಿಣಿಯರು ಪಾಕೆಟ್ ಮನಿ ಮಾಡಿಕೊಳ್ಳಲು ಇಲ್ಲಿದೆ ಟಿಪ್ಸ್!

ಬೆಂಗಳೂರು: ಉದ್ಯೋಗಕ್ಕೆ ಹೋಗದ ಗೃಹಿಣಿಯರಿಗೆ ಕೈಯಲ್ಲಿ ಕಾಸು ಕೂಡಿಡುವ ಚಿಂತೆ ಇದ್ದೇ ಇರುತ್ತದೆ. ಗಂಡ ...